ತ್ರಿಶಾ ಕ್ಲಾಸಸ್ : ಸಿಎ ಫೌಂಡೇಶನ್ ಮಾಹಿತಿ ಕಾರ್ಯಾಗಾರ

ಕಟಪಾಡಿ : ತ್ರಿಶಾ ಕ್ಲಾಸಸ್ ವತಿಯಿಂದ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜೆಂಟ್ ನ ಎಪಿಜೆ ಸಭಾಂಗಣದಲ್ಲಿ ಸಿಎ ಫೌಂಡೇಶನ್ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ ಜೂನ್ 19ರಂದು ನಡೆಸಲಾಯಿತು. ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದ ತ್ರಿಶಾ ಸಂಸ್ಥೆಯ ಅಧ್ಯಕ್ಷರಾದ ಸಿಎ ಗೋಪಾಲಕೃಷ್ಣ ಭಟ್ ಅವರು ಮಾತಾಡಿ ಸತತ ಪ್ರಯತ್ನ ಮಾತ್ರ ಗೆಲುವಿನ ಗುರಿಯನ್ನು ತಲುಪಿಸುತ್ತದೆ. ಕಠಿಣ ನಿರ್ಧಾರಗಳು, ದೃಢ ವಿಶ್ವಾಸದ ಛಲ ಇದ್ದಾಗ ಮಾತ್ರ ವಿದ್ಯಾರ್ಥಿ ತಾನು ಅಂದುಕೊಂಡ ಗುರಿಯ ಕಡೆಗೆ ಸಾಗಬಹುದು. ಕೌಶಲ್ಯ […]
ಹೆಬ್ರಿ: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು.

ಹೆಬ್ರಿ, ಜೂ.18: ಅಕಸ್ಮಿಕವಾಗಿ ಅಡಿಕೆ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಬ್ಬಿನಾಲೆ ಗ್ರಾಮದ ಸಲ್ಲಾಬಿ ದೇವರಗುಂಡಿ ಎಂಬಲ್ಲಿ ಜೂ.17ರಂದು ನಡೆದಿದೆ. ಮೃತರನ್ನು ವಾಸು(59) ಎಂದು ಗುರುತಿಸಲಾಗಿದೆ. ಅಡಿಕೆ ಗಿಡಕ್ಕೆ ಮದ್ದನ್ನು ಹೊಡೆಯುವ ಕೃಷಿ ಕೂಲಿ ಕೆಲಸ ಮಾಡಿ ಕೊಂಡಿದ್ದ ಇವರು, ದೇವರಗುಂಡಿಯ ಗೋಪಾಲ ಎಂಬವರ ಅಡಿಕೆ ತೋಟದಲ್ಲಿ ಅಡಿಕೆ ಮರವನ್ನು ಹತ್ತಿ ಕೊಟ್ಟೆಮಣಿ ಮೇಲೆ ಕುಳಿತುಕೊಂಡು ಮದ್ದನ್ನು ಹೊಡೆಯುತ್ತಿದ್ದರು. ಈ ವೇಳೆ ರಕ್ತದೊತ್ತಡದಿಂದ ಅವರು ಆಕಸ್ಮಿಕವಾಗಿ ಅಡಿಕೆ ಮರದಿಂದ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. […]
ರಾಜ್ಯ ಕೈಗಾರಿಕೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿ ನೀಡಲು ಮುಂದಾದ ಕಾರ್ಮಿಕ ಇಲಾಖೆಯ ಕ್ರಮ ಸ್ವಾಗತಾರ್ಹ.

