ಜ್ಞಾನಸುಧಾದ ಇಬ್ಬರಿಗೆ ರಾಜ್ಯೋತ್ಸವ ಬಾಲ ಪ್ರಶಸ್ತಿ
ಉಡುಪಿ: ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ಮಂಗಳೂರಿನ ಇನ್ವೆಂಜರ್ ಫೌಂಡೇಶನ್, ಕಟಪಾಡಿಯ ಪ್ರಥಮ್ ಮ್ಯಾಜಿಕ್ ವಲ್ರ್ಡ್ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕಂತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಎಸ್.ವಿ.ಎಸ್ ಬಯಲು ರಂಗಮಂದಿರ ಕಟಪಾಡಿಯಲ್ಲಿ ನಡೆದ ಸಮಾರಂಭದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು.ಸಮ್ಯಾ ಎಸ್. ಹೆಗ್ಡೆ ಹಾಗೂ ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಶಾಲೆಯ 8ನೇ ತರಗತಿಯ ಕು.ಅನ್ವಿ ಎಚ್. ಅಂಚನ್ ಇವರಿಗೆ 2023ನೇ ಸಾಲಿನ ಕರ್ನಾಟಕ […]
ಕಸ್ತೂರ್ಬಾ ಆಸ್ಪತ್ರೆಯ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆಎಚ್ – ಸಿಸಿಎಲ್) 2024ರ ಜರ್ಸಿ ಬಿಡುಗಡೆ
ಮಣಿಪಾಲ: ಕಸ್ತೂರ್ಬಾ ಹಾಸ್ಪಿಟಲ್ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL) ನ 3 ನೇ ಆವೃತ್ತಿಯು ಜನವರಿ 5 ರಿಂದ ಜನವರಿ 07 ರವರೆಗೆ ಎಂಡ್ ಪಾಯಿಂಟ್ ಮೈದಾನ, ಮಾಹೆ ಮಣಿಪಾಲದಲ್ಲಿ ನಡೆಯಲಿದೆ. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಿಂದ ಆಯೋಜಿಸಲ್ಪಟ್ಟಿರುವ ಈ ಕ್ರಿಕೆಟ್ ಲೀಗ್ ಕಾರ್ಪೊರೇಟ್ ಕಂಪನಿಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು ಮಾಧ್ಯಮ ಪಾಲುದಾರರನ್ನು ಪೂರೈಸುತ್ತದೆ. ಈ ಕಾರ್ಯಕ್ರಮಕ್ಕೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ ಗಂಟಿಹೊಳೆ ಅವರು ಆಟಗಾರರ ಜರ್ಸಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. […]
ಹಲವು ವೈವಿಧ್ಯತೆಗಳಿಗೆ ಸಾಕ್ಷಿಯಾದ “ಉಡುಪಿ ಉತ್ಸವ”
ಉಡುಪಿ: ನ್ಯಾಶನಲ್ ಕನ್ಸ್ಯೂಮರ್ ಫೇರ್ (ಎನ್ ಸಿಎಫ್) ವತಿಯಿಂದ ಕರಾವಳಿ ಬೈಪಾಸ್ ಬಳಿಯ ರಾ.ಹೆ. 66ರ ಸನಿಹದ ಶಾರದಾ ಹೋಟೆಲ್ ಸಮೀಪದ 10 ಎಕರೆ ವಿಶಾಲವಾದ ಜಾಗದಲ್ಲಿ ಆರಂಭಗೊಂಡ ಬೃಹತ್ ವಸ್ತು ಪ್ರದರ್ಶನ, ಮನೋರಂಜನೆ, ಸಾಂಸ್ಕೃತಿಕ ಮೇಳಗಳನ್ನು ಒಳಗೊಂಡ ಉಡುಪಿ ಉತ್ಸವದಲ್ಲಿ ನೀರೊಳಗಿನ ಮೀನು ಸುರಂಗ ಪ್ರದರ್ಶನ ಜನಾಕರ್ಷಣೀಯ ಕೇಂದ್ರ ಬಿಂದುವಾಗಿದೆ. ಇಲ್ಲಿ ಆಟವಾಡಲು ಇಟಾಲಿಯನ್ ಟೊರಾಟೊರಾ, ಡ್ರ್ಯಾಗನ್ ಕಾರ್, ತ್ರಿಡಿ ಸಿನಿಮಾ, ಜಾಯಿಂಗ್ ವ್ಹೀಲ್, ಡ್ರ್ಯಾಗನ್ ವ್ಹೀಲ್, ಬ್ರೇಕ್ ಡ್ಯಾನ್ಸ್, ಮಿನಿ ಟ್ರೈನ್, ಹಿಪ್ಟೋಸ್ಲೈಡ್, ಸಿಗ್ […]
ಉಡುಪಿ: ಗಂಗಾವತಿ ಪ್ರಾಣೇಶ್ ಅವರಿಗೆ ಕಸಾಪದಿಂದ ಗೌರವ
ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಕನ್ನಡದ ಪ್ರಸಿದ್ಧ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರನ್ನು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಉಡುಪಿಯಲ್ಲಿ ಗೌರವಿಸಿ, ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು , ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಹಾಸ್ಯ ಭಾಷಣಕಾರರಾದ ಸಂಧ್ಯಾ ಶೆಣೈ , ಕಲಾಪೋಷಕ ವಿಘ್ನೇಶ್ವರ ಅಡಿಗ ಉಪಸ್ಥಿತರಿದ್ದರು.
ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ‘ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ’ ಪ್ರದಾನ
ಉಡುಪಿ: ಬೆಂಗಳೂರಿನ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜೀನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಸಮಗ್ರ ಸಾಹಿತ್ಯ ಸೇವೆ ಮತ್ತು ಜೀವಮಾನ ಸಾಧನೆಗಾಗಿ ಕೊಡಮಾಡುವ ಪ್ರತಿಷ್ಠಿತ ‘ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ’ ಯನ್ನು ಉಡುಪಿಯ ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ಹಾಗೂ ಲೇಖಕರೂ ಆಗಿರುವ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಶನಿವಾರ ಪ್ರದಾನ ಮಾಡಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಪಕ್ಕದ ಸಂಸ ಬಯಲು ರಂಗಮಂದಿರದಲ್ಲಿ ನಡೆದ ಕೆಂಪೇಗೌಡ ಕರ್ನಾಟಕ ಪ್ರಾದೇಶಿಕ ಸಾಂಸ್ಕೃತಿಕ ಕಲಾ ಉತ್ಸವದ ಸಂದರ್ಭದಲ್ಲಿ ಈ ಪ್ರಶಸ್ತಿ […]