ಮಲ್ಪೆ: ಯುವಕ ನಾಪತ್ತೆ

ಉಡುಪಿ: ಮಲ್ಪೆಯ ಬೋಟ್‌ನಲ್ಲಿ ಮೀನು ಖಾಲಿ ಮಾಡುವ ಕೆಲಸ ಮಾಡಿಕೊಂಡಿದ್ದ ಕೊಪ್ಪಳ ಜಿಲ್ಲೆಯ ಕನಕಪ್ಪ(20) ಎಂಬವರು ನ.23ರಂದು ಸಂಜೆ ಊರಿಗೆ ಹೋಗುವುವುದಾಗಿ ಹೇಳಿ ಮಲ್ಪೆಯ ಬಾಡಿಗೆ ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ:ರಾಷ್ಟ್ರೀಯ ಹೆದ್ದಾರಿ ನಿರ್ವಹಣೆಯನ್ನು ಕಾಲಕಾಲಕ್ಕೆ ನಿರ್ವಹಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ:ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ರಸ್ತೆಯ ನಿರ್ವಹಣೆಯನ್ನು ಕಾಲಕಾಲಕ್ಕೆ ಮಾಡಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಗುತ್ತಿಗೆದಾರರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಳೆಯಿಂದಾಗಿ ಉಂಟಾದ ಹೊಂಡ ಗುಂಡಿಗಳನ್ನು ದುರಸ್ಥಿ ಮಾಡುವ ಬಗ್ಗೆ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ […]
ಉಡುಪಿ:ಚಾರ ಬಸದಿ ಸ್ವಚ್ಛತಾ ಕಾರ್ಯಕ್ರಮ

ಉಡುಪಿ: ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಘಟಕ, ಪ್ರೌಚ್ಯ ತೌಳವ ಕರ್ಣಾಟ : ಕುಕ್ಕೆ ಶ್ರೀ ನಿಕೇತನ ಸಂಗ್ರಹಾಲಯ ಮತ್ತು ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠ ಮೂಡಬಿದರೆ, ಜೈನ ಮಠ ಪ್ರಾಚ್ಯ ಸಂಚಯ ಸಂಶೋಧನ ಕೇಂದ್ರ ಉಡುಪಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ರಿಯ ಚಾರದ ಪ್ರಾಚೀನ ಐತಿಹಾಸಿಕ ಬಸದಿಯ ಸ್ವಚ್ಛತಾ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಮೂಡಬಿದರೆಯ ಜೈನ ಮಠದ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಸ್ವಾಮೀಜಿಯವರು […]
ಐಪಿಎಲ್(IPL) 2025 ರ ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳ ವಿವರ ಹೀಗಿವೆ ನೋಡಿ

ಜೆಡ್ಡಾ: ಎರಡು ದಿನಗಳ ಕಾಲ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ಎಲ್ಲಾ ಹತ್ತು ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ಖರೀದಿಸಿ ತಮ್ಮ ತಂಡಗಳನ್ನು ಭದ್ರಗೊಳಿಸಿವೆ. ರಿಷಭ್ ಪಂತ್, ಶ್ರೇಯಸ್ ಅಯ್ಯರ್ ಅವರು ಭಾರಿ ಬೆಲೆ ಪಡೆದರೆ, ಮಯಾಂಕ್ ಅಗರ್ವಾಲ್, ಡೇವಿಡ್ ವಾರ್ನರ್ ಮುಂತಾದವರು ಬಿಕರಿಯಾಗದೆ ನಿರಾಸೆ ಅನುಭವಿಸಿದರು. ಎರಡು ದಿನದ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ: ಚೆನ್ನೈ ಸೂಪರ್ ಕಿಂಗ್ಸ್ ರುತುರಾಜ್ ಗಾಯಕ್ವಾಡ್, ಮಥೀಶ ಪತಿರಾನ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ […]
ಕಟಪಾಡಿ: ಮಟ್ಟು ಗುಳ್ಳ, ಶಂಕರಪುರ ಮಲ್ಲಿಗೆಯ ಶಾಶ್ವತ ಚಿತ್ರ ಸಹಿತ ಅಂಚೆ ಮೊಹರು ಅನಾವರಣ

ಉಡುಪಿ: ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ವತಿಯಿಂದ ಭಾರತೀಯ ಸಂವಿಧಾನದ ಅಮೃತೋತ್ಸವದ ಅಂಗವಾಗಿ ಕಟಪಾಡಿ ಮತ್ತು ಶಂಕರಪುರ ಉಪ ಅಂಚೆ ಕಚೇರಿಗಳಲ್ಲಿ ಕ್ರಮವಾಗಿ ತುಳುನಾಡಿನ ಜನಪ್ರಿಯ ವಸ್ತು ಗಳಾದ ಮಟ್ಟು ಗುಳ್ಳ ಮತ್ತು ಶಂಕರಪುರ ಮಲ್ಲಿಗೆ ಗಳ ಶಾಶ್ವತ ಚಿತ್ರಾತ್ಮಕ ರದ್ದತಿ (permanent pictorial cancellation) ಅಂಚೆ ಮೊಹರನ್ನು ವಿದ್ಯುಕ್ತವಾಗಿ ಅನಾವರಣಗೊಳಿಸಲಾಯಿತು. ಸಮಾರಂಭದಲ್ಲಿ ಉಡುಪಿಯ ಅಂಚೆ ಅಧೀಕ್ಷಕ ರಮೇಶ್ ಪ್ರಭು, ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ ವಿಠ್ಠಲ ಭಟ್, ದಯಾನಂದ ದೇವಾಡಿಗ, ವಸಂತ, ಶಂಕರ ಲಮಾಣಿ,ಉಪ […]