ಬಂಟ್ವಾಳ : ಸುರಭಿ ವೈಷ್ಣವಿ ಗೋ ಮಂದಿರದಲ್ಲಿ ಪುಟಾಣಿ ಶಿವಾoಶ್ ಹುಟ್ಟು ಹಬ್ಬದ ಸಂಭ್ರಮ

ಬಂಟ್ವಾಳ : ಈಗಿನ ಕಾಲಘಟ್ಟದಲ್ಲಿ ಹುಟ್ಟುಹಬ್ಬದ ದಿನವನ್ನು ಪಾಶ್ಚಾತ್ಯ ರೀತಿಯಲ್ಲಿ ಆಚರಿಸುತ್ತಿರುವವರ ಮಧ್ಯೆ ವಿಶೇಷವಾಗಿ ಗೋಶಾಲೆ (ಗೋಮಂದಿರ)ದಲ್ಲಿ ಹುಟ್ಟು ಹಬ್ಬವನ್ನು ಆಚರಿಸಿ ಅಭಿನ್ ರೈ ಹಾಗೂ ಸುಪ್ರೀಯ ರೈ ದಂಪತಿಗಳು ಹಿಂದೂ ಸಮಾಜಕ್ಕೆ ಮಾದರಿಯಾಗಿದ್ದಾರೆ. ಹೌದು ಅಭಿನ್ ರೈ ಹಾಗೂ ಸುಪ್ರೀಯ ರೈ ದಂಪತಿಗಳ ಪುತ್ರ ಶಿವಾಂಶ್ ಇವರ ಎರಡನೇ ವರ್ಷದ ಜನ್ಮದಿನಾಚರಣೆಯನ್ನು ಆ.22 ರಂದು ಬೆಂಜನಪದವು ರಾಮನಗರದಲ್ಲಿರುವ ಸುರಭಿ ವೈಷ್ಣವಿ ಗೋ ಮಂದಿರದಲ್ಲಿ ವಿಜೃಂಭಣೆಯಿಂದ ನಡೆಯಿತು. ಸತ್ಸಂಗ, ದೇಶಿಗೋವುದಾನ, ಗೋವುಗಳಿಗೆ ಆರತಿ ಬೆಳಗಿ ಅವಲಕ್ಕಿ, ಬೆಲ್ಲ, […]
ಉಡುಪಿ: ಆ. 25ರಂದು ಗುರು ಸಂದೇಶ ಸಾಮರಸ್ಯ ಜಾಥ

ಉಡುಪಿ: ನಾರಾಯಣಗುರುಗಳ 170ನೇ ಜನ್ಮದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ವತಿಯಿಂದ ಗುರು ಸಂದೇಶ ಸಾಮರಸ್ಯ ಜಾಥವನ್ನು ಇದೇ ಆ. 25ರಂದು ಉಡುಪಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ ಪ್ರವೀಣ್ ಎಮ್.ಪೂಜಾರಿ ಹೇಳಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 2 ಗಂಟೆಗೆ ಬನ್ನಂಜೆ ನಾರಾಯಣಗುರು ಮಂದಿರದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ, ಮಾಜಿ ಶಾಸಕ ಕೆ ರಘುಪತಿ ಭಟ್, ಸಮಾಜ ಸೇವಕರಾದ ನಿತ್ಯಾನಂದ […]
ಕೋಟ: ಕೌಟುಂಬಿಕ ಕಲಹ; ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ಉಡುಪಿ: ಪತಿಯೋರ್ವ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಇಂದು ಮುಂಜಾನೆ ಕೋಟ ಸಮೀಪದ ಸಾಲಿಗ್ರಾಮ ಕಾರ್ಕಡ ಎಂಬಲ್ಲಿ ನಡೆದಿದೆ. ಜಯಶ್ರೀ (28) ಕೊಲೆಯಾದ ಪತ್ನಿ, ಕಿರಣ್ ಉಪಾಧ್ಯ (30) ಪತಿ ಕೊಲೆ ಆರೋಪಿ. ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ಜೋಡಿ ವಾಸವಾಗಿದ್ದರು ಎನ್ನಲಾಗಿದೆ. ಜೋಡಿಗೆ ಒಂಭತ್ತು ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.ಘಟನೆಯ ಕುರಿತು ಕೋಟ ಪೊಲೀಸರು ವಿವರ ಸಂಗ್ರಹಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಏಕಬಳಕೆ ಪ್ಲಾಸ್ಟಿಕ್ ನಿಷೇಧದ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ

ಉಡುಪಿ: ನಗರಸಭೆಯ ವ್ಯಾಪ್ತಿಯಲ್ಲಿ ಏಕಬಳಕೆಯ ಪ್ಲಾಸ್ಟಿಕ್ ನಿಷೇಧದ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿಪಾಲಿಸುವಂತೆ ಸರಕಾರ ಆದೇಶಿಸಿದ್ದು, ಏಕ ಬಳಕೆಯ ಪ್ಲಾಸ್ಟಿಕ್‌ನ್ನು ಕಟ್ಟುನಿಟ್ಟಾಗಿ ನಿಷೇಧಿಸುವ ಸಲುವಾಗಿ ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳ ಮಾರಾಟದ ಮೇಲೆ ಮೊದಲು 500 ರೂ. ದಂಡ ಹಾಗೂ 2ನೇ ಬಾರಿಗೆ 1000 ರೂ ದಂಡ ವಿಧಿಸಲಾಗುವುದು. ಆ ನಂತರವೂಪ್ಲಾಸ್ಟಿಕ್ ಮಾರಾಟ ಕಂಡು ಬಂದಲ್ಲಿ ಅಂತಹ ಉದ್ದಿಮೆಯ ಪರವಾನಿಗೆಯನ್ನು ರದ್ದುಪಡಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ನಿಷೇಧಿತ ಪ್ಲಾಸ್ಟಿಕ್‌ನ್ನು ಅಕ್ರಮವಾಗಿ ದಾಸ್ತಾನು ಪಡಿಸಿದ್ದಲ್ಲಿ 1 ಕೆ.ಜಿ ವರೆಗಿನ ಪ್ಲಾಸ್ಟಿಕ್ ತ್ಯಾಜ್ಯಕ್ಕೆ […]
ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನಾ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಮಹಿಳೆಯರು/ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 21 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಹಾಗೂ […]