Belthangadi; ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಮಹಾ ಸಂಪರ್ಕ ಅಭಿಯಾನ ಯಶಸ್ವಿ

ಬೆಳ್ತಂಗಡಿ: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ ಮಹಾ ಸಂಪರ್ಕ ಅಭಿಯಾನದಡಿ ಬೆಳ್ತಂಗಡಿ ಮಂಡಲದಲ್ಲಿ ಬಿಜೆಪಿ ಅಭ್ಯರ್ಥಿ, ಶಾಸಕ ಹರೀಶ್‌ ಪೂಂಜ ಅವರ ಪರ 20 ಸಾವಿರ ಕಾರ್ಯಕರ್ತರು 50 ಸಾವಿರ ಮನೆಗಳನ್ನು ಸಂಪರ್ಕಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಿದರು. ಬೆಳ್ತಂಗಡಿ ಮಂಡಲದ 81 ಗ್ರಾಮಗಳ 241 ಬೂತ್‌ಗಳಲ್ಲಿ ಮಹಾಸಂಪರ್ಕ ಅಭಿಯಾನ ಹಮ್ಮಿಕೊಂಡಿದ್ದು ಮತದಾರರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು. ಒಂದೇ ದಿನ 20 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಉತ್ಸುಕತೆಯಿಂದ ಪಾಲ್ಗೊಂಡು 50 ಸಾವಿರಕ್ಕೂ ಅಧಿಕ ಮನೆಗಳಿಗೆ ಭೇಟಿ […]

ಬಿಸಿಗಾಳಿಯಿಂದ ರಕ್ಷಿಸಿಕೊಳ್ಳಲು ಇಲ್ಲಿವೆ ಉಪಾಯಗಳು

ಉಡುಪಿ: ಭಾರತೀಯ ಹವಾಮಾನ ಇಲಾಖೆಯು ಪ್ರಸಕ್ತ ಸಾಲಿನ ಬಿಸಿಗಾಳಿ ಕುರಿತು ಮುನ್ಸೂಚನೆ ನೀಡಿದ್ದು, ಪ್ರಸ್ತುತ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯತಾಪಮಾನಕ್ಕಿಂತ 2-3 ಡಿಗ್ರಿ ಸೆ. ಅಧಿಕತಾಪಮಾನದಾಖಲಾಗುತ್ತಿದ್ದು, ಇದು ಮನುಷ್ಯ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು ಬಿಸಿಗಾಳಿಯಿಂದಾಗುವ ಅಪಾಯಗಳನ್ನು ತಡೆಯಲು ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆಯು ಸಲಹೆ – ಸೂಚನೆಗಳನ್ನು ಪಾಲಿಸುವುದು ಅಗತ್ಯವಿದೆ. ಬಿಸಿಗಾಳಿಯಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಧ್ಯವಾದಷ್ಟು ಮದ್ಯಾಹ್ನ 12 ರಿಂದ 3 ರ ವರೆಗಿನ ಗರಿಷ್ಠ […]

ಶ್ರೀ ಸತ್ಯದೆಕ್ಕಿ ಧರ್ಮರಸು ಕೊಡಮಣಿತ್ತಾಯ ಕುಕ್ಕಿನಂತಾಯ ಬ್ರಹ್ಮ ಬೈದರ್ಕಳ ಹಾಗೂ ಮಾಯಂದಾಲೆ ದೇವಿ ಜೋಡುಗರಡಿಯಲ್ಲಿ ಮೇ 3 ರಂದು ಪುನರ್ ಪ್ರತಿಷ್ಠೆ, ನೂತನ ಧ್ವಜಸ್ಥಂಭ ಪ್ರತಿಷ್ಠೆ

