ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ “ಸಂಗೊಳ್ಳಿ ರಾಯಣ ಪುರಸ್ಕಾರ-2024”

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದೊಂದಿಗೆ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ನೀಡುವ “ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024” ಅನ್ನು ಈ ವರ್ಷ ಕನ್ನಡ ನಾಡು-ನುಡಿ – ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ನೀಡಲಾಗುತ್ತಿದೆ. ಇದೇ ಬರುವ ಸೆಪ್ಟೆಂಬರ್ 16ರ ಸೋಮವಾರದಂದು ಪ್ರಶಸ್ತಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ […]

ಕಾರ್ಕಳ: ಶಯನ್ ಡಿ. ಶೆಟ್ಟಿಗೆ ‘ಸಾಧಕರತ್ನ ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

ಕಾರ್ಕಳ: ಕ್ರೀಡಾ ಕ್ಷೇತ್ರದಲ್ಲಿ ತೋರಿದ ಉತ್ತಮ ಸಾಧನೆ ಗುರುತಿಸಿ ಕಾರ್ಕಳ ತಾಲೂಕಿನ ಬೈಲೂರು ಪ್ರೌಢಶಾಲೆ 9ನೇ ತರಗತಿಯ ವಿದ್ಯಾರ್ಥಿ ಶಯನ್ ಡಿ. ಶೆಟ್ಟಿ ಅವರಿಗೆ ನಾಡಿನ ಸಮಾಚಾರ ಸೇವಾ ಸಂಘ ಗೋಕಾಕ್ ಇವರು ಸಾಧಕರತ್ನ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಶಯನ್ ಕರಾಟೆ ಮಾಸ್ಟರ್ ಗಳಾದ ಸೋಮನಾಥ ಡಿ. ಸುವರ್ಣ ಮತ್ತು ಡಾ. ವಿಜಯಲಕ್ಷ್ಮಿ ಆರ್ ನಾಯಕ್ ಅವರ ಶಿಷ್ಯ. ಪ್ರಸ್ತುತ ಬೈಲೂರು ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ನಡೆಯುತ್ತಿರುವ ಕರಾಟೆ ತರಗತಿಯಲ್ಲಿ ತರಬೇತಿಯನ್ನು ಪಡೆಯುತ್ತಿದ್ದು, ಬೈಲೂರು ಪ್ರೌಢಶಾಲೆಯ […]

ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಸ್ವಚ್ಛತಾ ಹೀ ಸೇವಾ ಪಾಕ್ಷಿಕ ವಿಶೇಷ ಆಂದೋಲನಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತಸೆಪ್ಟಂಬರ್ 14 ರಿಂದ ಅಕ್ಟೋಬರ್ 02 ರ ವರೆಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಬೇಕು ಎಂದುಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ವಿಶೇಷ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರಲ್ಲಿ ನೈರ್ಮಲ್ಯ, […]

ಉಡುಪಿಯಲ್ಲಿ ನಾಪತ್ತೆಯಾಗಿದ್ದ ಬಾಲಕ ಕೇರಳದ ಪಾಲ್ಘಾಟ್ ನಲ್ಲಿ ಪತ್ತೆ

ಉಡುಪಿ: ಕಡಿಯಾಳಿಯ ಕೋಚಿಂಗ್ ಸೆಂಟರ್ ಗೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ ಬಾಲಕನೋರ್ವ ಇಂದು ಬೆಳಿಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದ್ದಾನೆ. ಬ್ರಹ್ಮಾವರ ಹಂದಾಡಿ ಬಾರಕೂರು ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ಆರ್ಯ(13) ನಾಪತ್ತೆಯಾಗಿದ್ದ ಬಾಲಕ. ಎಂಟನೇ ತರಗತಿಯಲ್ಲಿ ಓದುತ್ತಿದ್ದ ಆರ್ಯ ಭಾನುವಾರ ಬೆಳಿಗ್ಗೆ ಉಡುಪಿ ಕಡಿಯಾಳಿಯಲ್ಲಿರುವ ಆಕಾಶ್ ಕೋಚಿಂಗ್ ಇನ್ ಸ್ಟಿಟ್ಯೂಟ್ ಗೆಂದು ಹೋಗಿದ್ದನು. ಆದರೆ, ಬಳಿಕ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದನು. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ […]

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ವಿಧಿವಶ.

ಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕದ ಸಂಪಾದಕ ವಸಂತ ನಾಡಿಗೇರ ಅವರು ಸೋಮವಾರ (ಸೆ.09) ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾದರು. ನಾಡಿಗೇರ ಅವರು ಪತ್ನಿ, ಪುತ್ರ ಹಾಗೂ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೂರುವರೆ ದಶಕಗಳ ಕಾಲ ಕನ್ನಡ ಪತ್ರಿಕೋದ್ಯಮದಲ್ಲಿ ವಿಶೇಷ ಸೇವೆ ಸಲ್ಲಿಸಿದ್ದಾರೆ. ತಮ್ಮ ವಿಶಿಷ್ಟ ಮಾತಿನ ಶೈಲಿ ಹಾಗೂ ವಿಭಿನ್ನ ಹೆಡ್​ಲೈನ್​ಗಳ ಮೂಲಕವೇ ಪತ್ರಿಕೋದ್ಯಮದಲ್ಲಿ ಖ್ಯಾತಿ ಗಳಿಸಿದ್ದರು. ವಸಂತ್​ ಸರ್​ ಎಂದೇ ಸುದ್ದಿಮನೆಗಳಲ್ಲಿ ಪ್ರಸಿದ್ಧರಾಗಿದ್ದರು.ವಿಜಯಕರ್ನಾಟಕ ಹಾಗೂ ವಿಶ್ವವಾಣಿ ನಂತರ ಕಳೆದ […]