ಕುಂದಾಪುರ: ಕೆರೆಗೆ ಬಿದ್ದು ವೈದ್ಯಕೀಯ ವಿದ್ಯಾರ್ಥಿ ಮೃತ್ಯು

ಕುಂದಾಪುರ: ವೈದ್ಯಕೀಯ ವಿದ್ಯಾರ್ಥಿಯೊಬ್ಬ ಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ. ಹಂಗಳೂರಿನ ಗೌರೀಶ್‌ ಬಿ.ಆರ್‌ (25) ಮೃತಪಟ್ಟವರು ಎಂದು ತಿಳಿದುಬಂದಿದೆ. ಬುಧವಾರ ಸಂಜೆ ಈಜುಕೊಳದಲ್ಲಿ ಈಜಲು ಹೋಗುವುದಾಗಿ ಮನೆಯಿಂದ ತೆರಳಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಕೋಟೇಶ್ವರ ದೇವಸ್ಥಾನದ ಕೆರೆ ಸಮೀಪ ಬುಧವಾರ ತಡರಾತ್ರಿ ಬ್ಯಾಗ್‌, ಮೊಬೈಲ್‌ ಫೋನ್‌, ಚಪ್ಪಲಿ ಕಂಡುಬಂದಿತ್ತು. ಅಂದು ಸಂಜೆ 5.30ರಿಂದ ರಾತ್ರಿ 11 ಗಂಟೆಯ ನಡುವೆ ಕೆರೆಗೆ ಕಾಲುಜಾರಿ ಬಿದ್ದಿರಬಹುದು ಎಂದು ಕುಟುಂಬಿಕರು ಶಂಕಿಸಿದ್ದಾರೆ. […]

ಮಣಿಪಾಲ: ಸೆ.21 ರಂದು MSDC ಓರೇನ್ ಇಂಟರ್ನ್ಯಾಷನಲ್ ನಲ್ಲಿ “ಫ್ಲಾಂಟ್ ಇಟ್ ಓನ್ ಇಟ್” ನೋಡಿ ಕಲಿಯಿರಿ ಉಚಿತ ಕಾರ್ಯಾಗಾರ.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ ಓರೇನ್ ಇಂಟರ್ನ್ಯಾಷನಲ್ ನಲ್ಲಿ “ಫ್ಲಾಂಟ್ ಇಟ್ ಓನ್ ಇಟ್” ನೋಡಿ ಕಲಿಯಿರಿ ಉಚಿತ ಕಾರ್ಯಾಗಾರ ಸೆ.21 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ. ಇಲ್ಲಿ ಎಲ್ಲಾ ರೀತಿಯ ದೇಹವನ್ನು ಮೆಚ್ಚಿಸುವ ವಿಶಿಷ್ಟವಾದ ಡ್ರಾಪಿಂಗ್ ತಂತ್ರಗಳನ್ನು ಕರಗತ ಮಾಡಿಕೊಳ್ಳುವ ಕೌಶಲ್ಯ ತರಬೇತಿಗಳನ್ನು ನೀಡಲಾಗುವುದು. ಇಗಲೇ ನೋಂದಾಯಿಸಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:📞8123165068📞8123163935📍ಓರೇನ್ ಇಂಟರ್ನ್ಯಾಷನಲ್, ಎಂಎಸ್ ಡಿಸಿ, ಕಟ್ಟಡ, 3ನೇ ಮಹಡಿ, ಈಶ್ವರನಗರ, ಮಣಿಪಾಲ.

ತಿರುಪತಿ ಪ್ರಸಾದ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ.

ತಿರುಪತಿ: ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ತಿರುಪತಿಯ ಭಕ್ತರ ನಂಬಿಕೆಗೆ ಚಂದ್ರಬಾಬು ನಾಯ್ಡು ಅವರ ಹೇಳಿಕೆ ಧಕ್ಕೆ ತಂದಿದೆ ಎಂದು ಟಿಟಿಡಿ ಅಧಿಕಾರಿಗಳು ವಾದಿಸಿದ್ದರು. ಟಿಟಿಡಿ ಮಾಜಿ ಮುಖ್ಯಸ್ಥರು ಚಂದ್ರಬಾಬು ನಾಯ್ಡು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ಎಚ್ಚರಿಕೆ ನೀಡಿದ್ದರು. ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ ಲ್ಯಾಬ್ […]

ಸುಳ್ಯ: ಬಾಲಕಿಯ ಮೇಲೆ‌ ಲೈಂಗಿಕ ದೌರ್ಜನ್ಯ ಆರೋಪ; ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಬಂಧನ.

ಸುಳ್ಯ: ಬಾಲಕಿಯ ಮೇಲೆ‌ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೊ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಎಂಬಾತನನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಕೌನ್ಸಿಲಿಂಗ್ ಸಂದರ್ಭ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಸೆ.19ರ ಬೆಳಗ್ಗಿನ ಜಾವ ಪ್ರಸಾದ್ ಪಂಗಣ್ಣಾಯನನ್ನು ಆತನ ಮನೆಯಲ್ಲಿ ಬಂಧಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಪ್ರಸಾದ್ ಪಾಂಗಣ್ಣಾಯ ಕಾಣಿಯೂರು ಸಮೀಪದ […]

ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು,450ಕ್ಕೂ ಅಧಿಕ ಮಂದಿ ಗಾಯ

ಬೈರುತ್‌: ಹೆಜ್ಬುಲ್ಲಾ ಉಗ್ರರನ್ನು ಗುರಿಯಾಗಿಸಿ ಲೆಬನಾನ್‌ನಲ್ಲಿ ಒಂದೇ ಬಾರಿಗೆ 1 ಸಾವಿರಕ್ಕೂ ಅಧಿಕ ಪೇಜರ್‌ಗಳನ್ನು ಸ್ಫೋಟಿಸಿದ್ದ ಬೆನ್ನಲ್ಲೇ ಬುಧವಾರ ಮತ್ತೆ 3 ಸಾವಿರ ಹೆಜ್ಬುಲ್ಲಾ ಉಗ್ರರನ್ನು ಗುರಿಯಾಗಿಸಿ ವಾಕಿಟಾಕಿ, ವೈರ್‌ಲೆಸ್‌ ರೇಡಿಯೋ ಗಳನ್ನು ಸ್ಫೋಟಿಸಲಾಗಿದೆ. ಈ ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದು, 450ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪೇಜರ್‌ಗಳನ್ನು ಖರೀದಿಸಿದ್ದ ಸಂದರ್ಭದಲ್ಲೇ ಈ ವಾಕಿ-ಟಾಕಿ ಮತ್ತು ರೇಡಿಯೋಗಳನ್ನೂ ಖರೀದಿಸಲಾಗಿತ್ತು ಎನ್ನುವ ಮಾಹಿತಿ ಹೊರಬಿದ್ದಿದ್ದು, ಲೆಬನಾನ್‌ ಜನರಲ್ಲಿ ಘಟನೆ ಆತಂಕ ಹೆಚ್ಚಿಸಿದೆ. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಬೈರೂತ್‌, […]