ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ (ಶುಭದಾ ಆಂಗ್ಲ ಮಾಧ್ಯಮ ಶಾಲೆ) ನಲ್ಲಿ ಅಪರಂಜಿ ಬೇಸಿಗೆ ಶಿಬಿರ ಸಂಪನ್ನ.

ಬೈಂದೂರು: ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್( ಶುಭದಾ ಆಂಗ್ಲ ಮಾಧ್ಯಮ ಶಾಲೆ) ಆಯೋಜಿಸಿದ ಅಪರಂಜಿ ಬೇಸಿಗೆ ಶಿಬಿರ ಸಂಪನ್ನಗೊಂಡಿತು. ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ (ಶುಭದಾ ಆಂಗ್ಲ ಮಾಧ್ಯಮ ಶಾಲೆ) ಕಿರಿಮಂಜೇಶ್ವರದಲ್ಲಿ ಏಪ್ರಿಲ್ 15 ರಿಂದ 19ರ ವರೆಗೆ ಐದು ದಿನಗಳ ಕಾಲ ನಡೆದ ಚಿಣ್ಣರ ಬೇಸಿಗೆ ಶಿಬಿರ ‘ಅಪರಂಜಿ’ ಸಂಪನ್ನಗೊಂಡಿತು.ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಇದರ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಗಣೇಶ […]
ದಿ.ಮೇಟಿ ಮುದಿಯಪ್ಪ ಯುವ ಕಥಾ ಸ್ಪರ್ಧೆ – ಡಾ. ನಮ್ರತಾ ಬಿ ಪ್ರಥಮ

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ಸಾಹಿತಿ, ಕವಿ ದಿವಂಗತ ಮೇಟಿ ಮುದಿಯಪ್ಪ ನೆನಪಿನ ಉಡುಪಿ ಜಿಲ್ಲಾಮಟ್ಟದ ಯುವ ಕಥಾ ಸ್ಪರ್ಧೆಯಲ್ಲಿ ಡಾ. ನಮೃತಾ ಬಿ. ಅವರು ಪ್ರಥಮ ಬಹುಮಾನದೊಂದಿಗೆ ಆಯ್ಕೆಯಾಗಿರುತ್ತಾರೆ. ಬಹುಮಾನವು ನಗದು ರೂಪಾಯಿ 5000 ಹಾಗೂ ಪ್ರಶಸ್ತಿ ಪತ್ರ, ಫಲಕ ಒಳಗೊಂಡಿರುತ್ತದೆ. ದ್ವಿತೀಯ ಬಹುಮಾನ ನಗದು ಮೂರು ಸಾವಿರದೊಂದಿಗೆ ಡಾ. ಜಿ.ಪಿ. ನಾಗರಾಜ್ ಆಯ್ಕೆಯಾಗಿರುತ್ತಾರೆ., ತೀರ್ಪುಗಾರರ ಮೆಚ್ಚುಗೆ ಬಹುಮಾನಕ್ಕಾಗಿ ರಾಮಾಂಜಿ ನಮ್ಮಭೂಮಿ, ಮಂಜುನಾಥ ಕಾರ್ತಟ್ಟು ಹಾಗೂ ಮಂಜುನಾಥ […]
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಿಂಕೋಪ್ ಮತ್ತು ಪೇಸ್‌ಮೇಕರ್ ವಿಶೇಷ ಕ್ಲಿನಿಕ್‌ಗಳ ಉದ್ಘಾಟನೆ.

ಮಣಿಪಾಲ: ಉತ್ತಮ ಆರೋಗ್ಯ ಸೇವೆಗಳನ್ನು ನೀಡುವ ಗುರಿಯನ್ನು ಹೊಂದಿರುವ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹೃದ್ರೋಗ ವಿಭಾಗವು ವಿಶೇಷ ಚಿಕಿತ್ಸೆ ನೀಡಲು ಸಿಂಕೋಪ್ ಮತ್ತು ಪೇಸ್‌ಮೇಕರ್ ಕ್ಲಿನಿಕ್‌ಗಳನ್ನು ಉದ್ಘಾಟಿಸಿದೆ. ಇದು ಕರ್ನಾಟಕದಲ್ಲಿ ಮೊದಲ ಬಾರಿಗೆ ಮತ್ತು ಈ ಕ್ಲಿನಿಕ್ ದೇಶದ ಕೆಲವೇ ಕೆಲವು ವಿಶೇಷ ಸಿಂಕೋಪ್ ಕ್ಲಿನಿಕ್‌ಗಳಲ್ಲಿ ಒಂದಾಗಿದೆ. ಈ ಕ್ಲಿನಿಕ್ ಸಿಂಕೋಪ್ ರೋಗಿಗಳಿಗೆ ಅತ್ಯಾಧುನಿಕ ಆರೈಕೆಯನ್ನು ಒದಗಿಸಲಿದೆ. ಸಿಂಕೋಪ್ ಅಂದರೇ , ಇದು ಮೂರ್ಛೆ ರೂಪದ ಅಥವಾ ಹಾದುಹೋಗುವಿಕೆ ಎಂದು ಕರೆಯಲ್ಪಡುವ ಮೆದುಳು […]
ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ನಾಳೆ ಅಷ್ಟಪವಿತ್ರ ನಾಗಮಂಡಲೋತ್ಸವ.