ಕಾರ್ಕಳ : ನೂತನ ಶಿಲಾಮಯ ಗರ್ಭಗುಡಿಗಳಲ್ಲಿ ಶ್ರೀ ಕ್ಷೇತ್ರದ ಧರ್ಮದೈವಗಳ ಪುನರ್ ಪ್ರತಿಷ್ಠೆ, ನೂತನ ಧ್ವಜಸ್ತಂಭ ಪ್ರತಿಷ್ಠೆ, ಬ್ರಹ್ಮ ಕಲಶಾಭಿಷೇಕ ಧಾರ್ಮಿಕ ಸಭೆ ಹಾಗೂ ವಾರ್ಷಿಕ ನೇಮೋತ್ಸವ ಕಾರ್ಯಕ್ರಮ ಎ. 29 ರಿಂದ ಎ.8ರವರಗೆ ನೂತನವಾಗಿ ನಿರ್ಮಿಸಿರುವ ಶಿಲಾಮಯ ಗರ್ಭಗುಡಿಗಳಲ್ಲಿ ಎಡಪದವು ಬ್ರಹ್ಮಶ್ರೀ ಮುರುಲೀಧರ ತಂತ್ರಿಗಳ ಮಾರ್ಗದರ್ಶನದಲ್ಲಿ ಗ್ರಾಮದ ಪ್ರಧಾನ ಅಸ್ರಣ್ಣರಾದ ಸಾಣೂರು ದೇಂದಬೆಟ್ಟು ವೇದಮೂರ್ತಿ ಶ್ರೀ ಶ್ರೀರಾಮ ಭಟ್ರ ನೇತೃತ್ವದಲ್ಲಿ ಶ್ರೀ ಕ್ಷೇತ್ರದ ಧರ್ಮದೈವಗಳನ್ನು ಪುನರ್ ಪ್ರತಿಷ್ಠೆ ಬ್ರಹ್ಮ ಕಲಶಾಭಿಷೇಕ ಜರಗಲಿರುವುದು. ಆ ಪ್ರಯುಕ್ತ ಶ್ರೀ […]

ಏ.30 ರಂದು ಔರಾ ಕೆಫೆ ಶಾಪ್ ಉದ್ಘಾಟನೆ 

ಉಡುಪಿ: ಇಲ್ಲಿನ ಹೊಸ ಬಸ್ ನಿಲ್ದಾಣದ ಬಳಿಯ ಜಿ ಬೀ ಪಂತ್ ರಸ್ತೆಯಲ್ಲಿರುವ ಗ್ರಾಸ್ ಲಾಂಡ್ ಕಾಂಪ್ಲೆಕ್ಸ್ ನಲ್ಲಿ ಔರ ಕೆಫೆ ಶಾಪ್ ಏಪ್ರಿಲ್ 30 ರಂದು ಬೆಳಿಗ್ಗೆ 11.30 ಕ್ಕೆ ಶುಭಾರಂಭಗೊಳ್ಳಲಿದೆ. ಕೆಫೆಯಲ್ಲಿ ಮನೆಯಲ್ಲೇ ತಯಾರಿಸಿದ ಐಸ್ ಕ್ರೀಮ್, ಬೇಕರಿ ಉತ್ಪನ್ನ, ಚಾಕೋಲೇಟ್, ಪೆಸ್ಟ್ರಿ ದೊರೆಯುತ್ತವೆ.

ವಾಟ್ಸಾಪ್ (WhatsApp)ಬಳಕೆದಾರರು ಈಗ ನಾಲ್ಕು ಫೋನ್‌ಗಳಲ್ಲಿ ಒಂದು ಖಾತೆಯನ್ನು ಬಳಸಬಹುದು: ಹೇಗೆಂದು ತಿಳಿಯಿರಿ

ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನ ಸಿಇಒ ಮಾರ್ಕ್ ಜುಕರ್‌ಬರ್ಗ್, ವಾಟ್ಸಾಪ್ (WhatsApp) ಅಂತಿಮವಾಗಿ ಬಹು-ಸಾಧನ ಲಾಗಿನ್ ಬೆಂಬಲವನ್ನು ಪರಿಚಯಿಸುತ್ತಿದೆ ಎಂದು ಘೋಷಿಸಿದ್ದು, ಇದು ಬಳಕೆದಾರರಿಗೆ ಒಂದೇ ವಾಟ್ಸಾಪ್ ಖಾತೆಯನ್ನು ನಾಲ್ಕು ಬೇರೆ ಬೇರೆ ಫೋನ್‌ಗಳಲ್ಲಿ ಬಳಸಲು ಅನುವು ಮಾಡಿಕೊಡುತ್ತದೆ. ವಾಟ್ಸಾಪ್ ಪ್ರಕಾರ, ಈ ವೈಶಿಷ್ಟ್ಯವನ್ನು ಮುಂಬರುವ ವಾರಗಳಲ್ಲಿ ಎಲ್ಲಾ ಬಳಕೆದಾರರಿಗೆ ಬಿಡುಗಡೆ ಮಾಡಲಾಗುವುದು. ಈ ಹಿಂದೆ, ಬಳಕೆದಾರರು ಒಂದೇ ಫೋನ್ ಮತ್ತು ಬಹು ಕಂಪ್ಯಾನಿಯನ್ ಡೆಸ್ಕ್‌ಟಾಪ್ ಸಾಧನಗಳಲ್ಲಿ ಒಂದು ವಾಟ್ಸಾಪ್ ಖಾತೆ ಬಳಸಲು ಸೀಮಿತರಾಗಿದ್ದರು. ಈ ಹೊಸ ಬಹು-ಸಾಧನ […]