ತಿರುಪತಿಗೆ ತೆರಳುವ ನಂದಿನಿ ತುಪ್ಪ ಟ್ಯಾಂಕರ್​ಗಳಿಗೆ ಜಿಪಿಎಸ್, ಎಲೆಕ್ಟ್ರಿಕ್ ಲಾಕಿಂಗ್ ಅಳವಡಿಕೆ.

ಬೆಂಗಳೂರು: ತಿರುಪತಿ ಲಡ್ಡು ವಿವಾದದ ಬಳಿಕ ಕೆಎಂಎಫ್‌ ನಂದಿನಿ ತುಪ್ಪದ ಸುರಕ್ಷತಾ ಕ್ರಮಗಳ ಬಗ್ಗೆ ಮತ್ತಷ್ಟು ಎಚ್ಚರ ವಹಿಸಿದೆ. ತಿರುಪತಿಗೆ ನಂದಿನಿ ತುಪ್ಪ ಸಾಗಿಸುವ ಮಾರ್ಗ ಮಧ್ಯೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ತಿರುಮಲಕ್ಕೆ ಕಳುಹಿಸುವ ತುಪ್ಪದ ಟ್ಯಾಂಕರ್‌ಗಳಿಗೆ ಜಿಪಿಎಸ್, ಎಲೆಕ್ಟ್ರಿಕ್ ಲಾಕಿಂಗ್ ಅಳವಡಿಸಲು ಮುಂದಾಗಿದೆ. ಈ ಹಿಂದೆ ವಾರಕ್ಕೆ ಮೂರು ಟ್ಯಾಂಕರ್‌ಗಳನ್ನ ಆಮದು ಮಾಡಿಕೊಳ್ಳಲಾಗುತ್ತಿತ್ತು. ಒಟ್ಟಾರೆ 3 ತಿಂಗಳಿಗೆ 350 ಟನ್‌ ತುಪ್ಪ ನೀಡುವಂತೆ ಕೆಎಂಎಫ್‌ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಹಿಂದೆ ಟಿಟಿಡಿ ಮಾಡಿಕೊಂಡ […]

ಇಂದು ಉಡುಪಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ.

ಬೆಂಗಳೂರು: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು (ಸೆ.23) ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ವಿಜಯಪುರ, ಕಲಬುರಗಿ, ಗದಗ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆ ಗಳಲ್ಲಿ ಪ್ರತ್ಯೇಕ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗಲಿದೆ.ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ ಜಿಲ್ಲೆ ಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು […]

ಉಡುಪಿ ಗೃಹ ನಿರ್ಮಾಣ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಉಡುಪಿ: ಉಡುಪಿ ಗೃಹ ನಿರ್ಮಾಣ ಸಹಕಾರಿ ಸಂಘದ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಇಂದು ರಮಾನಂದ ಭಟ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಮಿಷನ್ ಕಂಪೌಂಡ್ ನ ಜಗನ್ನಾಥ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಶೇ.14 ರಷ್ಟು ಡಿವಿಡೆಂಡ್‌ ಘೋಷಿಸಲಾಯಿತು. ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ವಿದ್ಯಾರ್ಥಿ ಸಹಾಯ ಧನ ವಿತರಣೆ ಮಾಡಲಾಯಿತು. ಸಂಘದ ವಾರ್ಷಿಕ ವ್ಯವಹಾರವನ್ನು 100 ಕೋಟಿಗೆ ಹೆಚ್ಚಿಸಲು ಹಾಗೂ ಸಂಘದ ಕಾರ್ಯವ್ಯಾಪ್ತಿಯಲ್ಲಿ ಲಭ್ಯತೆಗನುಸಾರವಾಗಿ ಜಮೀನು […]

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ; ಇದು ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ

ಉಡುಪಿ: ಲಡ್ಡು ಪ್ರಸಾದಕ್ಕೆ ಹಸುವಿನ ತುಪ್ಪದ ಬದಲು ಕೃತಕ ತುಪ್ಪ ಹಾಕಿದ್ದಾರೆ. ಅದನ್ನು ತುಪ್ಪ ಎಂದು ಕರೆಯಲು ಸಾಧ್ಯವಿಲ್ಲ. ಪ್ರಾಣಿಜನ್ಯ ಕೊಬ್ಬಿನ ಮಿಶ್ರಣದಿಂದ ಪ್ರಸಾದ ತಯಾರಿಸಿದ್ದಾರೆ. ಈ ಬೆಳವಣಿಗೆಯಿಂದ ಖೇದವಾಗಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತಿಳಿಸಿದ್ದಾರೆ. ಅಯೋಧ್ಯೆಯಿಂದ ವಿಡಿಯೋ ಹೇಳಿಕೆ ನೀಡಿರುವ ಪೇಜಾವರ ಶ್ರೀಗಳು, ಇದು ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ. ಇದು ದೇವರಿಗೆ ಬಗೆದಿರುವ ಅಪಚಾರ. ಸರಕಾರವೇ ಈ ಕೃತ್ಯ ನಡೆಸಿರುವುದು ಖಂಡನಾರ್ಹ. ತಿರುಪತಿಯ ಶ್ರೀನಿವಾಸ ದೇವರು, ಗೋವಿನ ರಕ್ಷಣೆಗೆ ಅವತರಿಸಿದವ, […]

ಪೊಲೀಸರು ವೈಜ್ಞಾನಿಕ, ವೃತ್ತಿಪರ ತನಿಖೆಗಳಿಗೆ ಹೆಚ್ಚು ಒತ್ತು ಕೊಡಬೇಕು

ಉಡುಪಿ: ಅಪರಾಧ ನಡೆಯುವ ಸ್ಥಳದಲ್ಲಿನ ಕಳಪೆ ಸಾಕ್ಷ್ಯ ಸಂಗ್ರಹದಿಂದಾಗಿ ಆರೋಪಿ ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಆದುದರಿಂದ ಆರೋಪಿಗಳಿಗೆ ಶಿಕ್ಷೆಯಾಗಲು ವೈಜ್ಞಾನಿಕ ಸಾಕ್ಷ್ಯಗಳು ಅತೀ ಅಗತ್ಯ. ಆದುದರಿಂದ ಪೊಲೀಸ್ ಅಧಿಕಾರಿಗಳು ಈ ಕುರಿತ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಅಮಿತ್ ಸಿಂಗ್ ಹೇಳಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಮಣಿಪಾಲ ಕೆಎಂಸಿಯ ಕ್ಲಿನಿಕಲ್ ಮತ್ತು ಇನ್ನೋವೇಟಿವ್ ಫೋರೆನ್ಸಿಕ್ಸ್ ಸೆಂಟರ್ ಸಹಯೋಗದಲ್ಲಿ ಮಣಿಪಾಲ ಕೆಎಂಸಿಯ ಟಿ.ಎಂ.ಎ.ಪೈ ಸಭಾಂಗಣದಲ್ಲಿ ನಡೆದ ಪಶ್ಚಿಮ ವಲಯ ಮಟ್ಟದ ಆರನೇ […]