ಕಟಪಾಡಿಯ ತ್ರಿಶಾ ವಿದ್ಯಾ ಪಿ.ಯು ಕಾಲೇಜಿನಲ್ಲಿ ರೇಬಿಸ್ ಜಾಗೃತಿ ಶಿಬಿರ

ಕಟಪಾಡಿ:ಉಡುಪಿ ಜಿಲ್ಲಾ ಪಂಚಾಯತ್ ಪಶುಪಾಲನಾ ಹಾಗೂ ಪಶು ವೈದ್ಯ ಸೇವಾ ಇಲಾಖೆ, ಕೋಟೆ ಕಟಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ರೇಬಿಸ್ ಜಾಗೃತಿ ಶಿಬಿರವನ್ನು ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿಯಲ್ಲಿ ಸಪ್ಟೆಂಬರ್ 17 ರಂದು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಹಿರಿಯ ಪಶುವೈದ್ಯಾಧಿಕಾರಿ ಡಾ. ವಿಜಯ ಕುಮಾರ್ ಅವರು ಪಿಯುಸಿ ವಿದ್ಯಾರ್ಥಿಗಳಿಗೆ ರೇಬಿಸ್ ರೋಗದ ಅಪಾಯ ಹಾಗೂ ಪರಿಣಾಮಗಳ ಬಗ್ಗೆ ಹೇಳಿದರು. ಜೊತೆಗೆ ಸಾಕು ಪ್ರಾಣಿಗಳಿಗೆ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಕುವುದರ ಬಗ್ಗೆ ಮಾಹಿತಿಯನ್ನು ನೀಡಿದರು. ತ್ರಿಶಾ ವಿದ್ಯಾ […]
ತೆಕ್ಕಟ್ಟೆ: ಹೈಮಾಸ್ಟ್ ಕಂಬಕ್ಕೆ ಢಿಕ್ಕಿ ಹೊಡೆದ ಶಾಲಾ ವಾಹನ: ಚಾಲಕನಿಗೆ ಗಂಭೀರ ಗಾಯ

ಉಡುಪಿ: ಹೆಮ್ಮಾಡಿ ಖಾಸಗಿ ಪಿಯು ಕಾಲೇಜಿನ ಶಾಲಾ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ತೆಕ್ಕಟ್ಟೆ ರಾ.ಹೆ.66ರ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಬ್ರಹ್ಮಾವರದಿಂದ ಹೆಮ್ಮಾಡಿ ಕಡೆಗೆ ಚಾಲಕ ಸಹಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಪ್ರಯಾಣಿಸುತ್ತಿದ್ದರು. ಈ ವೇಳೆ ಶಾಲಾ ವಾಹನಕ್ಕೆ ದ್ವಿಚಕ್ರ ವಾಹನವೊಂದು ಏಕಾಏಕಿ ಅಡ್ಡಬಂದ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.ಘಟನೆಯ ತೀವ್ರತೆಗೆ […]
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: 31 ಪ್ರಶಸ್ತಿಗಳನ್ನು ಪಡೆದ ‘ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ವಿದ್ಯಾರ್ಥಿಗಳು.

ಬೈಂದೂರು: ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ ಕೇಂದ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು,ಇವರ ಸಹಭಾಗಿತ್ವದಲ್ಲಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನತಾ ನ್ಯೂ ಇಂಗ್ಲೀಷ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿಗಳು ವೈಯಕ್ತಿಕ ಹಾಗೂ ಸಾಮೂಹಿಕ ಸ್ಪರ್ಧೆಗಳಲ್ಲಿ ಒಟ್ಟು 31 ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಮ್ಮ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ 18 ಪ್ರಥಮ, 8 ದ್ವಿತೀಯ ಹಾಗೂ […]
ಸೆ.22ರಂದು ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ ವಾರ್ಷಿಕ ಸಹಮಿಲನ- ಪ್ರೇರಣ ಪ್ರಶಸ್ತಿ 2024″ ಪ್ರದಾನ ಕಾರ್ಯಕ್ರಮ

ಉಡುಪಿ: ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಇದರ “ವಾರ್ಷಿಕ ಸಹಮಿಲನ ಹಾಗೂ ಪ್ರೇರಣ ಪ್ರಶಸ್ತಿ- 2024” ಪ್ರದಾನ ಕಾರ್ಯಕ್ರಮ ಇದೇ ಸೆ. 22ರಂದು ಸಂಜೆ 5ಗಂಟೆಗೆ ಕಡಿಯಾಳಿಯ ಮಾಂಡವಿ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಕ್ವಾಡ್ರಸ್ ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರ್ಷದ ಉದ್ಯಮಿ ಪ್ರಶಸ್ತಿಯನ್ನು ಕುಂದಾಪುರ ಸೈಂಟ್ ಅಂತೋನಿ ಕನ್ಸಟ್ರಕ್ಷನ್ ನ ಪಿಲಿಫ್ ಡಿಕೊಸ್ತಾ, ಮಹಿಳಾ ವೃತ್ತಿ ನಿರತ ಪ್ರಶಸ್ತಿಯನ್ನು ತನುಜಾ ಮಾಬೆನ್, ಯುವ […]
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಶಿಕ್ಷಕರ ದಿನಾಚರಣೆ

ಕಟಪಾಡಿ : ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ಉದ್ಯಾವರದ ಸರಕಾರಿ ಪ್ರೌಢಶಾಲೆ, ಪ್ರಾಥಮಿಕ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಗ್ರಾಮ ಪಂಚಾಯತ್ ಹಿರಿಯ ಸದಸ್ಯ ಲಾರೆನ್ಸ್ ಡೇಸ ಮಾತನಾಡಿ, ಶಿಕ್ಷಕರ ದಿನಾಚರಣೆಯ ಮೂಲಕ ಶಿಕ್ಷಕರನ್ನು ಅಭಿನಂದಿಸುವುದು ಅತ್ಯಂತ ಶ್ರೇಷ್ಠ ಕೆಲಸ. ವಿದ್ಯಾರ್ಥಿ ಜೀವನದಲ್ಲಿ ಮಕ್ಕಳನ್ನು ತಿದ್ದಿ ಬೆಳೆಸಿದ ಗುರುಗಳು ಪ್ರತಿಯೊಬ್ಬ ವಿದ್ಯಾರ್ಥಿಗೆ ಒಂದು ದಾರಿದೀಪ. ಸಮಾಜದಲ್ಲಿ ಶ್ರೇಷ್ಠ ನಾಗರಿಕನಾಗಿ ಬೆಳೆಯಲು ಶಿಕ್ಷಕರ ಪಾತ್ರ ಮಹತ್ವದ್ದು. ಸರಕಾರಿ […]