ಉಡುಪಿ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ :ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗ ನೀಡುವ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ವಿಧಾನಪರಿಷತ್ ಉಪ ಚುನಾವಣೆಯನ್ನು ನಿಷ್ಪಕ್ಷಪಾತ, ನ್ಯಾಯಸಮ್ಮತವಾಗಿ ನಡೆಸಲು ಚುನಾವಣೆ ಆಯೋಗದ ನಿರ್ದೇಶನದ ಅನ್ವಯಕಾರ್ಯಚಟುವಟಿಕೆಗಳನ್ನು ನಡೆಸಿ ಜಿಲ್ಲಾಡಳಿತಕ್ಕೆ ಯಶಸ್ವಿ ಚುನಾವಣೆ ನಡೆಸಲು ಎಲ್ಲ ಪಕ್ಷದವರು ಸಹಕರಿಸಬೇಕೆಂದರು. […]

ಉಡುಪಿ: ಮದ್ಯ ಸೇವಿಸಿ ನಿರ್ಲಕ್ಷ್ಯತನದಿಂದ ಬಸ್‌ ಚಾಲನೆ; ಪ್ರಕರಣ ದಾಖಲು.

ಉಡುಪಿ: ಮದ್ಯಪಾನ ಮಾಡಿ ನಿರ್ಲಕ್ಷ್ಯತನದಿಂದ ಬಸ್‌ ಚಲಾಯಿಸಿದ ಖಾಸಗಿ ಬಸ್‌ ಚಾಲಕನ ವಿರುದ್ಧ ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಉಡುಪಿ ಸಂಚಾರ ಪೊಲೀಸ್‌ ಠಾಣೆಯ ಉಪನಿರೀಕ್ಷಕ ಸುದರ್ಶನ ದೊಡ್ಡಮನಿ ಅವರು ಗುರುವಾರ ಉಡುಪಿ ಸರ್ವಿಸ್‌ ಬಸ್‌ ನಿಲ್ದಾಣದ ಬಳಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಖಾಸಗಿ ಬಸ್‌ ಚಾಲಕ ಪ್ರಿನ್ಸ್‌ ಬೆನ್ನಿ ಎಂಬಾತ ಸಾರ್ವಜನಿಕ ರಸ್ತೆಯಲ್ಲಿ ಮಾನವ ಜೀವಕ್ಕೆ ಅಪಾಯಕರ ರೀತಿಯಲ್ಲಿ ದುಡುಕುತನ ಮತ್ತು ನಿರ್ಲಕ್ಷ್ಯತನದಿಂದ ಬಸ್ಸು ಚಲಾಯಿಸಿದ್ದು, ಆತನನ್ನು ತಪಾಸಣೆ ಮಾಡಿದಾಗ ಮದ್ಯ […]

ಉಡುಪಿ:ಸರಕಾರದ ಸೌಲಭ್ಯಗಳನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ತಲುಪಿಸಿ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಸರಕಾರ ಲಿಂಗತ್ವ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅವರುಗಳಿಗೆ ಈ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಅವರುಗಳನ್ನು ಇದರ ಫಲಾನುಭವಿಗಳನ್ನಾಗಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಜಿಲ್ಲೆಯಲ್ಲಿ ಇರುವ ಲಿಂಗತ್ವ ಅಲ್ಪಸಂಖ್ಯಾತರು ಸರಕಾರ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಲಾಭ ಪಡೆಯುವುದರೊಂದಿಗೆ ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ […]

ಚಲಿಸುವ ಕಾರಿನಲ್ಲಿ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.

ಮಥುರಾ: ಮೂವರು ಕಿಡಿಗೇಡಿಗಳು 13 ವರ್ಷದ ಬಾಲಕಿಯನ್ನು ಅಪಹರಿಸಿ, ಚಲಿಸುವ ಕಾರಿನಲ್ಲೇ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕಾರಿನಿಂದ ಹೊರಗೆಸೆದಿದ್ದಾರೆ ಎಂದು ಆರೋಪಿಸಲಾಗಿದೆ ಈ ಬಗ್ಗೆ ಬಾಲಕಿ ತಂದೆ ನೀಡಿರುವ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರಪ್ರದೇಶದ ಮಥುರಾದಲ್ಲಿ ಘಟನೆ ನಡೆದಿದ್ದು, ಅಸ್ವಸ್ಥಗೊಂಡಿದ್ದ ಆಕೆಯನ್ನು ವೈದ್ಯರ ಬಳಿ ಪೋಷಕರು ಕರೆದೊಯ್ದಾಗ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಇದೀಗ ಆಕೆಯ ಪೋಷಕರು ಛಾಟಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ […]

ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ಚಿತ್ರೀಕರಣ: ವಿದ್ಯಾರ್ಥಿಯ ಬಂಧನ, ಮೊಬೈಲಿನಲ್ಲಿ 8 ಸಾವಿರ ವಿಡಿಯೋಗಳು ಪತ್ತೆ..!

ಬೆಂಗಳೂರು: ಕಾಲೇಜಿನಲ್ಲಿ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್‌ ಕ್ಯಾಮೆರಾ ಇಟ್ಟು ಚಿತ್ರೀಕರಣ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ನಗರದ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಕುಶಾಲ್‌ ಎಂಬ ವಿದ್ಯಾರ್ಥಿಯೇ ಬಂಧಿತ ಆರೋಪಿ. ಈತ ತಾನು ವ್ಯಾಸಂಗ ಮಾಡುತ್ತಿದ್ದ ಕಾಲೇಜಿನ ಲೇಡೀಸ್‌ ಟಾಯ್ಲೆಟ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದು, ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಆತನನ್ನು ಬಂಧನ ಮಾಡುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದರು. ಈ ಹಿನ್ನೆಲೆ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಈ ಘಟನೆಯು ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಶೌಚಾಲಯದಲ್ಲಿ ಮೊಬೈಲ್‌ ಕ್ಯಾಮೆರಾ ಇಟ್ಟಿರುವುದನ್ನು […]