ಉಡುಪಿ ಪರ್ಯಾಯೋತ್ಸವದಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ಸಕಲ ಸಿದ್ಧತೆ..!

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಜರಗುವ ಪ್ರಸಕ್ತ ಸಾಲಿನ ಪರ್ಯಾಯ ಮಹೋತ್ಸವದ ಹಿನ್ನೆಲೆ, ಜಿಲ್ಲೆಯ ಎಲ್ಲಾ ಹೋಟೆಲ್, ರೆಸಾರ್ಟ್, ಹೋಮ್ ಸ್ಟೇ ಹಾಗೂ ಪ್ರವಾಸಿ ಸ್ಥಳಗಳನ್ನು ದೀಪಾಲಂಕೃತಗೊಳಿಸುವುದರೊ೦ದಿಗೆ, ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಕೊಠಡಿಗಳನ್ನು ಕಾಯ್ದಿರಿಸಿ, ಸ್ವಚ್ಛತೆ, ಸುರಕ್ಷತೆ ಕಾಪಾಡುವುದರೊಂದಿಗೆ ಜಿಲ್ಲೆಯ ಪ್ರಸಿದ್ಧ ಊಟ ಉಪಹಾರಗಳನ್ನು ಒದಗಿಸಿ, ಬರುವಂತ ಪ್ರವಾಸಿಗರನ್ನು ಸತ್ಕರಿಸಿ ಶ್ರೀ ಕೃಷ್ಣ ಮಠದ ಪರ್ಯಾಯೋತ್ಸವಕ್ಕೆ ಮೆರಗನ್ನು ಒದಗಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

ಉಡುಪಿ ಪುತ್ತಿಗೆ ಪರ್ಯಾಯ ಮಹೋತ್ಸವ: ಹೊರಕಾಣಿಕೆ ಮೆರವಣಿಗೆಗೆ ಅದ್ಧೂರಿ ಚಾಲನೆ

ಉಡುಪಿ: ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಹೊರಕಾಣಿಕೆ ಮೆರವಣಿಗೆಗೆ ಉಡುಪಿ ಸಂಸ್ಕೃತ ಕಾಲೇಜಿನ ಬಳಿ ಇಂದು ಚಾಲನೆ ನೀಡಲಾಯಿತು. ಮಠದ ದಿವಾನ ನಾಗರಾಜ್ ಆಚಾರ್ಯ, ಪರ್ಯಾಯ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಕೆ. ರಘುಪತಿ ಭಟ್ ಹಾಗೂ ಪುತ್ತಿಗೆ ಮಠದ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಅವರು ಸಾಂಪ್ರದಾಯಿಕ ಹೊರಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಸಂಸ್ಕೃತಿ ಕಾಲೇಜಿನ ಬಳಿಯಿಂದ ಆರಂಭಗೊಂಡ ಮೆರವಣಿಗೆ ರಥಬೀದಿಯ ಮೂಲಕ ಪುತ್ತಿಗೆ ಮಠಕ್ಕೆ ಸಾಗಿಬಂತು. ತಟ್ಟಿರಾಯ, ನಾಸಿಕ್ ಬ್ಯಾಂಡ್, […]

ಅಯೋಧ್ಯೆ ಶ್ರೀರಾಮಮಂದಿರ ಲೋಕಾರ್ಪಣೆ ದಿನ ಸಿದ್ದವಾಗಲಿದೆ 7000kg “ರಾಮ ಹಲ್ವಾ”

ಅಯೋಧ್ಯೆ: ಜನವರಿ 22ರಂದು ನಡೆಯಲಿರುವ ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆಗೆ ಸಕಲ ಸಿದ್ಧತೆ ನಡೆಯುತ್ತಿದ್ದು, ಇಡೀ ದೇಶವೇ ಈ ಹಬ್ಬವನ್ನು ಸಂಭ್ರಮಪಡುವ ದಿನವಾಗಿದೆ. ಈ ಹಬ್ಬದ ಮೆರುಗನ್ನು ಹೆಚ್ಚಿಸಲು ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಬಾಣಸಿಗರೊಬ್ಬರು ವಿಶೇಷ ‘ರಾಮ ಹಲ್ವಾ’ ತಯಾರಿಸಲಿದ್ದಾರೆ. ಅಂತಾರಾಷ್ಟ್ರೀಯ ಖ್ಯಾತಿಯ ಬಾಣಸಿಗ, ನಾಗ್ಪುರ ಮೂಲದ ವಿಷ್ಣು ಮನೋಹರ್‌ ಅವರು ರಾಮಮಂದಿರ ಲೋಕಾರ್ಪಣೆ ದಿನ ವಿಶೇಷ ‘ರಾಮ ಹಲ್ವಾ’ತಯಾರಿಸಲಿದ್ದಾರೆ. ಸುಮಾರು 7 ಸಾವಿರ ಕೆ.ಜಿ. ರಾಮ ಹಲ್ವಾಗೆ 12 ಸಾವಿರ ಲೀಟರ್‌ ನೀರಿನ ಸಾಮರ್ಥ್ಯದ ಬೃಹತ್‌ ಕಡಾಯಿಯೊಂದನ್ನು ಕೂಡ […]

ಮಿಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಕಾರ್ಕಳ: ಜ.6 ರಂದು ನಡೆದ 20ನೇ ವರ್ಷದ ಮಿಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 07 ಜೊತೆ ಅಡ್ಡಹಲಗೆ: 03 ಜೊತೆ ಹಗ್ಗ ಹಿರಿಯ: 23 ಜೊತೆ ನೇಗಿಲು ಹಿರಿಯ: 34 ಜೊತೆ ಹಗ್ಗ ಕಿರಿಯ: 31 ಜೊತೆ ನೇಗಿಲು ಕಿರಿಯ: 132 ಜೊತೆ ಒಟ್ಟು ಕೋಣಗಳ ಸಂಖ್ಯೆ: 230 ಜೊತೆ ಕನೆಹಲಗೆ: (6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ) ಬಾರ್ಕೂರು ಶಾಂತಾರಾಮ ಶೆಟ್ಟಿ […]

ಉಡುಪಿ ಪುತ್ತಿಗೆ ಪರ್ಯಾಯೋತ್ಸವ: ಜ.8ರಂದು ಪುತ್ತಿಗೆ ಶ್ರೀಗಳ ಪುರಪ್ರವೇಶ, ಪೌರಸನ್ಮಾನ

ಉಡುಪಿ: ಉಡುಪಿ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಅಂಗವಾಗಿ ಸುಗುಣೇಂದ್ರತೀರ್ಥ ಶ್ರೀಪಾದರ ಹಾಗೂ ಸುಶ್ರೀಂದ್ರತೀರ್ಥ ಶ್ರೀಪಾದರ ಪುರಪ್ರವೇಶ ಮತ್ತು ಪೌರಸನ್ಮಾನ ಕಾರ್ಯಕ್ರಮ ಜನವರಿ 8ರ ಸೋಮವಾರ ಸಂಜೆ 7 ಗಂಟೆಗೆ ಉಡುಪಿ ರಥಬೀದಿಯ ಆನಂದತೀರ್ಥ ಮಂಟಪದಲ್ಲಿ ನಡೆಯಲಿದೆ ಎಂದು ಪರ್ಯಾಯ ಸಮಿತಿಯ ಅಧ್ಯಕ್ಷ ಡಾ. ಎಚ್ ಎಸ್ ಬಲ್ಲಾಳ್ ಹೇಳಿದರು. ಉಡುಪಿಯ ಪುತ್ತಿಗೆ ಮಠದಲ್ಲಿ ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಗಳು ಜನವರಿ 18ರಂದು ತಮ್ಮ ಶಿಷ್ಯ […]