ಕನಸಿನ ಮನೆಯಲ್ಲಿ ನೆಮ್ಮದಿಯಿಂದ ಬದುಕಲು ಹೋಂ ಇನ್ಶೂರೆನ್ಸ್ ಆಯ್ಕೆ ಮಾಡುವುದು ಸೂಕ್ತ: ಬಜಾಜ್ ಅಲಿಯಾನ್ಸ್ ನಿಂದ ಸಲಹೆ ಸೂಚನೆಗಳು ಇಲ್ಲಿವೆ

ಹೆಚ್ಚಿನ ಜನರಿಗೆ, ಮನೆ ಖರೀದಿಸುವುದು ಅವರ ಜೀವನದಲ್ಲಿ ಅವರ ದೊಡ್ಡ ಹೂಡಿಕೆ ಮತ್ತು ಮೈಲಿಗಲ್ಲಾಗಿರುತ್ತದೆ. ಪ್ರತಿಯೊಬ್ಬರೂ ತಮ್ಮ ಸ್ವಂತ ಮನೆಯನ್ನು ಹೊಂದುವ ಆಕಾಂಕ್ಷೆಯನ್ನು ಹೊಂದಿರುತ್ತಾರೆ ಮತ್ತು ಇದು ನಮ್ಮ ಅತ್ಯಂತ ಬೆಲೆಬಾಳುವ ಸ್ವತ್ತುಗಳಲ್ಲಿ ಒಂದಾಗಿರುತ್ತದೆ, ಅದನ್ನು ನಾವು ಸಾಧ್ಯವಿರುವ ಎಲ್ಲಾ ವಿಧಾನಗಳ ಮೂಲಕ ಸುರಕ್ಷಿತವಾಗಿರಿಸಬೇಕು. ಆದಾಗ್ಯೂ, ಮನೆ ಮಾಲೀಕತ್ವವು ವಿವಿಧ ಅಪಾಯಗಳು, ಬೆಂಕಿ, ಅಪಘಾತಗಳು, ದರೋಡೆ, ನೈಸರ್ಗಿಕ ವಿಪತ್ತುಗಳು ಮತ್ತು ಗಣನೀಯ ಅರ್ಥಿಕ ನಷ್ಟ ಮತ್ತು ಭಾವನಾತ್ಮಕ ನೋವನ್ನು ಉಂಟುಮಾಡುವ ಇತರ ಅನಿರೀಕ್ಷಿತ ಘಟನೆಗಳಂತಹ ಸಂಭಾವ್ಯ ಅಪಾಯಗಳೊಂದಿಗೆ […]

ಉಡುಪಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಕ್ಷಾಬಂಧನ ಆಚರಣೆ: ವಿದ್ಯಾರ್ಥಿಗಳಿಂದ ಸಾವಿರಕ್ಕೂ ಅಧಿಕ ಅಧಿಕಾರಿಗಳಿಗೆ ರಕ್ಷಾಬಂಧನ

ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ರಕ್ಷಾ ಬಂಧನ ಪ್ರಯುಕ್ತ ಉಡುಪಿ ನಗರದಾದ್ಯಂತ ರಾಷ್ಟ್ರ ರಕ್ಷೆಯ ಸಂಕಲ್ಪದೊಂದಿಗೆ ಸಾಮೂಹಿಕ ರಕ್ಷಾ ಬಂಧನ ಕಾರ್ಯಕ್ರಮವನ್ನು ನಗರದ ವಿವಿಧ ಸರ್ಕಾರಿ ಕಚೇರಿಗಳಲ್ಲಿ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ, ಮಣಿಪಾಲ ಪೊಲೀಸ್ ಠಾಣೆ, ಅಂಚೆ ಕಚೇರಿ, ಉಡುಪಿ ನಗರ ಪೊಲೀಸ್ ಠಾಣೆ, ಜಿಲ್ಲಾ ನ್ಯಾಯಾಲಯ, ಉಪನೊಂದವನಾಧಿಕಾರಿ ಕಚೇರಿ, ಮಿನಿ ವಿಧಾನಸೌಧ ಉಡುಪಿ (ತಾಲೂಕು ಕಚೇರಿ), ಪೊಲೀಸ್ ವರಿಷ್ಠಾಧಿಕಾರಿ ಕಚೇರಿ, ಮಾನ್ಯ ಶಾಸಕರು ಸೇರಿದಂತೆ ವಿವಿಧ ಸರ್ಕಾರಿ ಅಧಿಕಾರಿಗಳಿಗೆ ರಾಷ್ಟ್ರ ಮೊದಲು […]

