ಪುತ್ತೂರು “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಪುತ್ತೂರು: ಜ.27 ರಂದು ನಡೆದ 31ನೇ ವರ್ಷದ ಪುತ್ತೂರು “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 06 ಜೊತೆ ಅಡ್ಡಹಲಗೆ: 04 ಜೊತೆ ಹಗ್ಗ ಹಿರಿಯ: 15 ಜೊತೆ ನೇಗಿಲು ಹಿರಿಯ: 40 ಜೊತೆ ಹಗ್ಗ ಕಿರಿಯ: 25 ಜೊತೆ ನೇಗಿಲು ಕಿರಿಯ: 97 ಜೊತೆ ಒಟ್ಟು ಕೋಣಗಳ ಸಂಖ್ಯೆ: 187 ಜೊತೆ ಕನೆಹಲಗೆ: (6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ) ಬೋಳಾರ ತ್ರಿಶಾಲ್ ಕೆ […]

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಪೇಜಾವರ ಶ್ರೀಗಳಿಂದ 48 ದಿನಗಳ ಮಂಡಲೋತ್ಸವ ಆರಂಭ

ಉಡುಪಿ: ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮನ‌ ವಿಧ್ಯುಕ್ತ ಪ್ರತಿಷ್ಠಾಪನೆಯ ನಂತರ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದಿನಿಂದ 48 ದಿನಗಳ ಮಂಡಲೋತ್ಸವ ಆರಂಭಗೊಂಡಿದೆ. ಪೇಜಾವರ ಶ್ರೀಗಳು ಮಂಗಳವಾರವೂ ವಿವಿಧ ಮಂತ್ರಗಳಿಂದ ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ, ಚಾಮರಸೇವೆ, ಮಂಗಳಾರತಿಗಳನ್ನು ನೆರವೇರಿಸಿ ಪೂಜೆ ಸಲ್ಲಿಸಿದರು. ಇದಕ್ಕೂ ಮೊದಲು ಪಿಲೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ವಿದ್ವಾನ್ ಸತ್ಯನಾರಾಯಣಾಚಾರ್ಯ, ವಿಷ್ಣುಮೂರ್ತಿ ಆಚಾರ್ಯ, ಶಶಾಂಖ ಭಟ್ ಲಕ್ಷ್ಮೀನಾರಾಯಣ ಭಟ್ ಮೊದಲಸದವರ ನೇತೃತ್ವದಲ್ಲಿ ವಿವಿಧ ಹೋಮಹವನಾದಿಗಳು ಕಲಶಾರಾಧನೆ ಇತ್ಯಾದಿಗಳು ನೆರವೇರಿದವು.

ಜ.24: ಖ್ಯಾತ ಅಂತರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ಬಳಗದವರಿಂದ ವಿಸ್ಮಯ ಜಾದೂ ಪ್ರದರ್ಶನ

ಉಡುಪಿ: ಉಡುಪಿಯಲ್ಲಿ ನಡೆಯುತ್ತಿರುವ ಪುತ್ತಿಗೆ ಪರ್ಯಾಯ ಮಹೋತ್ಸವದ ಸಾಂಸ್ಕ್ರತಿಕ ಸಪ್ತೋತ್ಸವದ ಸಮಾರೋಪದಲ್ಲಿ ಇಂಡಿಯಾಸ್ ಗಾಟ್ ಟ್ಯಾಲೆಂಟ್ ಫೈನಲಿಸ್ಟ್, ಸಚಿವರನ್ನೇ ಮಾಯ ಮಾಡಿದ ಖ್ಯಾತಿಯ ಅಂತರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ಹಾಗೂ ಬಳಗದವರಿಂದ ವಿಸ್ಮಯ ಜಾದೂ ಪ್ರದರ್ಶನಗೊಳ್ಳಲಿದೆ. ಜನವರಿ 24 ಬುಧವಾರದಂದು ರಾತ್ರಿ 7.30 ಕ್ಕೆ ಶ್ರೀ ಕ್ರಷ್ಣ ಮಠದ ರಾಜಾಂಗಣದಲ್ಲಿ ಜಾದೂ, ಜಾನಪದ, ರಂಗಭೂಮಿ ಹಾಗೂ ಸಂಗೀತಗಳ ಸಮ್ಮಿಲನದ ವಿಸ್ಮಯ ಜಾದೂ ವಿನೂತನ ಜಾದೂ ತಂತ್ರಗಳೊಂದಿಗೆ ಪ್ರೇಕ್ಷಕರನ್ನು ರಂಜಿಸಲಿದೆ. ಇಂಡಿಯಾಸ್ ಗಾಟ್ ಟ್ಯಾಲೆಂಟ್ ರಿಯಾಲಿಟಿ ಶೋ ಮೂಲಕ […]

