ಮಧ್ಯಮ ವರ್ಗದವರ ಜೇಬಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಹಣ ಹಾಕುತ್ತೇವೆ ಎಂದ ಸಿಎಂ

ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು:ಇಂದಿನಿಂದ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಸಾಮಾನ್ಯ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು. ​ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷ ಗೇಲಿ ಮಾಡಿಕೊಂಡೇ ಇರಲಿ ನಾವು ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಶಕ್ತಿ ಯೋಜನೆ ಜಾರಿ ಬಳಿಕ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ವಿರೋಧ ಪಕ್ಷದವರಿಗೆ ನಡುಕ ಹುಟ್ಟಿದೆ. ಅದಕ್ಕಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರು […]

ಉಡುಪಿ: ಜೂನ್ 15 ರಂದು ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ವತಿಯಿಂದ ಔಷಧೀಯ ಸಸ್ಯಗಳ ವಿತರಣೆ

ಉಡುಪಿ: ಕ್ಯಾನ್ಸರ್ ಕಾಯಿಲೆಯ ಚಿಕಿತ್ಸೆಯಲ್ಲಿ ಪರಿಣಾಮಕಾರಿ ಎನ್ನಲಾದ ಔಷಧೀಯ ಗುಣವುಳ್ಳ ಲಕ್ಷಣ ಫಲ ಹಾಗೂ ಇನ್ನಿತರ ಔಷಧೀಯ ಸಸ್ಯಗಳನ್ನು ಇಲ್ಲಿನ ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ವತಿಯಿಂದ ಜೂನ್ 15 ಗುರುವಾರದಂದು ಬೆಳಿಗ್ಗೆ 10 ಗಂಟೆಗೆ ಭುಜಂಗ ಪಾರ್ಕಿನಲ್ಲಿ ಉಚಿತವಾಗಿ ನೀಡಲಾಗುತ್ತಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.  

ಕೆ. ಆರ್.ಎಸ್ ನೀರಿನ ಮಟ್ಟ 80 ಅಡಿಗೆ ಕುಸಿತದ ಪರಿಣಾಮ ಶತಮಾನದ ಲಕ್ಷ್ಮೀ ನಾರಾಯಣಸ್ವಾಮಿ ದೇಗುಲ ಗೋಚರ

ಮಂಡ್ಯ:ಮಂಡ್ಯ ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ ಏಪ್ರಿಲ್ 20 ರಂದು 90 ಅಡಿಗೆ ಕುಸಿದಿತ್ತು. ಇದೀಗ ಮತ್ತಷ್ಟು ಕುಸಿತ ಕಂಡಿದೆ. ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ 80 ಅಡಿಗೆ ಕುಸಿದಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಮುಂಗಾರು ಪೂರ್ವ ಅಕಾಲಿಕ ಮಳೆ ಕೊರತೆಯಿಂದ ಈ ಬಾರಿ ಜಲಾಶಯದ ನೀರಿನ ಮಟ್ಟದಲ್ಲಿ 22 ಅಡಿಗಳಷ್ಟು ಕಡಿಮೆ ನೀರು ಸಂಗ್ರಹವಾಗಿರುವುದು ಕಂಡುಬಂದಿದೆ. ಹಿನ್ನೀರಿನಲ್ಲಿ ಮುಳುಗಡೆ ಆಗಿದ್ದ ಶ್ರೀ ಲಕ್ಷ್ಮಿ ನಾರಾಯಣಸ್ವಾಮಿ ದೇವಸ್ಥಾನ ಗೋಚರಿಸಿದೆ. ಜನರಲ್ಲಿ ಬರದ […]

ಇಳಿ ವಯಸ್ಸಿನಲ್ಲೂ ಉತ್ಸಾಹದಿಂದ ಇಂಗ್ಲೀಷ್​ ಎಂಎ ಪರೀಕ್ಷೆ ಬರೆದಿರುವ ವಿಜಯಪುರದ ತಾತನ ಸಾಧನೆ

ವಿಜಯಪುರ: ಕಲಿಕೆಗೆ ವಯಸ್ಸಿನ ಮಿತಿ ಇರದು. ದೇಹಕ್ಕೆ ವಯಸ್ಸಾಗಬಹುದೇ ಹೊರತು ಕಲಿಕೆಯ ಆಸಕ್ತಿಗೆ ಅಲ್ಲ ಎಂಬುದನ್ನು 81 ವರ್ಷದ ಹಿರಿಯ ನಾಗರಿಕರೊಬ್ಬರು ತೋರಿಸಿ ಕೊಟ್ಟಿದ್ದಾರೆ.81ನೇ ವಯಸ್ಸಿನಲ್ಲಿ ಇಂಗ್ಲೀಷ್​ ಎಂಎ ಪರೀಕ್ಷೆ ಬರೆದ ವಿಜಯಪುರದ ವ್ಯಕ್ತಿ! ಸಾಧನೆಗೆ ಪತ್ನಿಯೇ ಪ್ರೇರಣೆಯಂತೆ ಇಳಿ ವಯಸ್ಸಿನಲ್ಲೂ ಉತ್ಸಾಹದಿಂದ ಪರೀಕ್ಷೆ ಬರೆದಿರುವ ವಿಜಯಪುರದ ತಾತನ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ. ತಮ್ಮ ಈ ಸಾಧನೆಗೆ ತಮ್ಮ ಪತ್ನಿ ಕಾರಣ ಎಂದು ಸಂತಸದಿಂದ ಹೇಳುವ ನಿಂಗಯ್ಯ ಒಡೆಯರ, 81 ರ ಇಳಿ ವಯಸ್ಸಿನಲ್ಲಿಯೂ ಯೋಗಪಟುವಾಗಿದ್ದಾರೆ. ವಿಶಿಷ್ಟವಾದ […]

ಹಾವೇರಿಯ ಕರ್ಜಿಗಿಯಲ್ಲಿ ಕಾರಹುಣ್ಣಿಮೆ ಸಂಭ್ರಮ

ಹಾವೇರಿ : ಹಾವೇರಿ ಜಿಲ್ಲೆಯ ಕರ್ಜಗಿ ಗ್ರಾಮದಲ್ಲಿ ಕಾರಹುಣ್ಣಿಮೆ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ವಿಶೇಷ ಅಲಂಕಾಲ ಮಾಡುವ ಮೂಲಕ ಪೂಜಾ ಕೈಂಕರ್ಯಗಳು ನೆರವೇರಿದವು. ಕಾರಹುಣ್ಣಿಮೆ ರೈತರ ಪಾಲಿನ ಸಂಭ್ರಮದ ಹಬ್ಬಗಳಲ್ಲೊಂದು. ಪ್ರತಿ ವರ್ಷ ಉತ್ತರ ಕನಾ೯ಟಕ ಭಾಗದ ರೈತರು ಕಾರಹುಣ್ಣಿಮೆ ಹಬ್ಬವನ್ನು ಅತ್ಯಂತ ಸಡಗರದಿಂದ ಆಚರಿಸುತ್ತಾರೆ. ಹಾವೇರಿಯ ಕರ್ಜಗಿ ಗ್ರಾಮದಲ್ಲೂ ಸಹ ಈ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಹಬ್ಬದ ಆಚರಣೆ ಹೇಗಿರುತ್ತದೆ? : ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸಕ್ಕೆ ಬ್ರಹ್ಮಲಿಂಗೇಶ್ವರ […]