ಶ್ರೀ ಸತ್ಯದೆಕ್ಕಿ ಧರ್ಮರಸು ಕೊಡಮಣಿತ್ತಾಯ ಕುಕ್ಕಿನಂತಾಯ ಬ್ರಹ್ಮ ಬೈದರ್ಕಳ ಹಾಗೂ ಮಾಯಂದಾಲೆ ದೇವಿ ಜೋಡುಗರಡಿಯಲ್ಲಿ ಮೇ 3 ರಂದು ಪುನರ್ ಪ್ರತಿಷ್ಠೆ, ನೂತನ ಧ್ವಜಸ್ಥಂಭ ಪ್ರತಿಷ್ಠೆ
ಕಾರ್ಕಳ : ನೂತನ ಶಿಲಾಮಯ ಗರ್ಭಗುಡಿಗಳಲ್ಲಿ ಶ್ರೀ ಕ್ಷೇತ್ರದ ಧರ್ಮದೈವಗಳ ಪುನರ್ ಪ್ರತಿಷ್ಠೆ, ನೂತನ ಧ್ವಜಸ್ತಂಭ ಪ್ರತಿಷ್ಠೆ, ಬ್ರಹ್ಮ ಕಲಶಾಭಿಷೇಕ ಧಾರ್ಮಿಕ ಸಭೆ ಹಾಗೂ ವಾರ್ಷಿಕ ನೇಮೋತ್ಸವ ಕಾರ್ಯಕ್ರಮ ಎ. 29 ರಿಂದ ಎ.8ರವರಗೆ ನೂತನವಾಗಿ ನಿರ್ಮಿಸಿರುವ ಶಿಲಾಮಯ ಗರ್ಭಗುಡಿಗಳಲ್ಲಿ ಎಡಪದವು ಬ್ರಹ್ಮಶ್ರೀ ಮುರುಲೀಧರ ತಂತ್ರಿಗಳ ಮಾರ್ಗದರ್ಶನದಲ್ಲಿ ಗ್ರಾಮದ ಪ್ರಧಾನ ಅಸ್ರಣ್ಣರಾದ ಸಾಣೂರು ದೇಂದಬೆಟ್ಟು ವೇದಮೂರ್ತಿ ಶ್ರೀ ಶ್ರೀರಾಮ ಭಟ್ರ ನೇತೃತ್ವದಲ್ಲಿ ಶ್ರೀ ಕ್ಷೇತ್ರದ ಧರ್ಮದೈವಗಳನ್ನು ಪುನರ್ ಪ್ರತಿಷ್ಠೆ ಬ್ರಹ್ಮ ಕಲಶಾಭಿಷೇಕ ಜರಗಲಿರುವುದು. ಆ ಪ್ರಯುಕ್ತ ಶ್ರೀ […]
ಏ.30 ರಂದು ಔರಾ ಕೆಫೆ ಶಾಪ್ ಉದ್ಘಾಟನೆ
ಉಡುಪಿ: ಇಲ್ಲಿನ ಹೊಸ ಬಸ್ ನಿಲ್ದಾಣದ ಬಳಿಯ ಜಿ ಬೀ ಪಂತ್ ರಸ್ತೆಯಲ್ಲಿರುವ ಗ್ರಾಸ್ ಲಾಂಡ್ ಕಾಂಪ್ಲೆಕ್ಸ್ ನಲ್ಲಿ ಔರ ಕೆಫೆ ಶಾಪ್ ಏಪ್ರಿಲ್ 30 ರಂದು ಬೆಳಿಗ್ಗೆ 11.30 ಕ್ಕೆ ಶುಭಾರಂಭಗೊಳ್ಳಲಿದೆ. ಕೆಫೆಯಲ್ಲಿ ಮನೆಯಲ್ಲೇ ತಯಾರಿಸಿದ ಐಸ್ ಕ್ರೀಮ್, ಬೇಕರಿ ಉತ್ಪನ್ನ, ಚಾಕೋಲೇಟ್, ಪೆಸ್ಟ್ರಿ ದೊರೆಯುತ್ತವೆ.
ವಾಟ್ಸಾಪ್ (WhatsApp)ಬಳಕೆದಾರರು ಈಗ ನಾಲ್ಕು ಫೋನ್‌ಗಳಲ್ಲಿ ಒಂದು ಖಾತೆಯನ್ನು ಬಳಸಬಹುದು: ಹೇಗೆಂದು ತಿಳಿಯಿರಿ
ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನ ಸಿಇಒ ಮಾರ್ಕ್ ಜುಕರ್‌ಬರ್ಗ್, ವಾಟ್ಸಾಪ್ (WhatsApp) ಅಂತಿಮವಾಗಿ ಬಹು-ಸಾಧನ ಲಾಗಿನ್ ಬೆಂಬಲವನ್ನು ಪರಿಚಯಿಸುತ್ತಿದೆ ಎಂದು ಘೋಷಿಸಿದ್ದು, ಇದು ಬಳಕೆದಾರರಿಗೆ ಒಂದೇ ವಾಟ್ಸಾಪ್ ಖಾತೆಯನ್ನು ನಾಲ್ಕು ಬೇರೆ ಬೇರೆ ಫೋನ್‌ಗಳಲ್ಲಿ ಬಳಸಲು ಅನುವು ಮಾಡಿಕೊಡುತ್ತದೆ. ವಾಟ್ಸಾಪ್ ಪ್ರಕಾರ, ಈ ವೈಶಿಷ್ಟ್ಯವನ್ನು ಮುಂಬರುವ ವಾರಗಳಲ್ಲಿ ಎಲ್ಲಾ ಬಳಕೆದಾರರಿಗೆ ಬಿಡುಗಡೆ ಮಾಡಲಾಗುವುದು. ಈ ಹಿಂದೆ, ಬಳಕೆದಾರರು ಒಂದೇ ಫೋನ್ ಮತ್ತು ಬಹು ಕಂಪ್ಯಾನಿಯನ್ ಡೆಸ್ಕ್‌ಟಾಪ್ ಸಾಧನಗಳಲ್ಲಿ ಒಂದು ವಾಟ್ಸಾಪ್ ಖಾತೆ ಬಳಸಲು ಸೀಮಿತರಾಗಿದ್ದರು. ಈ ಹೊಸ ಬಹು-ಸಾಧನ […]
ಆದಾಯ ತೆರಿಗೆ ಹಳೆಯ ಪದ್ಧತಿ: ಐಟಿಆರ್ ಸಲ್ಲಿಸುವ ಮೊದಲು ಈ ಕಡಿತವನ್ನು ತಿಳಿದುಕೊಳ್ಳಿ
ಆದಾಯ ತೆರಿಗೆ: ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡಿಸುವಾಗ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವೈಯಕ್ತಿಕ ಆದಾಯ ತೆರಿಗೆಯ ಹೊಸ ಪದ್ದತಿಯಲ್ಲಿ ಕೆಲವು ಬದಲಾವಣೆಗಳನ್ನು ಘೋಷಿಸಿದ್ದರು. ಸರ್ಕಾರ ಜಾರಿಗೆ ತಂದಿರುವ ಹೊಸ ತೆರಿಗೆ ಪದ್ಧತಿಯು 2023-24ನೇ ಹಣಕಾಸು ವರ್ಷದಿಂದ ಡೀಫಾಲ್ಟ್ (ಪೂರ್ವ ನಿಯೋಜಿತ) ಆಗಿರುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. ತಮ್ಮ ತೆರಿಗೆ ಪ್ರಯೋಜನಗಳನ್ನು ಉಳಿಸಿಕೊಳ್ಳಲು ಹಳೆಯ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಲು ಬಯಸುವ ತೆರಿಗೆದಾರರು ಅದರ ಬಗ್ಗೆ ಘೋಷಣೆಯನ್ನು ಮಾಡಬೇಕು. ಆದರೆ ನೀವು ಹಳೆಯ […]
ಸಚಿವ ವಿ. ಸುನಿಲ್ ಕುಮಾರ್ ಅವರು ಬೆಳ್ತಂಗಡಿಯ ಶ್ರೀ ಕಾಶೀಮಠ ಸಂಸ್ಥಾನಕ್ಕೆ ಭೇಟಿ
ಕಾರ್ಕಳ: ಕನ್ನಡ, ಇಂಧನ ಹಾಗೂ ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಬೆಳ್ತಂಗಡಿಯಲ್ಲಿ ಶ್ರೀ ಕಾಶೀಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಕಾರ್ಕಳದ ಜಿ.ಎಸ್.ಬಿ ಸಮುದಾಯದ ಬಂಧುಗಳು ಉಪಸ್ಥಿತರಿದ್ದರು.