ಮಣಿಪಾಲ: ಮಹಿಳೆ ನಾಪತ್ತೆ

ಮಣಿಪಾಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಂಚಿ ಕೊಡಿ ನಿವಾಸಿ ಜಯಲಕ್ಷ್ಮಿ(65) ಎಂಬವರು ಆ.30ರಂದು ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತದಲ್ಲಿ ಮೊದಲ ‘ಮಂಕಿಪಾಕ್ಸ್’ ಪ್ರಕರಣ ಪತ್ತೆ: ಭಯ ಪಡುವ ಅಗತ್ಯವಿಲ್ಲ; ಕೇಂದ್ರ ಆರೋಗ್ಯ ಸಚಿವಾಲಯ.

ನವದೆಹಲಿ: ಇತ್ತೀಚಿಗೆ ಹೊರ ದೇಶದಿಂದ ಭಾರತಕ್ಕೆ ಬಂದ ವ್ಯಕ್ತಿಯೋರ್ವನಿಗೆ ‘ಮಂಕಿಪಾಕ್ಸ್ ‘ ತಗುಲಿರುವುದಾಗಿ ಶಂಕಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ರೋಗಿಯನ್ನು ಆಸ್ಪತ್ರೆಯೊಂದರಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಆತನ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದೆ. ಮಂಕಿಪಾಕ್ಸ್ ಇದೆಯೇ ಎಂಬುದನ್ನು ತಿಳಿಯಲು ರೋಗಿಯ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತಿದೆ. ಶಿಷ್ಟಾಚಾರದ ಪ್ರಕಾರ ಪ್ರಕರಣವನ್ನು ನಿರ್ವಹಿಸಲಾಗುತ್ತಿದೆ ಮತ್ತು ಮಂಕಿಪಾಕ್ಸ್ ಮೂಲ ತಿಳಿಯಲು ಹಾಗೂ ದೇಶದೊಳಗೆ ಅದರ ಪರಿಣಾಮವನ್ನು ನಿರ್ಣಯಿಸಲು ಸಂಪರ್ಕ ಪತ್ತೆ […]
ಮಣಿಪಾಲ: ಬಿಜೆಪಿ ಪ್ರತಿಭಟನೆಯಲ್ಲಿ ಸಿಎಂಗೆ ಅವಮಾನ; ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲು.

ಮಣಿಪಾಲ: ಮಣಿಪಾಲದ ಸಿಂಡಿಕೇಟ್ ಸರ್ಕಲ್ನಲ್ಲಿ ಸೆ.6ರಂದು ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಅವಮಾನಿಸಿದ ಆರೋಪದಡಿ ಬಿಜೆಪಿ ಮುಖಂಡರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರದ ಶಿಕ್ಷಕರೊಬ್ಬರಿಗೆ ನೀಡಲಾದ ಶಿಕ್ಷಕ ಪ್ರಶಸ್ತಿಯನ್ನು ತಡೆ ಹಿಡಿದಿರುವ ರಾಜ್ಯ ಸರಕಾರ ವಿರುದ್ಧ ಪ್ರತಿಭಟನೆ ನಡೆಸಲಾಗಿದ್ದು, ಇದರಲ್ಲಿ ಆರೋಪಿಗಳು ಮುಖ್ಯಮಂತ್ರಿಗಳಿಗೆ ಹಿಂದೂ ವಿರೋಧಿ ಸಿದ್ದರಾಮಯ್ಯ ಅವರನ್ನು ತೊಲಗಿಸಿ ಎಂದು ಕೂಗಿ ಅವರ ಪ್ರತಿಕೃತಿಯನ್ನು ಸಿಂಡಿಕೇಟ್ ಸರ್ಕಲ್ನ […]
ತಕ್ಷಣ ಬೇಕಾಗಿದ್ದಾರೆ.

ಉಡುಪಿ:ಮಣಿಪಾಲ- ಮಂಗಳೂರಿನ ಅತಿದೊಡ್ಡ ಪ್ರೊಡಕ್ಷನ್ ಇಂಡಸ್ಟ್ರಿಯಲ್ಲಿ ತಕ್ಷಣ ಬೇಕಾಗಿದ್ದಾರೆ.
ಇಂದಿನಿಂದ ರಾಜ್ಯದ ವಿವಿದೆಡೆ ಭಾರಿ ಮಳೆಯಾಗುವ ಸಾಧ್ಯತೆ: ಉಡುಪಿ, ದ.ಕ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ.

ಬೆಂಗಳೂರು: ರಾಜ್ಯದ ವಿವಿಧೆಡೆ ಶನಿವಾರ ಭಾರಿ ಮಳೆಯಾಗಿದ್ದು, ಇಂದೂ ಕೂಡಾ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ 8 ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಭಾರೀ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ ಹಾಸನ ಹಾಗೂ ಚಿಕ್ಕಮಗಳೂರಿಗೆ ಭಾರೀ […]