ಲೋಕಸೇವಾ ಆಯೋಗದ ಪರೀಕ್ಷೆಯನ್ನು ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿ ನಡೆಸಿ :ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಕರ್ನಾಟಕ ಲೋಕಸೇವಾ ಆಯೋಗದವತಿಯಿಂದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಆಗಸ್ಟ್ 27 ರಂದು ನಡೆಯುವ ಪೂರ್ವಭಾವಿ ಪರೀಕ್ಷೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿಪರೀಕ್ಷೆಯನ್ನು ನಡೆಸಲು ಮುಂದಾಗಬೇಕು ಎಂದುಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ […]

ಮಣಿಪಾಲ MSDCಯಲ್ಲಿ “ಇಂಡಸ್ಟ್ರಿಯಲ್ ಆಟೊಮೇಷನ್” ಕುರಿತು ಅಲ್ಪಾವಧಿ ಕೋರ್ಸ್.

ಮಣಿಪಾಲ: ಭಾರತ ಸರ್ಕಾರ NSDC ಅಡಿಯಲ್ಲಿ ಅನುಮೋದಿತಕೊಂಡ ಮಣಿಪಾಲ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್(MSDC) (ಡಾ. ಟಿ.ಎಂ.ಎ. ಪೈ ಫೌಂಡೇಶನ್‌ನ ಒಂದು ಘಟಕ) ನಲ್ಲಿ ಇಂಡಸ್ಟ್ರಿಯಲ್ ಆಟೊಮೇಷನ್ ಕುರಿತು ಅಲ್ಪಾವಧಿಯ ತರಬೇತಿ ಕಾರ್ಯಕ್ರಮ (STTP)ಗಳನ್ನು ಆಯೋಜಿಸಿದೆ. ಈ ಕಾರ್ಯಕ್ರಮವು ಸಮಗ್ರ ಜ್ಞಾನವನ್ನು ಪಡೆಯಲು ಮತ್ತು ಕೈಗಾರಿಕಾ ಆಟೊಮೇಷನ್ ಕ್ಷೇತ್ರದಲ್ಲಿ ಕೌಶಲ್ಯಗಳನ್ನು ಬಲಪಡಿಸಲು ಒಂದು ಅನನ್ಯ ಅವಕಾಶವನ್ನು ನೀಡುತ್ತದೆ. ಈ ಕೋರ್ಸ್ ಅನ್ನು ಅಕಾಡೆಮಿಕ್, ಕೆಲಸ ಮಾಡುವ ವೃತ್ತಿಪರರು ಮತ್ತು ಆಟೋಮ್ಯಾಟನ್ ಕ್ಷೇತ್ರದಲ್ಲಿ ತಮ್ಮ ವೃತ್ತಿಪರ ವೃತ್ತಿಜೀವನವನ್ನು ನಿರ್ಮಿಸಲು ಆಸಕ್ತಿ […]

ಕುಂದಾಪುರ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ.

ಕುಂದಾಪುರ: ತಲ್ಲೂರು ಗ್ರಾಮದ ಸುರೇಶ (65) ಅವರು ಸಾರ್ವಜನಿಕ ಬಾವಿಗೆ ಹಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅವರು ಕಾಯಿಲೆಯಿಂದ ಬಳಲುತ್ತಿದ್ದು, ಜೀವನದಲ್ಲಿ ಜುಗುಪ್ಸೆಗೊಂಡು ಈ ಕೃತ್ಯ ಎಸಗಿದ್ದಾಗಿ ಅವರ ಪತ್ನಿ ದೇವಕಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಸೆಪ್ಟೆಂಬರ್ 1 ರಿಂದ ರಾಜ್ಯದಲ್ಲಿ ಮದ್ಯದ ದರ ಇಳಿಕೆ..!

ಬೆಂಗಳೂರು: ಎಣ್ಣೆ ಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿ ಸೆಪ್ಟೆಂಬರ್ 1 ರಿಂದ ದುಬಾರಿ ಮದ್ಯವನ್ನು ಅಗ್ಗದ ದರದಲ್ಲಿ ನೀಡಲು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಅಬಕಾರಿ ಆದಾಯ ಹೆಚ್ಚಿಸಲು ಮದ್ಯದ ದರ ಇಳಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಸೆಪ್ಟೆಂಬರ್ 1 ರಿಂದ ರಾಜ್ಯದಲ್ಲಿ ಮದ್ಯದ ದರ ಇಳಿಕೆಯಾಗಲಿದೆ. ದರ ಇಳಿಕೆ ಮಾಡುವಂತೆ ಅಬಕಾರಿ ಇಲಾಖೆಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಜುಲೈ1 ರಿಂದ ಮದ್ಯ ದರ ಇಳಿಕೆಗೆ ಅಬಕಾರಿ ಇಲಾಖೆ ಮುಂದಾಗಿತ್ತು. ಆದ್ರೆ […]

ಕಂಚಿನಡ್ಕ ಟೋಲ್ ಗೇಟ್ ರದ್ದು: ಲೋಕೋಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ

ಉಡುಪಿ: ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಗೇಟ್ ಅನ್ನು ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಲೋಕೋಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಇಂದು ಭೇಟಿಯಾಗಿ, ಮನವಿ ಸಲ್ಲಿಸಿತ್ತು. ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಗೇಟ್ ಅನ್ನು ರದ್ದುಪಡಿಸಲಾಗುವುದು ಎಂದು ಭರವಸೆ ನೀಡಿದರು. ನಿಯೋಗದಲ್ಲಿ ಉಡುಪಿ ಜಿಲ್ಲಾ‌ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಮುನಿಯಾಲು ಉದಯಕುಮಾರ್ […]