ಐತಿಹಾಸಿಕ ಕೀಳಂಜೆ ದೇವಸ್ಥಾನ: ಮುಷ್ಟಿ ಕಾಣಿಕೆ ಸಮರ್ಪಣೆ ಸಂಪನ್ನ

ಉಡುಪಿ: ಪುರಾತನ ಪ್ರಸಿದ್ಧ 8 ನೇ ಶತಮಾನದ ಗಾಲವ ಋಷಿ ತಪಸ್ಸು ಮಾಡಿದ್ದ ಕೀಳಂಜೆ ಶ್ರೀ ಮಹಾವಿಷ್ಣು ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಹರಿಹರ ತೀರ್ಥದ ಸಮಗ್ರ ಜೀರ್ಣೋದ್ಧಾರ ಪ್ರಯುಕ್ತ ಪ್ರಾಯಶ್ಚಿತ್ತ ಹೋಮಾದಿಗಳು ಉಡುಪಿ ಪೇಜಾವರ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದಂಗಳವರ ಆಶೀರ್ವಾದದೊಂದಿಗೆ ಜ.22 ಸೋಮವಾರದಂದು ಬೆಳಿಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, ಗಣಹೋಮ, ಭದ್ರದೀಪ ಸಮರ್ಪಣೆ, ಮುಷ್ಟಿ ಕಾಣಿಕೆ ಸಮರ್ಪಣೆ ಹಾಗೂ ಇತರ ಧಾರ್ಮಿಕ ವಿಧಿಗಳೊಂದಿಗೆ ಪ್ರಾರಂಭಗೊಂಡಿತು. ಅಂದು ಜೈನ ಮುನಿ ಗಾಲವ […]

ಅಯೋಧ್ಯೆಯಲ್ಲಿ ರಾಮ‌ಲಲ್ಲಾ ಪ್ರತಿಷ್ಠೆ: ಕೊಡವೂರಿನಲ್ಲಿ ದೀಪೋತ್ಸವ

ಕೊಡವೂರು: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಳದಲ್ಲಿ ಪ್ರಧಾನ ಅರ್ಚಕ ಪ್ರಸಾದ್ ಭಟ್ ಅವರು ದೀಪ ಬೆಳಗಿಸಿ ದೀಪೋತ್ಸವಕ್ಕೆ ಚಾಲನೆ ನೀಡಿದರು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್, ಸದಸ್ಯರಾದ ಸುಧೀರ್ ರಾವ್ ಕೊಡವೂರು, ಪೂರ್ಣಿಮಾ ಜನಾರ್ದನ್ ಗೋವಿಂದ ಐತಾಳ್, ಉಮೇಶ್ ರಾವ್, ವಾಸುದೇವ ಉಪಾಧ್ಯಾಯ, ಕಾಳು ಸೇರಿಗಾರ ಮತ್ತು ಊರಿನ ಹತ್ತು ಸಮಸ್ತರು ದೀಪವನ್ನು ಹಚ್ಚಿ ದೀಪೋತ್ಸವವನ್ನು ಆಚರಿಸಿದರು.