ಮಣಿಪಾಲ: ಉಚಿತ ಗ್ಲುಕೋಮಾ ತಪಾಸಣಾ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ: ಗ್ಲುಕೋಮಾ ಕಾಯಿಲೆಯು ಶಾಶ್ವತ ಕುರುಡುತನಕ್ಕೆ ಒಂದು ಪ್ರಮುಖ ಕಾರಣವಾಗಿದೆ. ಗ್ಲುಕೋಮಾದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಗ್ಲುಕೋಮಾ ವಾರವನ್ನು ಪ್ರತಿವರ್ಷ ಮಾರ್ಚ್ ಎರಡನೇ ವಾರದಲ್ಲಿ ವಿಶ್ವಾದ್ಯಂತ ಆಚರಿಸಲಾಗುತ್ತದೆ. ವಿಶ್ವ ಗ್ಲುಕೋಮಾ ವಾರ 2022 ರ ಅಂಗವಾಗಿ ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರ ವಿಭಾಗ ಮತ್ತು ಆಪ್ಟೋಮೆಟ್ರಿ ವಿಭಾಗ –MCHP ಇವರ ಸಂಯುಕ್ತ ಆಶ್ರಯದಲ್ಲಿ 7 ನೇ ಮಾರ್ಚ್ 2022ರಂದು ಎರಡನೇ ಮಹಡಿಯಲ್ಲಿರುವ ನೇತ್ರಶಾಸ್ತ್ರ ವಿಭಾಗದ ಹೊರ ರೋಗಿ ವಿಭಾಗದಲ್ಲಿ ಉಚಿತ […]
ಕಾರ್ಕಳ: ಪೂರ್ಣಿಮಾ ಸಿಲ್ಕ್ಸ್ ಮಳಿಗೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

ಕಾರ್ಕಳ: ಕಾರ್ಕಳ ಜೋಡುರಸ್ತೆ ಪೂರ್ಣಿಮಾ ಪೂರ್ಣಿಮಾ ಸಿಲ್ಕ್ಸ್ ವಸ್ತ್ರ ಮಳಿಗೆಗೆ ಶಿವಮೊಗ್ಗ ಸಂಸದ ರಾಘವೇಂದ್ರ ಯಡಿಯೂರಪ್ಪ ಭೇಟಿ ನೀಡಿದರು. ಅವರು, ಯಾವುದೇ ನಗರ, ಪಟ್ಟಣ ಇರಲಿ ಅದರ ಅಭಿವೃದ್ಧಿ ಕಾರ್ಯದಲ್ಲಿ ಬೃಹತ್ ಮಾಲ್‌ಗಳ ಪಾತ್ರ ಮಹತ್ವದಾಗಿದ್ದು, ಪೂರ್ಣಿಮಾ ಲೈಫ್ ಸ್ಟೈಲ್ ನಾಗರಿಕರಿಗೆ ಹೊಸತನ ನೀಡಲಿ ಎಂದು ಇದೇ ಸಂದರ್ಭದಲ್ಲಿ ರಾಘವೇಂದ್ರ ಯಡಿಯೂರಪ್ಪ ಹೇಳಿದರು. ಈ ಸಂದರ್ಭದಲ್ಲಿ ರಾಘವೇಂದ್ರ ಯಡಿಯೂರಪ್ಪ ರವರನ್ನು ರವಿ ಪ್ರಕಾಶ್ ಪ್ರಭು ರವರು ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಮಾ.10ಕ್ಕೆ ಪ್ರೈಮ್ ಮಾಲ್‌ನಲ್ಲಿ […]
ಉಡುಪಿ: ಮಟ್ಟಿ ಲಕ್ಷ್ಮೀನಾರಾಯಣ ರಾವ್ ಗೆ ಸೇವಾ ಭೂಷಣ ಪ್ರಶಸ್ತಿ ಪ್ರದಾನ

ಉಡುಪಿ: ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ಎಸ್. ಗೋಪಾಲಕೃಷ್ಣರ ನೆನಪಿನಲ್ಲಿ ನೀಡುವ ‘ಸೇವಾ ಭೂಷಣ ಪ್ರಶಸ್ತಿ’ ಅನ್ನು ನಿವೃತ್ತ ಬ್ಯಾಂಕ್ ಅಧಿಕಾರಿ ಮಟ್ಟಿ ಲಕ್ಷ್ಮೀನಾರಾಯಣ ರಾವ್ ಅವರಿಗೆ ಕಾಣಿಯೂರು ಮಠಾಧೀಶ ವಿದ್ಯಾವಲ್ಲಭತೀರ್ಥ ಶ್ರೀಪಾದರು ನಗರದ ಪೇಜಾವರ ಮಠದ ರಾಮವಿಠಲ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಿದರು. ಧರ್ಮದರ್ಶಿ ಹರಿಕೃಷ್ಣ ಪುನರೂರು ಅತಿಥಿಯಾಗಿ ಭಾಗವಹಿಸಿದ್ದರು. ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಉಪಾಧ್ಯಕ್ಷರಾದ ಪಿ. ಕಿಶನ್ ಹೆಗ್ಡೆ, ವಿ. ಜಿ. ಶೆಟ್ಟಿ, ಎಸ್. ವಿ. ಭಟ್ ಉಪಸ್ಥಿತರಿದ್ದರು. […]
ಮಾ.1: ಕಾಯಕ ಶರಣರ ಜಯಂತಿ

ಉಡುಪಿ, ಫೆ.28: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ವತಿಯಿಂದ ಕಾಯಕ ಶರಣರ ಜಯಂತಿ ಆಚರಣೆಯು ಮಾರ್ಚ್ 1 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಮಾ.1: ಡಾ.ಶಿವರಾಮ ಕಾರಂತ ಥೀಂ ಪಾರ್ಕ್ ಆವರಣದ ಸಂಗೀತ ಕಾರಂಜಿ, ವೀಕ್ಷಣಾ ಗ್ಯಾಲರಿ ಉದ್ಘಾಟನೆ

ಉಡುಪಿ, ಫೆ.28: ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಬ್ರಹ್ಮಾವರ ತಾಲೂಕು ಕೋಟ ಡಾ. ಶಿವರಾಮ ಕಾರಂತ ಥೀಂ ಪಾರ್ಕ್ ಆವರಣದಲ್ಲಿ ನಿರ್ಮಿಸಲಾದ ವಿನೂತನ ಮಾದರಿಯ ಸಂಗೀತ ಕಾರಂಜಿ ಹಾಗೂ ವೀಕ್ಷಣಾ ಗ್ಯಾಲರಿಯ ಉದ್ಘಾಟನಾ ಸಮಾರಂಭವು ಮಾರ್ಚ್ 1 ರಂದು ಸಂಜೆ 6 ಗಂಟೆಗೆ ಕೋಟ ಡಾ. ಶಿವರಾಮ ಕಾರಂತ ಥೀಂ ಪಾರ್ಕ್ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. […]