ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆ ಖಾಲಿ

ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ ಅಥವಾ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿ ಸಶಸ್ತ್ರ ಪಡೆಯಲ್ಲಿ ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ಸ್ಪೆಷಲ್ ಸರ್ಟಿಫಿಕೆಟ್ ಹೊಂದಿದ ಅಥವಾ ಸಶಸ್ತ್ರ ಪಡೆಗಳಿಂದ ಪದವಿ ಪ್ರಮಾಣ ಪತ್ರ ಹೊಂದಿದ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ […]

ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು, ನಗರಸಭೆಯಿಂದ ರಚಿಸಲ್ಪಟ್ಟ ಅರ್ಹ ಸ್ವ-ಸಹಾಯ ಗುಂಪುಗಳ ಹಾಗೂ ಪ್ರದೇಶ ಮಟ್ಟದ ಒಕ್ಕೂಟದ 18 ರಿಂದ 45 ವರ್ಷದೊಳಗಿನ ಅರ್ಹ ಮಹಿಳಾ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿ.ಯು.ಸಿ ಉತ್ತೀರ್ಣರಾಗಿರುವ, ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರುವ ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿ […]

ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಹುದ್ದೆಗೆ ನೇರ ಸಂದರ್ಶನ

ಉಡುಪಿ: ಉಡುಪಿ ತಾಲೂಕು ವ್ಯಾಪ್ತಿಯ ನಮ್ಮ ಕ್ಲಿನಿಕ್‌ನಲ್ಲಿ ಖಾಲಿ ಇರುವ ವೈದ್ಯಾಧಿಕಾರಿ-01 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಅಕ್ಟೋಬರ್ 15 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಮೂಲದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಚ್ಚಿನ್ ಶಿಪ್‌ ಯಾರ್ಡ್ ನಲ್ಲಿ ಡೆಪ್ಯುಟಿ ಮ್ಯಾನೇಜರ್ ಪೇಂಟಿಂಗ್ ಹುದ್ದೆ ಖಾಲಿ

ಉಡುಪಿ: ಉಡುಪಿಯ ಕೊಚ್ಚಿನ್ ಶಿಪ್‌ಯಾರ್ಡ್ ಲಿ. ನಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ ಪೇಂಟಿಂಗ್ -1 ಹುದ್ದೆಗೆ 38 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.cochinshipyard.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅಕ್ಟೋಬರ್ 11 ರಂದು ಮಿನಿ ಉದ್ಯೋಗ ಮೇಳ

ಉಡುಪಿ: ಆಲ್ಸೆಕ್ ಟೆಕ್ನಾಲಜಿ ಪ್ರೈ.ಲಿ, ರಾಂಡ್ ಸ್ಟಾಂಡ್ ಇಂಡಿಯಾ ಪ್ರೈ.ಲಿ, ಸಂಗೀತಾ ಮೊಬೈಲ್ಸ್, ಪ್ಲಿಫ್‌ಕಾರ್ಟ್ ಹಾಗೂ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ.ಲಿ ಕಂಪನಿಗಳ ವತಿಯಿಂದ ಅಕ್ಟೋಬರ್ 11 ರಂದು ಬೆಳಗ್ಗೆ 10.30 ಕ್ಕೆ ಉಡುಪಿಯ ಅನುರಾಗ ಕಾಂಪ್ಲೆಕ್ಸ್ ನ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ.ಲಿ ಇಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ […]