ಜೂ.30: ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಹಿರಿಯಡಕ ಕಚೇರಿ ಉದ್ಘಾಟನೆ

ಕಾಪು: ತಾಲೂಕಿನ ಹಿರಿಯಡಕ ಬೊಮ್ಮರಬೆಟ್ಟು ಗ್ರಾಮಪಂಚಾಯತ್ ಬಳಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರ ನೂತನ ಶಾಸಕರ ಕಚೇರಿಯ ಉದ್ಘಾಟನಾ ಸಮಾರಂಭ ಬೆಳಿಗ್ಗೆ 10 ಗಂಟೆಗೆ ಜರಗಲಿದೆ. ಇದರ ಜೊತೆಗೆ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮತ್ತೆ ಬಂತು ಕೌನ್ ಬನೇಗಾ ಸೀಸನ್ 15 ಕರೋಡ್ಪತಿ! ಶೀಘ್ರದಲ್ಲೇ ಆರಂಭ

ಈ ಬಾರಿ ಕಾರ್ಯಕ್ರಮದ ನಿಯಮಗಳು ಮತ್ತು ಸ್ವರೂಪವನ್ನು ಬದಲಾಯಿಸಲಾಗಿದೆ ಎಂದು ಪ್ರೋಮೋದಿಂದ ತಿಳಿದುಬಂದಿದೆ.ಭಾರತೀಯ ಚಿತ್ರರಂಗದ ಸೂಪರ್‌ಸ್ಟಾರ್, ಹಿರಿಯ ನಟ ಅಮಿತಾಭ್ ಬಚ್ಚನ್ ಮತ್ತೊಮ್ಮೆ ನಿಮ್ಮೆಲ್ಲರ ಮನೆಗೆ ಭೇಟಿ ನೀಡಲು ರೆಡಿ ಆಗಿದ್ದಾರೆ. ಬಿಗ್ ಬಿ ನಡೆಸಿಕೊಡುವ ಜನಪ್ರಿಯ ಕೌನ್ ಬನೇಗಾ ಕರೋಡ್ಪತಿ (Kaun Banega Crorepati) ಶೋ ಸದ್ಯದಲ್ಲೇ ಪ್ರಸಾರವಾಗಲಿದೆ.ಕೌನ್ ಬನೇಗಾ ಕರೋಡ್ಪತಿ ಸೀಸನ್ 15ರ ಪ್ರೋಮೋ ಇಂದು ಅನಾವರಣಗೊಂಡಿದೆ. ಕೌನ್ ಬನೇಗಾ ಕರೋಡ್ಪತಿ 14 ಸೀಸನ್‌ಗಳು ಯಶಸ್ವಿಯಾಗಿ ನಡೆದಿದ್ದು, 15ನೇ ಸೀಸನ್ನೊಂದಿಗೆ ಬಿಗ್ ಬಿ ಮರಳುತ್ತಿದ್ದಾರೆ. […]
ಕ್ರಿಯೇಟಿವ್ ಕಾಲೇಜಿನ ಉಪನ್ಯಾಸಕ ಲೇಖಕ ಬಿ ರಾಘವೇಂದ್ರ ರಾವ್ ಅವರ 56ನೇ ಕೃತಿ “ಹಾವಿನ ಮನೆ” ಬಿಡುಗಡೆ

