ಉಡುಪಿ: ಯುವಕ ನಾಪತ್ತೆ

ಉಡುಪಿ: ನಿಟ್ಟೂರಿನಲ್ಲಿರುವ ಬಾಳಿಗ ಫಿಶ್ನೆಟ್‌ನಲ್ಲಿ ಕೆಲಸ ಮಾಡಿ ಕೊಂಡಿದ್ದ ಬನಮಾಲಿ(29) ಎಂಬವರು ಸಮೀಪದ ಹಾಸ್ಟೆಲ್‌ನಲ್ಲಿ ವಾಸಮಾಡಿಕೊಂಡಿದ್ದು, ಸೆ.12ರಂದು ಮಧ್ಯಾಹ್ನ 12:30 ಗಂಟೆಗೆ ಹಾಸ್ಟೆಲ್‌ನಿಂದ ಹೊರಗಡೆ ಹೋದವರು ಈವರೆಗೆ ವಾಪಸ್ಸು ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಬೈಕ್ ಅಪಘಾತ; ಕಾಲೇಜ್ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು.

ಮಂಗಳೂರು: ಬೈಕ್ ಸ್ಕಿಡ್ ಆಗಿ ಬಿದ್ದು, ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಎ.ಜೆ ಆಸ್ಪತ್ರೆ ಬಳಿ ಸೆ.20ರಂದು ಸಂಜೆ ನಡೆದಿದೆ. ಮೃತ ಯುವಕನನ್ನು ಯೆನಪೋಯ ಕಾಲೇಜ್ ನ ವಿದ್ಯಾರ್ಥಿಯಾದ ಮೇಲ್ಕಾರ್ ಸಮೀಪದ ರೆಂಗೇಲ್ ನಿವಾಸಿ ಜಾಸೀಮ್ (20) ಎಂದು ಗುರುತಿಸಲಾಗಿದೆ. ಸಹ ಸವಾರನಿಗೆ ಗಾಯವಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಿಯೋ ರೊಡ್ರಿಗಸ್ ದತ್ತಿ ಕಿಟಾಳ್ ಯುವ ಪುರಸ್ಕಾರಕ್ಕೆ ಕಿರಣ್ ನಿರ್ಕಾಣ್ ಆಯ್ಕೆ

ಮಂಗಳೂರು: ಕಿರಣ್, ನಿರ್ಕಾಣ್ ಕಾವ್ಯನಾಮದಲ್ಲಿ ಬರೆಯುತ್ತಿರುವ ಪ್ರತಿಭಾವಂತ ಯುವ ಬರಹಗಾರ ಫ್ಲೋಯ್ಡ್ ಕಿರಣ್ ಮೊರಾಸ್ 2024ನೇ ಸಾಲಿನ ‘ಶ್ರೀ ಲಿಯೋ ರೊಡ್ರಿಗಸ್ ಕುಟುಂಬ ದತ್ತಿ ಕಿಟಾಳ್ ಯುವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಉದ್ಯಮ ಆಡಳಿತದಲ್ಲಿ ಪದವಿ ಪಡೆದು ಪ್ರಸ್ತುತ ದುಬಾಯ್‌ಯಲ್ಲಿ ಉದ್ಯೋಗದಲ್ಲಿರುವ ಕಿರಣ್ ಅವರ ‘ನಕ್ತಿರಾಂ’ (ನಕ್ಷತ್ರಗಳು) ಎಂಬ ಹೆಸರಿನ ಶಿಶುಗೀತೆಗಳ ಸಂಕಲನ ಇತ್ತೀಚೆಗೆ ಪ್ರಕಟವಾಗಿದೆ. ಕವಿತೆ ಮತ್ತು ಪ್ರಬಂದ ಸಾಹಿತ್ಯದ ಕಡೆ ವಿಶೇಷ ಒಲವು ಇರುವ ಕಿರಣ್, ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಿಂದ ಕೊಂಕಣಿ ಸಾಹಿತ್ಯದಲ್ಲಿ ಸ್ನಾತಕೋತ್ತರ […]
ಮಂಗಳೂರು: ಮಿಸ್ಟರ್, ಮಿಸ್, ಟೀನ್ ಹಾಗೂ ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ: ಪ್ರಶಸ್ತಿ ವಿಜೇತರ ವಿವರ ಇಲ್ಲಿವೆ.

ಮಂಗಳೂರು: ಅಪ್ಸ್ ಮಾಡೆಲ್ ಮ್ಯಾನೇಜ್ಮೆಂಟ್ ಮತ್ತು ಅಸ್ತ್ರ ಗ್ರೂಪ್ ವತಿಯಿಂದ ಮಿಸ್ಟರ್, ಮಿಸ್, ಟೀನ್, ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆಯನ್ನು ಸೆಪ್ಟೆಂಬರ್ 15 ರಂದು ಮಂಗಳೂರಿನ ಎ.ಜೆ. ಗ್ರ್ಯಾಂಡ್ ಹೋಟೆಲ್ ನಲ್ಲಿ ಆಯೋಜಿಸಲಾಯಿತು. ಈ ಇವೆಂಟ್‌ನಲ್ಲಿ ವಿವಿಧ ವಿಭಾಗಗಳ ಸ್ಪರ್ಧಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು. ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ವಿಜೇತರ ವಿವರಗಳು: ತೀರ್ಪುಗಾರರಾದ ಶ್ರೇಯಸ್ ಭಂಡಾರ್ಕರ್, ಗಾನಾ ಭಟ್, ಅರುಂದತಿ ಲಾಲಾ, ಗಂಗಾಧರ ಪೂಜಾರಿ ಮತ್ತು ವಿಶಾಲ್ ಕಲ್ಘಟ್ಕಿ ಅವರು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ […]
ತಿರುಪತಿ ಲಡ್ಡು ವಿವಾದ: ದೇವಸ್ಥಾನಗಳಲ್ಲಿ ನಂದಿನಿ ತುಪ್ಪವನ್ನು ಬಳಸುವಂತೆ ರಾಜ್ಯ ಸರ್ಕಾರ ಸೂಚನೆ.

ಬೆಂಗಳೂರು: ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಶುಕ್ರವಾರ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ತಯಾರಿಸುವ ಪ್ರಸಾದದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ. ದೇವಸ್ಥಾನಗಳಲ್ಲಿ ಕರ್ನಾಟಕ ಹಾಲು ಒಕ್ಕೂಟದ(ಕೆಎಂಎಫ್) ನಂದಿನಿ ಬ್ರಾಂಡ್ ತುಪ್ಪವನ್ನು ಮಾತ್ರ ಬಳಸುವಂತೆ ದೇವಸ್ಥಾನಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ. ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ […]