ಪುತ್ತಿಗೆ ಮಠಾಧೀಶರ ಆಶೀರ್ವಾದ ಪಡೆದ ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ಕರ್ನಾಟಕ ಸರಕಾರದ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಡಾ.ತಲ್ಲೂರು ಶಿವರಾಮ ಶೆಟ್ಟಿಯವರು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಗೀತಾ ಮಂದಿರದಲ್ಲಿ ಪಡೆದುಕೊಂಡರು. ಮಠದ ಶ್ರೀ ರಮೇಶ್ ಭಟ್, ಶ್ರೀ ಪಾಡಿಗಾರು ಲಕ್ಷ್ಮೀ ನಾರಾಯಣ ಉಪಾಧ್ಯ, ಹಾಗೂ ಶ್ರೀ ಸುಬ್ರಹ್ಮಣ್ಯ ಬೈಪಡಿತ್ತಾಯ ಉಪಸ್ಥಿತರಿದ್ದರು.

ಬಂಟಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ “ಹೊಸಬೆಳಕು” ವೃದ್ಧಾಶ್ರಮಕ್ಕೆ ಭೇಟಿ.

ಉಡುಪಿ: ಬಂಟಕಲ್‍ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ “ಆಸರೆ” ಕೌಸೆಲಿಂಗ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಕಾರ್ಕಳ ರಂಗನಪಲ್ಕೆ ಯಲ್ಲಿರುವ “ಹೊಸಬೆಳಕು” ಹಿರಿಯರ ಆಶ್ರಮಕ್ಕೆ ಜೂನ್ 12ರಂದು ಸಂಸ್ಥೆಯ ವಿದ್ಯಾರ್ಥಿಗಳು ಭೇಟಿ ನೀಡಿದರು. ವಿದ್ಯಾರ್ಥಿಗಳು ಹಿರಿಯರೊಂದಿಗೆ ಸಂವಾದ ನಡೆಸಿ ಅವರ ಜೀವನದ ಸಮಸ್ಯೆಗಳನ್ನು ಕೇಳುವ ಮೂಲಕ ಹಾಗೂ ಕೆಲವರು ಮಕ್ಕಳಿದ್ದೂ ಜೀವನದ ಸಂಧ್ಯಾಕಾಲದಲ್ಲಿ ಆಶ್ರಮದಲ್ಲಿ ಜೀವನ ನಡೆಸುವ ಅನಿವಾರ್ಯತೆ ಒದಗಿದುದನ್ನು ಅರಿತ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ತಮ್ಮ ಹೆತ್ತವರಿಗೆ ಈ ರೀತಿಯ ಸಂಕಟ […]

ಕುಂದಾಪುರ: ಅಂಗಡಿಗೆ ನುಗ್ಗಿ ಕಳವು

ಕುಂದಾಪುರ: ಕುಂದಾಪುರ ಎಪಿಎಂಸಿ ಮಾರ್ಕೇಟ್ ರೋಡ್‌ನಲ್ಲಿರುವ ತೆಕ್ಕಟ್ಟೆಯ ಅಬ್ದುಲ್ ಗನಿ ಸಾಹೇಬ್ ಎಂಬವರ ದಿನಸಿ ಅಂಗಡಿಗೆ ಜೂ.12 ರಂದು ರಾತ್ರಿ ನುಗ್ಗಿದ ಕಳ್ಳರು, ಡ್ರಾವರ್‌ನಲ್ಲಿದ್ದ 20,000ರೂ., ಎರಡು ಮೊಬೈಲ್ ಫೋನ್ ಹಾಗೂ ಡಿವಿಯಾರ್ ಮೆಶೀನ್ ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಆಧಾರ್-ರೇಷನ್ ಕಾರ್ಡ್ ಲಿಂಕ್: ಸೆಪ್ಟೆಂಬರ್ 30 ರವರೆಗೆ ಅವಧಿ ವಿಸ್ತರಣೆ.

ನವದೆಹಲಿ: ಆಧಾರ್ ಮತ್ತು ಪಡಿತರ ಚೀಟಿಯನ್ನು ಲಿಂಕ್ ಮಾಡುವ ಗಡುವನ್ನು ಸರ್ಕಾರ ಮತ್ತೊಮ್ಮೆ ವಿಸ್ತರಿಸಿದೆ. ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡಲು ಸೆಪ್ಟೆಂಬರ್ 30 ರವರೆಗೆ ಸಮಯ ನೀಡಿದೆ. ಜೂನ್ 30 ಕೊನೆಯ ದಿನವಾಗಿತ್ತು. ಇದೀಗ ಅವಧಿ ವಿಸ್ತರಿಸಿದೆ. ಈ ಬಗ್ಗೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಅಧಿಸೂಚನೆ ಹೊರಡಿಸಿದೆ. ಪಡಿತರ ಚೀಟಿ ಮತ್ತು ಆಧಾರ್ ಅನ್ನು ಆನ್ ಲೈನ್ ನಲ್ಲಿ ಲಿಂಕ್ ಮಾಡುವ ವಿಧಾನ:

ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ ಶಾಕ್: ಪೆಟ್ರೋಲ್ ಡೀಸೆಲ್ ದರ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ನ ಮೇಲಿನ ಸೆಸ್ ಹೆಚ್ಚಳ ಮಾಡಿ ಕರ್ನಾಟಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೀಗಾಗಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ ಸರಾಸರಿ 3 ರೂ ಮತ್ತು ಡೀಸೆಲ್ ಬೆಲೆಯಲ್ಲಿ 3.5 ರೂ ಹೆಚ್ಚಳ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳ ಖರ್ಚು ಸರಿದೂಗಿಸಲು ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಹೆಚ್ಚಳ ಮಾಡಿದೆ. ಇಂದು ಈ ಬಗ್ಗೆ ಹೊರಡಿಸಿದ್ದು ತಕ್ಷಣದಿಂದ ಜಾರಿಗೆ ಬರಲಿದೆ. […]