ರಾಘವೇಂದ್ರ ರಾವ್ ಅವರು ಈಗಾಗಲೇ 55 ಕೃತಿಗಳನ್ನು ಪೂರೈಸಿದ್ದು, 56ನೇ ಕೃತಿ “ಹಾವಿನ ಮನೆ” ಪತ್ತೆದಾರಿ ಕಾದಂಬರಿ ಇತ್ತೀಚೆಗೆ ಬೆಂಗಳೂರಿನ ರಮಣಶ್ರೀ ಹೋಟೇಲಿನಲ್ಲಿ ವೀರಲೋಕ ಪ್ರಕಾಶನದ ವಾರ್ಷಿಕೋತ್ಸವದ ಸುಸಂದರ್ಭದಲ್ಲಿ ಲೋಕಾರ್ಪಣೆಗೊಂಡಿತು. ಈ ಕಾರ್ಯಕ್ರಮದಲ್ಲಿ ಶಿವಾಜಿ ಸುರತ್ಕಲ್ ಚಲನಚಿತ್ರ ಖ್ಯಾತಿಯ ನಿರ್ದೇಶಕರಾದ ಆಕಾಶ್ ಶ್ರೀವತ್ಸ ಅವರು ಬಿಡುಗಡೆಗೊಳಿಸಿದರು. ಕನ್ನಡ ಸಾಹಿತ್ಯಕ್ಕೆ ಪತ್ತೆದಾರಿ ಸಾಹಿತ್ಯದ ಅಗತ್ಯವಿದೆ. ಅದಕ್ಕೆ ಬಹುದೊಡ್ಡ ಓದುಗ ವರ್ಗವಿದೆ. ಈ ನಿಟ್ಟಿನಲ್ಲಿ ರಾಘವೇಂದ್ರ ರಾವ್ (ಅನು ಬೆಳ್ಳೆ) ಅವರ ʼಹಾವಿನ ಮನೆʼ ಮಹತ್ವದ ಕೃತಿಯಾಗಬಲ್ಲದು ಎಂದು ಅಭಿಪ್ರಾಯಪಟ್ಟರು. […]
ವಾವಿಲಾಲ ಚಿದ್ವಿಲಾ ರೆಡ್ಡಿಗೆ ಫಸ್ಟ್ ರ‍್ಯಾಂಕ್ , IIT ಪ್ರವೇಶ ಪರೀಕ್ಷೆಯ JEE-Advanced ಫಲಿತಾಂಶ ಪ್ರಕಟ

ನವದೆಹಲಿ : ಭಾರತೀಯ ತಂತ್ರಜ್ಞಾನ ಸಂಸ್ಥೆಗಳಿಗೆ (IIT ) ಪ್ರವೇಶಾತಿ ನಿರ್ಧರಿಸಲು ನಡೆದ ಜೆಇಇ – ಅಡ್ವಾನ್ಸ್‌ಡ್ (JEE – Advanced) ಉನ್ನತ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ.IIT ಪ್ರವೇಶ ಪರೀಕ್ಷೆಯ JEE-Advanced ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಹೈದರಾಬಾದ್ ಮೂಲದ ವಾವಿಲಾಲ ಚಿದ್ವಿಲಾಸ್ ರೆಡ್ಡಿ ಅತಿ ಹೆಚ್ಚು ಅಂಕಗಳಿಸುವ ಮೂಲಕ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಈ ವರ್ಷದ JEE – Advanced ಪರೀಕ್ಷೆಯನ್ನು ಐಐಟಿ ಗುವಾಹಟಿ ನಡೆಸಿತ್ತು. ವಾವಿಲಾಲ ರೆಡ್ಡಿ ಅವರು 360 ಅಂಕಗಳಿಗೆ 341 […]
ಉಡುಪಿ: ನಾಳೆ (ಜೂ.15) ಮಿಷನ್ ಆಸ್ಪತ್ರೆಯ ಶತಮಾನೋತ್ಸವ ಸಂಭ್ರಮದ ಸಮಾರೋಪ ಸಮಾರಂಭ ಮತ್ತು ಸಿಟಿ ಸ್ಕ್ಯಾನ್ ಘಟಕದ ಉದ್ಘಾಟನೆ

ಉಡುಪಿ: ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ ಉಡುಪಿ ಇದರ ಶತಮಾನೋತ್ಸವ ಸಂಭ್ರಮದ ಸಮಾರೋಪ ಸಮಾರಂಭ ಮತ್ತು ಸಿಟಿ ಸ್ಕ್ಯಾನ್ ಘಟಕದ ಉದ್ಘಾಟನೆ ಕಾರ್ಯಕ್ರಮವು ಜೂನ್ 15ರಂದು ಆಸ್ಪತ್ರೆಯ ಆವರಣದಲ್ಲಿ ನಡೆಯಲಿದೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಸುಶಿಲ್ ಜತನ್ನ ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರೋಪ ಕಾರ್ಯಕ್ರಮವು ಸಿಎಸ್‌ಐ ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯದ ಉಪಾಧ್ಯಕ್ಷ ವಿಕ್ಟರ್ ಅವರ ನೇತೃತ್ವದಲ್ಲಿ ಮಧ್ಯಾಹ್ನ 2.30 ಕ್ಕೆ ಮಿಷನ್ ಆಸ್ಪತ್ರೆ ಚಾಪೆಲ್‌ನಲ್ಲಿ ಕೃತಜ್ಞತಾ ಸೇವೆಯೊಂದಿಗೆ ಆರಂಭವಾಗಲಿದೆ. ಬಳಿಕ ಸಂಜೆ 4 […]