31ನೇ ವರ್ಷದ ಅಡ್ವೆ ನಂದಿಕೂರು “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಪಡುಬಿದ್ರೆ: ಶನಿವಾರ ನಡೆದ 31ನೇ ವರ್ಷದ ಅಡ್ವೆ ನಂದಿಕೂರು “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾoಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 09 ಜೊತೆ ಅಡ್ಡಹಲಗೆ: 03 ಜೊತೆ ಹಗ್ಗ ಹಿರಿಯ: 17 ಜೊತೆ ನೇಗಿಲು ಹಿರಿಯ: 30 ಜೊತೆ ಹಗ್ಗ ಕಿರಿಯ: 21 ಜೊತೆ ನೇಗಿಲು ಕಿರಿಯ: 84 ಜೊತೆ ಒಟ್ಟು ಕೋಣಗಳ ಸಂಖ್ಯೆ: 164 ಜೊತೆ ಕನೆಹಲಗೆ: ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: […]
ರಾಜ್ಯದ ಮುಜರಾಯಿ ಇಲಾಖೆಗೆ ಸೇರಿದ 34 ಸಾವಿರ ದೇಗುಲದಲ್ಲಿ ವಿಶೇಷ ಪೂಜೆ: ಸಚಿವ ರಾಮಲಿಂಗಾ ರೆಡ್ಡಿ

ಉಡುಪಿ: ವಡಭಾಂಡೇಶ್ವರ ದೇಗುಲ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ಹೆಚ್ಚಿನ ಅನುದಾನ ಕೊಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು. ಮಲೈಯಲ್ಲಿರುವ ಪುರಾಣ ಪ್ರಸಿದ್ಧ ವಡಭಾಂಡೇಶ್ವರ ಬಲರಾಮನ ದೇಗುಲಕ್ಕೆ ಭಾನುವಾರ ಭೇಟಿ ನೀಡಿ, ಜೀರ್ಣೋದ್ಧಾರ ಕಾಮಗಾರಿ ಅವಲೋಕಿಸಿ ಮಾತನಾಡಿದರು. ಆಯೋಧ್ಯೆಯಲ್ಲಿ ರಾಮನ ಪ್ರತಿಷ್ಠಾ ಮಹೋತ್ಸವದ ಹಿನ್ನೆಯಲ್ಲಿ ರಾಜ್ಯದ ಮುಜರಾಯಿ ಇಲಾಖೆಗೆ ಸೇರಿದ 34 ಸಾವಿರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಲು 15 ದಿನದ ಹಿಂದೆಯೇ ಆದೇಶ ಹೊರಡಿಸಿದ್ದೇನೆ. ರಾಜ್ಯ ಸರ್ಕಾರ ಸಿ ದರ್ಜೆಯ ಎಲ್ಲ ದೇಗುಲವನ್ನು ಅಭಿವೃದ್ಧಿ ಮಾಡಬೇಕಿದೆ. […]
ಅಯೋಧ್ಯೆ ಶ್ರೀರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪಣೆ: ನಾಳೆ ಉಡುಪಿಯಲ್ಲಿ ಮೂರು ಬಸ್ಸುಗಳಿಂದ ಉಚಿತ ಸೇವೆ

ಉಡುಪಿ: ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪಣೆಯ ಅಂಗವಾಗಿ ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಸಹ ವಿವಿಧ ಸಂಘಟನೆಗಳು ವಿವಿಧ ರೀತಿಯಲ್ಲಿ ಸಂಭ್ರಮವನ್ನು ಹಂಚಿಕೊಳ್ಳುತ್ತಿದ್ದು, ಹಾಗೆಯೇ ನಾಳೆ ಉಡುಪಿಯಿಂದ ಹೆಬ್ರಿಗೆ ತೆರಳುವ ಎಸ್ ಆರ್ ಎಮ್, ಎಸ್ ಡಿ ಎಮ್, ಮುಟ್ಲುಪಾಡಿಯಿಂದ ಉಡುಪಿಗೆ ತೆರಳುವ ಎಸ್ ಎಮ್ ಎಮ್ ಎಸ್ ಬಸ್ಸಿನವರು ದಿನವಿಡೀ ಉಚಿತ ಪ್ರಯಾಣವನ್ನು ನಾಗರಿಕರಿಗೆ ಒದಗಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸಚಿವ ರಾಮಲಿಂಗಾ ರೆಡ್ಡಿ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಉಡುಪಿ: ಸಾರಿಗೆ ಮತ್ತು ಮುಜರಾಯಿ ಸಚಿವರಾದ ಡಾ.ರಾಮಲಿಂಗಾ ರೆಡ್ಡಿ ಅವರು ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಶ್ರೀ ಕೃಷ್ಣ ಮತ್ತು ಮುಖ್ಯಪ್ರಾಣ ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೆಂದ್ರ ತೀರ್ಥ ಶ್ರೀಪಾದರನ್ನು ಭೇಟಿಯಾದರು. ಹಾಗೂ ಶ್ರೀಪಾದರು ಅವರನ್ನು ಗೌರವಿಸಿದರು.
ಉಚಿತ ಆರೋಗ್ಯಕರ ವೃದ್ಧಾಪ್ಯದ ಜಾಗೃತಿ ಮತ್ತು ಸ್ಕ್ರೀನಿಂಗ್ ಪರೀಕ್ಷೆ (ಸಮಗ್ರ ಆರೋಗ್ಯ ತಪಾಸಣೆ) ಕಾರ್ಯಕ್ರಮ

ಉಡುಪಿ: ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆಯು ಆರೋಗ್ಯವಂತ ವೃದ್ಧಾಪ್ಯದ ಅಧ್ಯಯನ ಕೇಂದ್ರ ಮತ್ತು ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ಸಹಯೋಗದಲ್ಲಿ ಹಿರಿಯ ನಾಗರಿಕರ ಸಮುದಾಯಕ್ಕಾಗಿ ಮಹತ್ವದ ಕಾರ್ಯಕ್ರಮವನ್ನು ಪ್ರಕಟಿಸಿದೆ. 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವಯಸ್ಕರಿಗೆ ಉಚಿತ ಆರೋಗ್ಯಕರ ವೃದ್ಧಾಪ್ಯದ ಜಾಗೃತಿ ಮತ್ತು ಸ್ಕ್ರೀನಿಂಗ್ ಪರೀಕ್ಷೆ ಕಾರ್ಯಕ್ರಮವನ್ನು 2024 ರ ಜನವರಿ 23 ಮತ್ತು 24 ರಂದು ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1:00 ರವರೆಗೆ ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯ ಮೂರನೇ […]