ಉಡುಪಿ: ಗಂಗಾವತಿ ಪ್ರಾಣೇಶ್ ಅವರಿಗೆ ಕಸಾಪದಿಂದ ಗೌರವ

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಕನ್ನಡದ ಪ್ರಸಿದ್ಧ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರನ್ನು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಉಡುಪಿಯಲ್ಲಿ ಗೌರವಿಸಿ, ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು , ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಹಾಸ್ಯ ಭಾಷಣಕಾರರಾದ ಸಂಧ್ಯಾ ಶೆಣೈ , ಕಲಾಪೋಷಕ ವಿಘ್ನೇಶ್ವರ ಅಡಿಗ ಉಪಸ್ಥಿತರಿದ್ದರು.

ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ‘ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ’ ಪ್ರದಾನ

ಉಡುಪಿ: ಬೆಂಗಳೂರಿನ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜೀನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಸಮಗ್ರ ಸಾಹಿತ್ಯ ಸೇವೆ ಮತ್ತು ಜೀವಮಾನ ಸಾಧನೆಗಾಗಿ ಕೊಡಮಾಡುವ ಪ್ರತಿಷ್ಠಿತ ‘ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ’ ಯನ್ನು ಉಡುಪಿಯ ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ಹಾಗೂ ಲೇಖಕರೂ ಆಗಿರುವ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಶನಿವಾರ ಪ್ರದಾನ ಮಾಡಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಪಕ್ಕದ ಸಂಸ ಬಯಲು ರಂಗಮಂದಿರದಲ್ಲಿ ನಡೆದ ಕೆಂಪೇಗೌಡ ಕರ್ನಾಟಕ ಪ್ರಾದೇಶಿಕ ಸಾಂಸ್ಕೃತಿಕ ಕಲಾ ಉತ್ಸವದ ಸಂದರ್ಭದಲ್ಲಿ ಈ ಪ್ರಶಸ್ತಿ […]

ಹಿರಿಯಡಕ: ಬೊಮ್ಮರಬೆಟ್ಟು ಗ್ರಾ.ಪಂ.ಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ – ವಿವಿಧ ಸವಲತ್ತು ವಿತರಣೆ

ಉಡುಪಿ: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲು ನಿಧಿ ಯೋಜನೆ ಅಡಿ ವಿದ್ಯಾರ್ಥಿ ವೇತನ, ಶವ ಸಂಸ್ಕಾರ, ವೈದ್ಯಕೀಯ ವೆಚ್ಚದ ಚೆಕ್ ಅನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಫಲಾನುಭವಿಗಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಗ್ರಾಮ ಪಂಚಾಯತ್ ಸದಸ್ಯರಾದ ಸುನಿಲ್ ಶೆಟ್ಟಿ, ನಾರಾಯಣ ನಾಯ್ಕ, ಬೊಮ್ಮರಬೆಟ್ಟು […]

ಮಲ್ಪೆ: ಸಿರಿಧಾನ್ಯಗಳ ಬಳಕೆಯಿಂದ ಉತ್ತಮ ಆರೋಗ್ಯ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಸಿರಿಧಾನ್ಯಗಳು ಉತ್ತಮ ಪೋಷಕಾಂಶಗಳನ್ನು ಹೊಂದುವುದರ ಜೊತೆಗೆ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿವೆ. ಇವುಗಳ ಬಳಕೆಯಿಂದ ಜನಸಾಮಾನ್ಯರು ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು. ಅವರು ರವಿವಾರ ಮಲ್ಪೆ ಕಡಲ ತೀರದಲ್ಲಿ ಜಿಲ್ಲಾಡಳಿತ, ಜಿಲ್ಲ ಪಂಚಾಯತ್, ಕೃಷಿ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ – 2024 ರ ಅಂಗವಾಗಿ ಗ್ರಾಹಕರಲ್ಲಿ ಮುಂದಿನ ಪೀಳಿಗೆಗೆ […]

ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಉಡುಪಿ: ಅಮರಶಿಲ್ಪಿ ಜಕಣಾಚಾರಿ ಅವರು ತಮ್ಮ ಕೈಚಳಕದ ಮೂಲಕ ಕೆತ್ತನೆ ಮಾಡಿದ ಶಿಲ್ಪ ಕಲಾಕೃತಿಗಳು ಇಂದು ಇಡೀ ವಿಶ್ವದ ಪ್ರವಾಸಿಗರ ಗಮನ ಸೆಳೆಯುತ್ತಿದ್ದು, ದೇಶದ ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ ಎಂದು ಶಾಸಕ ಯಶ್ ಪಾಲ್. ಎ ಸುವರ್ಣ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವಕರ್ಮ […]