ಉಡುಪಿ: ಮೆಸ್ಕಾಂ ಲೈನ್‌ಮೆನ್ ಮೃತ್ಯು.

ಉಡುಪಿ: ಮೆಸ್ಕಾಂ ಪಡುಬಿದ್ರಿ ಶಾಖೆಯಲ್ಲಿ ಲೈನ್‌ಮೆನ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಉದ್ಯಾವರ ಗ್ರಾಮದ ಕಿಶೋರ್ ಕುಮಾರ್(49) ಎಂಬವರು ರಾತ್ರಿ ಮಲಗಿದಲ್ಲಿಯೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಕಳೆದ 20 ವರ್ಷಗಳಿಂದ ಲೈನ್‌ಮೆನ್ ಆಗಿದ್ದ ಇವರು, ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಸೆ.14ರಂದು ರಾತ್ರಿ ಮಲಗಿದ್ದ ಅವರು, ಬೆಳಗ್ಗೆ ಎಬ್ಬಿಸುವಾಗ ಏಳದೇ ಅಲ್ಲೇ ಮೃತಪಟ್ಟಿರುವುದು ತಿಳಿದುಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಸುರತ್ಕಲ್ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ; ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ

ಮಂಗಳೂರು: ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ನಿನ್ನೆ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್ ನ ಬದ್ರಿಯಾ ಪುರಸಭೆ ಮೇಲೆ ಕಲ್ಲೆಸೆತ ನಡೆದಿದೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನವೇ ಘಟನೆ ನಡೆದಿದ್ದು, ಪರಿಸ್ಥಿತಿ ಸ್ಥಳದಲ್ಲಿ ಉದ್ವಿಗ್ನವಾಗಿದೆ. ನಿನ್ನೆ ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್‌ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಗೆ ಸದ್ಯ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. […]

ದುಬಾೖ ಬಿಸಿಲಿನ ತಾಪಕ್ಕೆ ಕುಂದಾಪುರದ ಯುವಕ ಮೃತ್ಯು.

ಕುಂದಾಪುರ: ಯು.ಎ.ಇ.ಯಲ್ಲಿ ಬಿಸಿಲಿನ ಝಳ ತಾಳಲಾರದೆ ಕುಂದಾಪುರದ ವಿಟ್ಠಲವಾಡಿ ಯುವಕ ಶಾನ್‌ ಡಿ’ಸೋಜಾ (19) ಮೃತಪಟ್ಟ ಘಟನೆ ಸೆ.15 ರಂದು ನಡೆದಿದೆ. ದುಬಾೖಯಿಂದ ಸುಮಾರು 115 ಕಿ.ಮೀ. ದೂರದಲ್ಲಿರುವ ರಾಸ್‌ ಅಲ್‌ ಖೈಮಾದಲ್ಲಿ ಬಿಸಿಲಿನ ತಾಪಕ್ಕೆ ಗುರಿಯಾಗಿ ಆರ್‌ಎಕೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ರವಿವಾರ ಮೃತರಾಗಿದ್ದಾರೆ. ಅವರು ತಂದೆ, ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ. ಶಾನ್‌ ಡಿ’ಸೋಜಾ ಅವರು ಕುಂದಾಪುರದ, ಮೂಲತಃ ಮೂಡುಬಿದಿರೆಯ ಹೊಸಬೆಟ್ಟು ನಿವಾಸಿ ಎಲಿಯಾಸ್‌ ಸಿರಿಲ್‌ ಡಿ’ಸೋಜಾ ಮತ್ತು ಪ್ರಮೀಳಾ ಡಿ’ಸೋಜಾ […]

ಉಡುಪಿ: ಪ್ರಜಾಪ್ರಭುತ್ವದ ಸಂದೇಶ ಸಾರಿದ ಬೃಹತ್ ಮಾನವ ಸರಪಳಿ; ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗಿ

ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ಉಡುಪಿ ಜಿಲ್ಲೆಯ ಗಡಿಭಾಗಗಳಾದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ನಿಂದ ಕಾಪು ತಾಲೂಕಿನ ಹೆಜಮಾಡಿ ಸೇತುವೆ ವರೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುಮಾರು 107 ಕಿ. ಮೀ ಉದ್ದದ ಮಾನವ ಸರಪಳಿ ರಚನೆ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪರಸ್ಪರ ಕೈಯನ್ನು ಹಿಡಿದುಕೊಂಡು ಮಾನವ ಸರಪಳಿ ರಚಿಸಿದರು. ಉಡುಪಿ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ಆಯೋಜಿಸಿದ ಜಿಲ್ಲಾಮಟ್ಟದ […]