ಹೆಮ್ಮಾಡಿ: ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಕುಂದಾಪುರ: ಹೆಮ್ಮಾಡಿಯ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಆಗಸ್ಟ್ 26ರಂದು ಸಾಧು ಎಸ್ ಬಿಲ್ಲವರ ಅಧ್ಯಕ್ಷತೆಯಲ್ಲಿ ನಡೆಯಿತು. ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದಲ್ಲಿ ನಡೆದ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಅಧ್ಯಕ್ಷರಾದ ಸಾಧು ಎಸ್ ಬಿಲ್ಲವ ಇವರು ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಶೇ.10 ರ ಡಿವಿಡೆಂಟ್ ಘೋಷಣೆ ಮಾಡಲಾಯಿತು. ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಣೆ, ಸನ್ಮಾನ ಕಾರ್ಯಕ್ರಮ ಸೇರಿದಂತೆ […]

ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪಡುಕುತ್ಯಾರು: ಧರ್ಮದಂಡ ಸಮರ್ಪಣೆ

ಶ್ರೀಗಳ 19ನೇ ವರುಷದ ಚಾತುರ್ಮಾಸ್ಯ ವ್ರತಾಚರಣೆ ಸವಿ ನೆನಪಿಗಾಗಿ ಅವರ ಶಿಷ್ಯಂದಿರಾದ ಮಂಚಕಲ್ಲು ದಿ|ಚಂದ್ರಾವತಿ ವಾಸುದೇವ ಆಚಾರ್ಯ ಅವರ ಪುತ್ರರಾದ ಉಡುಪಿ ತಿರುಮಲ ಪಿ.ವಿ. ಗಂಗಾಧರ ಆಚಾರ್ಯ ಉಡುಪಿ, ಶ್ರೀಧರ ವಿ. ಆಚಾರ್ಯ ಮುಂಬಯಿ, ಪಿ.ವಿ. ಅಚ್ಯುತ ಆಚಾರ್ಯ ಉಡುಪಿ ಮತ್ತು ಕುಟುಂಬಸ್ಥರು ಧರ್ಮ ದಂಡವನ್ನು ಕೊಡುಗೆ ರೂಪದಲ್ಲಿ ಸಮರ್ಪಿಸಿದ್ದು ಪೃಥ್ವಿರಾಜ್ ಆಚಾರ್ಯ ಕಿನ್ನಿಗೋಳಿ ಇದನ್ನು ತಯಾರಿಸಿದ್ದಾರೆ. ಮಹಾಸಂಸ್ಥಾನದ ಆಸ್ಥಾನ ವಿದ್ವಾಂಸ ವೇ| ಬ್ರ|ಶಂಕರಾಚಾರ್ಯ ಗುರುನಾಥಾಚಾರ್ಯ ಕಡ್ಲಾಸ್ಕರ್ ಪಂಡಿತ್ ಹುಬ್ಬಳ್ಳಿ ಅವರ ಮಾರ್ಗದರ್ಶನದಲ್ಲಿ ತಂತ್ರಿವರ್ಯರಾದ ಬ್ರಹ್ಮಶ್ರೀ ಅಕ್ಷಯ […]

ಉಡುಪಿ ತುಳುನಾಡ ಟೈಗರ್ಸ್ ನಿಂದ ಮೂರನೇ ವರ್ಷದ ಹುಲಿ‌ ಕುಣಿತ

ಉಡುಪಿ: ಶ್ರೀ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ತುಳುನಾಡ ಟೈಗರ್ಸ್ ಉಡುಪಿ ಇದರ ಆಶ್ರಯದಲ್ಲಿ ರಾಜೇಶ್ ಸುವರ್ಣ ನೇತೃತ್ವದಲ್ಲಿ ಸೆಪ್ಟೆಂಬರ್ 6 ಮತ್ತು 7ರಂದು ಮೂರನೇ ವರ್ಷದ ಹುಲಿ‌ ಕುಣಿತ ನಡೆಯಲಿದೆ.