ಬ್ರಹ್ಮಾವರ: ಶ್ರೀ ಕ್ಷೇತ್ರ ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಪಂಚಮೀಕಾನು ನಾಗ ಸನ್ನಿಧಿಯಲ್ಲಿ ಎ.18 ಗುರುವಾರ ಅಷ್ಟಪವಿತ್ರ ನಾಗಮಂಡಲೋತ್ಸವ ನಡೆಯಲಿದೆ. ನಾಳೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು: ಸಂಜೆ 6-15ರಿಂದ: ಪುಣ್ಯಾಹ ಸರ್ಪಸೂಕ್ತ ಹೋಮ, ಪುರುಷಸೂಕ್ತ ಹೋಮ, ಪಾರಾಯಣ. ಬೆಳಿಗ್ಗೆ 7-30ರಿಂದ: ಕಲಶಾಭಿಷೇಕ ಪ್ರಾರಂಭ. ಬೆಳಿಗ್ಗೆ 9-00ರಿಂದ: ಬ್ರಹ್ಮಕಲಶಾಭಿಷೇಕ ಪೂಜೆ, ದಾನಾದಿಗಳು, ದಶದಾನ, ವಟುಆರಾಧನೆ, ಬ್ರಾಹ್ಮಣ ಆರಾಧನೆ, ಕನ್ನಿಕಾ ಪೂಜೆ, ಸುವಾಸಿನಿ ಪೂಜೆ, ದಂಪತಿ ಪೂಜೆ, ಆಚಾರ್ಯ ಪೂಜೆ, ಮಹಾಪೂಜಾ, ಸಂದರ್ಶನ, ಫಲ್ಲಪೂಜೆ ಹಾಗೂ ಮಧ್ಯಾಹ್ನ 12.30ಕ್ಕೆ […]
ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನ: ನಾಗಮಂಡಲ ಹೊರೆಕಾಣಿಕೆ ಸಮರ್ಪಣೆ.

ಬ್ರಹ್ಮಾವರ: ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನದ ಪಂಚಮೀಕಾನು ನಾಗ ಸನ್ನಿಧಿಯಲ್ಲಿ ಎ.13ರಿಂದ 19ರ ತನಕ ನಡೆಯಲಿರುವ ಸಮಗ್ರ ಜೀರ್ಣೋದ್ಧಾರಾಂಗ ಪುನಃ ಪ್ರತಿಷ್ಠಾಪನಾ ಮಹೋತ್ಸವ, ನಾಗಮಂಡಲ ಪ್ರಯುಕ್ತ ರವಿವಾರ ಹೊರೆಕಾಣಿಕೆ ಸಮರ್ಪಣೆ ಭವ್ಯ ಮೆರವಣಿಗೆಯಿಂದ ಜರಗಿತು. ಕುಂಜಾಲಿನ ನೀಲಾವರ ಕ್ರಾಸ್ ನಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್. ರಘುರಾಮ ಮಧ್ಯಸ್ಥ ಅವರು ಮೆರವಣಿಗೆಗೆ ಚಾಲನೆ ನೀಡಿದರು. ಸದಸ್ಯರಾದ ಸುಧೀರ್ ಕುಮಾರ್ ಶೆಟ್ಟಿ, ವಿಶ್ವನಾಥ ಶೆಟ್ಟಿ ಮಟಪಾಡಿ, ಅನೂಪ್ ಕುಮಾರ್ ಶೆಟ್ಟಿ, ಹೇಮ ವಿ. ಬಾಬ್ರಿ, ಕೆ. ತಮ್ಮಯ್ಯ […]