ಸೆ.22 ರಂದು ಉಡುಪಿ ಜಿಲ್ಲಾಮಟ್ಟದ ಅಸಂಘಟಿತ ಗ್ಯಾರೇಜು ಕಾರ್ಮಿಕರ ನೋಂದಣಿ ಅಭಿಯಾನ

ಉಡುಪಿ: ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಆಶ್ರಯದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ, ಮಣಿಪಾಲ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜು ಹಾಗೂ ಮಣಿಪಾಲ ಕೌಶಲ್ಯ ತರಬೇತಿ ಕೇಂದ್ರ ಇದರ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲಾ ಮಟ್ಟದ ಅಸಂಘಟಿತ ಗ್ಯಾರೇಜು ಕಾರ್ಮಿಕರ ನೋಂದಣಿ ಅಭಿಯಾನ ಮತ್ತು ಶಿಬಿರವನ್ನು ಇದೇ ಸೆ.22ರಂದು ಬೆಳಿಗ್ಗೆ 8.30ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಣಿಪಾಲದ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ರೋಷನ್ ಕರ್ಕಡ ಕಾಪು ಮತ್ತು […]

ಶಾಸಕ ಮುನಿರತ್ನ ಸೇರಿದಂತೆ 7 ಮಂದಿ ವಿರುದ್ಧ ಅತ್ಯಾಚಾರ ಕೇಸ್ ದಾಖಲು.

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಎರಡು ಕೇಸ್ ದಾಖಲಾಗಿರುವ ಮುನಿರತ್ನ ಆತನ ಗನ್ ಮ್ಯಾನ್ ವಿಜಯ್ ಕುಮಾರ್, ಸುಧಾಕರ್, ಕಿರಣ್ ಕುಮಾಋ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಸೇರಿದಂಕೆ 7 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ಕೃತ್ಯ ನಡೆದ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಬುಧವಾರ ತಡರಾತ್ರಿ ಅತ್ಯಾಚಾರದ […]

ಕಾಸರಗೋಡು: ಆಟವಾಡುವಾಗ ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಬಾಲಕ ಮೃತ್ಯು.

ಕಾಸರಗೋಡು: ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಬಾಲಕ ಮೃತಪಟ್ಟ ಘಟನೆ ಮಾಂಙಾಡ್ ನಲ್ಲಿ ನಡೆದಿದೆ. ಮೃತ ಪಟ್ಟ ಬಾಲಕ ಉದುಮ ಪಳ್ಳದ ತೆಕ್ಕೇಕರೆಯ ಮಾಹಿನ್ ರಾಸಿ – ರೆಹಿಮಾ ದಂಪತಿ ಪುತ್ರ ಅಬು ತ್ವಾಹೀರ್. ಮಾಂಗಾಡ್‌ನ ಕುಲಿಕುನ್ನಂನ ಸಂಬಂಧಿಯೊಬ್ಬರ ಮನೆಯಲ್ಲಿ ಈ ಘಟನೆ ನಡೆದದ್ದು, ಆಟವಾಡುತ್ತಿದ್ದ ಬಾಲಕನ ಮೇಲೆ ಕಬ್ಬಿಣದ ಗೇಟ್ ಬಿದ್ದಿದೆ. ಅದರಡಿ ಸಿಲುಕಿದ ಬಾಲಕನನ್ನು ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದುಬಂದಿದು‌.

ಉಡುಪಿ:ಅಕ್ರಮ ಗೋವಾ ಮದ್ಯ ವಶ; ಆರೋಪಿ ಬಂಧನ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್‌ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಸೆಪ್ಟಂಬರ್ 17 ರಂದು ಅಕ್ರಮವಾಗಿ ಗೋವಾ ಮದ್ಯವನ್ನು ದಾಸ್ತಾನು ಹೊಂದಿ ದ್ವಿಚಕ್ರ ವಾಹನದಲ್ಲಿ ದುಬಾರಿ ದರದವಿವಿಧ ಬ್ರ್ಯಾಂಡ್ ನ ಅಂದಾಜು 1,42,798 ರೂ. ಮೌಲ್ಯದ ಒಟ್ಟು 31.000 ಲೀಟರ್ ಗೋವಾ ರಾಜ್ಯದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಅನಂತ ದೇವದಾಸ ಪ್ರಭು ಎಂಬಾತನನ್ನು ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ ದಸ್ತಗಿರಿ ಮಾಡಿ ಮದ್ಯ ಹಾಗೂವಾಹನವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು […]

ಉಡುಪಿ:ಪ್ರಥಮ ಡಿ.ಇಎಲ್.ಇಡಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಉಡುಪಿ: ಜಿಲ್ಲೆಯಲ್ಲಿ ಪ್ರಥಮ ಡಿ.ಇಎಲ್.ಇಡಿ ಪರೀಕ್ಷೆಯು ಸೆಪ್ಟಂಬರ್ 19 ರಿಂದ 25 ರ ವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ, ಕೆ […]