ಬೆಂಗಳೂರು: ರಾಜ್ಯದ ಕೈಗಾರಿಕೆಗಳ ‘ಸಿ’ ಮತ್ತು ‘ಡಿ’ ಗ್ರೂಪ್ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇಕಡ 100ರಷ್ಟು ಮೀಸಲಾತಿ ನೀಡಲು ಮುಂದಾಗಿರುವ ಕಾರ್ಮಿಕ ಇಲಾಖೆ ಕ್ರಮ ಸ್ವಾಗತಾರ್ಹ. ಆದರೆ, ನಿರುದ್ಯೋಗಿ ಕನ್ನಡಿಗರನ್ನು ಗುರುತಿಸಿ, ನೇಮಕಾತಿಗೆ ಅಗತ್ಯ ಪ್ರಮಾಣಪತ್ರ ನೀಡುವ ಕೆಲಸ ಆಗಬೇಕು ಎಂದು ನಟಿ ಪೂಜಾ ಗಾಂಧಿ ಹೇಳಿದ್ದಾರೆ. ಸಿ’ ಮತ್ತು ‘ಡಿ’ ಗ್ರೂಪ್‌ನ ಹುದ್ದೆಗಳಿಗೆ ಕನ್ನಡಿಗರನ್ನು ನೇಮಕ ಮಾಡಿಕೊಳ್ಳಲು ತೊಡಕುಗಳಿಲ್ಲದಿದ್ದರೂ, ಕಂಪನಿಗಳಿಗೆ ನೇಮಕಾತಿ ಪ್ರಕ್ರಿಯೆ ಸುಲಭವಾಗುವಂತೆ ಉದ್ಯೋಗಾಕಾಂಕ್ಷಿ ಕನ್ನಡಿಗರ ಪ್ರತ್ಯೇಕ ಪೋರ್ಟಲ್ ತೆರೆಯಬೇಕು. ಕನ್ನಡಿಗ ನಿರುದ್ಯೋಗಿ ಯುವಕ-ಯುವತಿಯರಿಗೆ ಕರುನಾಡಿಗರೆಂಬ […]
ಬಾರ್ಕೂರು ನ್ಯಾಷನಲ್ ಕೈಗಾರಿಕಾ ತರಬೇತಿ ಸಂಸ್ಥೆಗೆ ಹಳೆ ವಿದ್ಯಾರ್ಥಿ ಭಾಸ್ಕರ್ ಭೇಟಿ: ವಿದ್ಯಾರ್ಥಿಗಳಿಗೆ ವಿದೇಶಿ ಉದ್ಯೋಗದ ಕುರಿತು ಮಾರ್ಗದರ್ಶನ.

ಬ್ರಹ್ಮಾವರ: ದಿ ಬಾರ್ಕೂರು ಎಜ್ಯುಕೇಶನಲ್ ಸೊಸೈಟಿ (ರಿ) ಇದರ ಆಡಳಿತಕ್ಕೊಳಪಟ್ಟ ನ್ಯಾಷನಲ್ ಕೈಗಾರಿಕಾ ತರಬೇತಿ ಸಂಸ್ಥೆಯ ಎಂ.ಎಂ. ವಿ. ವಿಭಾಗದ ಹಳೆ ವಿದ್ಯಾರ್ಥಿಯಾದ ಭಾಸ್ಕರ್ ಇವರು ಸೌದಿ ಅರೇಬಿಯಾದಲ್ಲಿ ಪ್ರಸಿದ್ಧ ಕಾರು ತಯಾರಿಕಾ ಕಂಪನಿಯ ಉದ್ಯೋಗಿಯಾಗಿದ್ದು, ಇವರು ತಾನು ಕಲಿತ ಬಾರ್ಕೂರು ನ್ಯಾಷನಲ್ ಕೈಗಾರಿಕಾ ತರಬೇತಿ ಸಂಸ್ಥೆಗೆ ಭೇಟಿ ನೀಡಿ, ವಿಧ್ಯಾರ್ಥಿಗಳಿಗೆ ವಿದೇಶದಲ್ಲಿ ಉದ್ಯೋಗ ಪಡೆಯುವ ಬಗ್ಗೆ ವಿಶೇಷ ಮಾಹಿತಿ ನೀಡಿದರು.
ಉಡುಪಿ: ಹೆಜಮಾಡಿ ಬಂದರು ಕಾಮಗಾರಿ ಶೇ.60ರಷ್ಟು ಪೂರ್ಣಗೊಂಡಿದೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದಲ್ಲಿರುವ ಹೆಜಮಾಡಿ ಬಂದರು ಕಾಮಗಾರಿ ಶೇ.60ರಷ್ಟು ಪೂರ್ಣಗೊಂಡಿದೆ. ಹೆಜಮಾಡಿ ಬಂದರು ಅಭಿವೃದ್ಧಿಗೆ 188 ಕೋಟಿ ರೂ.ಅನುದಾನ ಮಂಜೂರಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಬಂದರಿನ ಭೂಸ್ವಾಧೀನ ಪ್ರಕ್ರಿಯೆ ಕುರಿತ ಸಮಾಲೋಚನಾ ಸಭೆಗೆ ತಿಳಿಸಲಾಯಿತು.ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಹೆಜಮಾಡಿ ಬಂದರು ಭೂಸ್ವಾಧೀನ ಪ್ರಕ್ರಿಯೆಗೆ ಇರುವ ಸಮಸ್ಯೆಗಳ ಕುರಿತು ಇಲಾಖಾಧಿಕಾರಿಗಳು ಸಂಸದರಿಗೆ ವಿವರಿಸಿದರು. ಬಂದರಿನ ಭೂ ಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದ ಕಡತಗಳು ಆರ್ಥಿಕ ಇಲಾಖೆಯಲ್ಲಿ […]