ಉಡುಪಿ: ಚಲಿಸುತ್ತಿದ್ದ ಬಸ್ಸಿನಲ್ಲೇ ವಿದ್ಯಾರ್ಥಿನಿ ಅಸ್ವಸ್ಥ; ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ಕೊಡಿಸಿದ ಚಾಲಕ

ಉಡುಪಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಬಸ್ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಮತ್ತೊಂದು ಘಟನೆ ಗುರುವಾರ ಬೆಳಗ್ಗೆ ಉಡುಪಿಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಮಂಗಳೂರಿನಿಂದ ಮಣಿಪಾಲಕ್ಕೆ ಹೊರಟಿದ್ದ ಎಕೆಎಂ ಎಸ್ ಬಸ್ಸಿಗೆ ಮೂಲ್ಕಿಯಲ್ಲಿ ವಿದ್ಯಾರ್ಥಿನಿ ಯೊಬ್ಬಳು ಉಡುಪಿಗೆ ತೆರಳಲು ಹತ್ತಿದ್ದಾಳೆ. ಆದರೆ ಕಟಪಾಡಿ ದಾಟಿ ಉದ್ಯಾವರ ಸಮೀಪಿಸುತ್ತಿದ್ದಂತೆ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದಳು. ಬಸ್ಸಿನ ಚಾಲಕ ನಸೀಫ್ ಹಾಗೂ ನಿರ್ವಾಹಕ ಮೋಹಿತ್ ಕೂಡಲೇ ಬಸ್ಸನ್ನು ಉಡುಪಿಯ ಟಿ.ಎಂ.ಎ . […]
ಆ.29-30ರಂದು ಉಡುಪಿಯಲ್ಲಿ ಭಾರತ ಕಟ್ಟಡ ನಿರ್ಮಾಣ ಕಾರ್ಮಿಕರ ಒಕ್ಕೂಟದ 70 ನೇ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆ

ಉಡುಪಿ: ಕಟ್ಟಡ ಕಾರ್ಮಿಕರ ಪರಿಸ್ಥಿತಿ, ಈಗಿರುವ ಕಾನೂನುಗಳ ರಕ್ಷಣೆ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿ ಉಳಿಸುವುದು ಹಾಗೂ ಅಲ್ಲಿ ದೊರಕುವ ಸೌಲಭ್ಯಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಚರ್ಚಿಸಲು ಸಿಡಬ್ಯೂಎಫ್ಐ ( ಭಾರತ ಕಟ್ಟಡ ನಿರ್ಮಾಣ ಕಾರ್ಮಿಕರ ಒಕ್ಕೂಟ) ಇದರ 70 ನೇ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆ ಇದೇ ಆಗಸ್ಟ್ 29 ಮತ್ತು 30ರಂದು ಉಡುಪಿಯ ಲಿಕೋ ಬ್ಯಾಂಕ್ ನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹೇಳಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ […]
ಉಡುಪಿ: ಆ.26ರಂದು ಸುವರ್ಣ ಕರ್ನಾಟಕ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ನಮ್ಮ ತುಳುವೆರ್ ಕಲಾ ಸಂಘಟನೆ ಮುದ್ರಾಡಿ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ “ಸುವರ್ಣ ಕರ್ನಾಟಕ ರಂಗ ಅಭಿಯಾನ ಹಾಗೂ ಸುವರ್ಣ ಕರ್ನಾಟಕ ಪ್ರಶಸ್ತಿ ಪ್ರದಾನ” ಸಮಾರಂಭವನ್ನು ಇದೇ ಆ.26ರಂದು ಸಂಜೆ 6.30 ಕ್ಕೆ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ನಮ್ಮ ತುಳುವೆರ್ ಕಲಾ ಸಂಘಟನೆಯ ಅಧ್ಯಕ್ಷ ಸುಕುಮಾರ್ ಮೋಹನ್ ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ವಿಮರ್ಶಕ […]
ಆ.24 ರಂದು ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಗೇಟ್ ವಿರುದ್ಧ ಬೃಹತ್ ಪ್ರತಿಭಟನೆ

ಉಡುಪಿ: ಪಡುಬಿದ್ರಿ- ಕಾರ್ಕಳ ರಾಜ್ಯ ಹೆದ್ದಾರಿ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಗೇಟ್ ವಿರುದ್ಧ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಇದೇ ಆ.24ರಂದು ಬೆಳಿಗ್ಗೆ 9.30ಕ್ಕೆ ಪಡುಬಿದ್ರೆ ಸಮೀಪದ ಕಂಚಿನಡ್ಕದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟ ಸಮಿತಿಯ ಅಧ್ಯಕ್ಷ ಸುಹಾಸ್ ಹೆಗ್ಡೆ ನಂದಳಿಕೆ ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹೆದ್ದಾರಿಯಲ್ಲಿ ಕಳೆದ 11 ವರ್ಷದ ಹಿಂದೆ ರಾಜ್ಯ ಸರಕಾರದ ನಿಧಿಯಿಂದ 61 ಕೋಟಿ ರೂ […]
ಉದ್ಘಾಟನೆ ಭಾಗ್ಯವಿಲ್ಲದೆ ಅನಾಥ ಸ್ಥಿತಿಯಲ್ಲಿದೆ ಬೀಡಿನಗುಡ್ಡೆಯ ಅನಿಲ ಚಿತಾಗಾರ.!

ಉಡುಪಿ: ನಗರದ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿ ಬಳಿ ಉಡುಪಿ ನಗರಸಭೆ ಒಂದು ಕೋಟಿಗೂ ಅಧಿಕ ವೆಚ್ಚದಲ್ಲಿ ಪರಿಸರ ಸ್ನೇಹಿಯಾಗಿರುವ ಅನಿಲ ಚಿತಾಗಾರವನ್ನು ನಿರ್ಮಿಸಿದೆ. ಸಿದ್ಧಗೊಂಡು ಹಲವು ಸಮಯ ಕಳೆದರೂ ಅನಿಲ ಚಿತಾಗಾರವು ಇನ್ನೂ ಉದ್ಘಾಟನೆ ಭಾಗ್ಯ ಪಡೆಯದೆ ಅನಾಥ ಸ್ಥಿತಿಯಲ್ಲಿದ್ದು, ತಕ್ಷಣ ಲೋಕಾರ್ಪಣೆಗೊಳಿಸುವಂತೆ ಸಾರ್ವಜನಿಕ ವಲಯದಿಂದ ಆಗ್ರಹ ಕೇಳಿಬಂದಿದೆ. ತಂತ್ರಜ್ಞಾನ ಮುಂದುವರಿದರೂ ಇನ್ನೂ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿಯಲ್ಲಿ ಕಟ್ಟಿಗೆಗಳನ್ನು ಬಳಸಿಕೊಂಡು ಸಾಂಪ್ರದಾಯಿಕ ಪದ್ಧತಿಯಂತೆ ಅಂತ್ಯಸಂಸ್ಕಾರಗಳು ನಡೆಯುತ್ತಿವೆ. ಈ ಪದ್ಧತಿಯಿಂದ ಮರಗಳ ವಿನಾಶ ಹಾಗೂ ಶವ ದಹನದಿಂದಾಗುವ ಹೊಗೆ, […]