ಪಡಿತರ ಚೀಟಿ ಇರುವ ಎಲ್ಲ ಮನೆಗಳಿಗೂ ವಿದ್ಯುತ್ ಸಂಪರ್ಕ

ಬೆಂಗಳೂರು: ಪಡಿತರ ಚೀಟಿ ಇರುವ ಎಲ್ಲ ಮನೆಗಳಿಗೂ ವಿದ್ಯುತ್ ಸಂಪರ್ಕ ನೀಡುವುದು ಸಹಿತ ಬಜೆಟ್‌ನಲ್ಲಿ ಘೋಷಿಸಿರುವ ಎಲ್ಲ ಯೋಜನೆಗಳನ್ನು ಆದ್ಯತೆ ಮೇಲೆ ಅನುಷ್ಠಾನಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಕೆಪಿಟಿಸಿಎಲ್ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಇಂಧನ ಇಲಾಖೆ ಸಭೆಯಲ್ಲಿ ಮಾತನಾಡಿದರು. ವಿದ್ಯುತ್ ರೀಚಾರ್ಜ್ ಕೇಂದ್ರಗಳ ಆರಂಭಕ್ಕೆ ಆದ್ಯತೆ: ವಿದ್ಯುತ್ ಚಾಲಿತ ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ತಯಾರಾಗುತ್ತಿರುವುದರಿಂದ ವಿದ್ಯುತ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಆರಂಭಿಸಲು ಆದ್ಯತೆ ನೀಡಬೇಕು. […]

ಮೂಡುಬಿದಿರೆ: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ಮೂಡುಬಿದಿರೆ: ಪತಿಯೇ ಪತ್ನಿಯನ್ನು ಮಾರಕಾಯುಧದಿಂದ ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಹತ್ಯೆಗೈದ ಆರೋಪಿಯನ್ನು ಮೂಡುಬಿದಿರೆಯ ಧರೆಗುಡ್ಡೆಯ ದಿನರಾಜ್ ಎಂದು ಗುರುತಿಸಲಾಗಿದೆ. ಈತ ಪತ್ನಿಯನ್ನು ಮೂಡಬಿದಿರೆಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ತನ್ನ ಪತ್ನಿ ಮನೆಯ ಮೆಟ್ಟಲಿನಿಂದ ಜಾರಿ ಬಿದ್ದು ಗಾಯಗೊಂಡಿದ್ದಾಳೆ ಎಂದು ಹೇಳಿದ್ದನು. ಅಲ್ಲಿ ಪರೀಕ್ಷಿಸಿದ ವೈದ್ಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದರು. ಖಾಸಗಿ ಆಸ್ಪತ್ರೆಗೆ ಹೋದ ಸಂದರ್ಭದಲ್ಲಿ ಸುನಿತಾ ಸಾವನ್ನಪ್ಪಿದ್ದು, ಮೃತದೇಹವನ್ನು ಮಂಗಳೂರಿನ ಜಿಲ್ಲಾಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಸುನಿತಾ […]

ಹಾಕಿ ತಂಡಗಳಿಗೆ ಇನ್ನೂ 10 ವರ್ಷ ಒಡಿಶಾ ಸರ್ಕಾರದ ಪ್ರಾಯೋಜಕತ್ವ

ಭುವನೇಶ್ವರ: ಮುಂದಿನ 10 ವರ್ಷಗಳವರೆಗೆ ಪುರುಷರು ಹಾಗೂ ಮಹಿಳೆಯರ ರಾಷ್ಟ್ರೀಯ ಹಾಕಿ ತಂಡದ ಅಧಿಕೃತ ಪ್ರಾಯೋಜಕತ್ವವನ್ನು ಒಡಿಶಾ ಸರ್ಕಾರ ವಹಿಸಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ನವೀನ್ ಪಾಟ್ನಾಯಕ್ ತಿಳಿಸಿದ್ದಾರೆ. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದ ಭಾರತೀಯ ಹಾಕಿ ಆಟಗಾರರಿಗೆ ತಲಾ ₹10 ಲಕ್ಷ ಬಹುಮಾನ ನೀಡಿದರು. 2018ರಿಂದ ಎರಡೂ ತಂಡಗಳ ಪ್ರಾಯೋಜಕತ್ವವನ್ನು ಒಡಿಶಾ ವಹಿಸಿಕೊಂಡಿದೆ. ಇನ್ನೂ 10 ವರ್ಷಗಳವರೆಗೆ ಇದು ಮುಂದುವರೆಯಲಿದೆ ಎಂದು ಪಾಟ್ನಾಯಕ್ ಘೋಷಿಸಿದ್ದಾರೆ.

ಪತ್ನಿ ಸುನಂದ ಪುಷ್ಕರ್​ ಅನುಮಾಸ್ಪದ ಸಾವಿನ ಪ್ರಕರಣ: ಶಶಿ ತರೂರ್​​​ ಖುಲಾಸೆ

ನವದೆಹಲಿ: ಪತ್ನಿ ಸುನಂದ ಪುಷ್ಕರ್​ ಅವರ ಅನುಮಾಸ್ಪದ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್​​​ ಖುಲಾಸೆಗೊಂಡಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಕೋರ್ಟ್​​ ಶಶಿ ತರೂರ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಿಗೊಳಿಸಿ ಕ್ಲೀನ್​​ ಚಿಟ್​ ಕೊಟ್ಟಿದೆ. 51 ವರ್ಷದ ಸುನಂದ ಪುಷ್ಕರ್ ಅವರ ಮೃತದೇಹ 2014ರ ಜನವರಿ 17 ರಂದು ದೆಹಲಿ ಲಕ್ಸುರಿ ಹೋಟೆಲ್​​ನಲ್ಲಿ ಪತ್ತೆಯಾಗಿತ್ತು. ಶಶಿತರೂರ್ ಅವರ ಮನೆಯ ದುರಸ್ಥಿ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಅವರು ಹೋಟೆಲ್​​ನಲ್ಲಿ ವಾಸ್ತವ್ಯ ಮಾಡುತ್ತಿದ್ದರು. ಆ ವೇಳೆ ದೆಹಲಿ […]

ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ಅಡುಗೆ ಅನಿಲ (ಎಲ್ ಪಿಜಿ ಸಿಲಿಂಡರ್) ಬೆಲೆಯಲ್ಲಿ ಮತ್ತೆ ₹25 ರೂಪಾಯಿ ಎರಿಕೆಯಾಗಿದೆ. ರಾಜಧಾನಿ ದೆಹಲಿಯಲ್ಲಿ 14.2 ಕೆಜಿ ಎಲ್ ಪಿಜಿ ಸಿಲೆಂಡರ್ ಬೆಲೆ ಈಗ 859 ರೂಪಾಯಿ 5 ಪೈಸೆಯಾಗಿದೆ. ನಿನ್ನೆಯವರೆಗೆ 834 ರೂಪಾಯಿ 50 ಪೈಸೆಯಾಗಿತ್ತು. ಕಳೆದ ಜುಲೈ 1ರಂದು ಎಲ್ ಪಿಜಿ ಸಿಲೆಂಡರ್ ಬೆಲೆ 25 ರೂಪಾಯಿ 50 ಪೈಸೆ ಹೆಚ್ಚಳವಾಗಿತ್ತು. ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಎಲ್ ಪಿಜಿ ಸಿಲೆಂಡರ್ ಬೆಲೆ 862 ರೂಪಾಯಿ 50 ಪೈಸೆಯಾಗಿದೆ. […]