ಮಂಗಳೂರು: ಜಿ.ಪಂ ಘನ ದ್ರವ ತ್ಯಾಜ್ಯ ನಿರ್ವಹಣೆ ಜಿಲ್ಲಾ ಸಲಹೆಗಾರ ಹುದ್ದೆ ಖಾಲಿ

ವಿಭಾಗ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆ: ಘನ ದ್ರವ ತ್ಯಾಜ್ಯ ನಿರ್ವಹಣೆ ಜಿಲ್ಲಾ ಸಲಹೆಗಾರ (ಗುತ್ತಿಗೆ ಆಧಾರ) ವಿದ್ಯಾರ್ಹತೆ: ಎನ್ವಿರಾನ್‌ಮೆಂಟಲ್ ಇಂಜಿನಿಯರಿಂಗ್‌ನಲ್ಲಿ ಪದವಿ/ಸ್ನಾತಕೋತ್ತರ ಪದವಿ ಹೊಸಬರು ಅಥವಾ ಅನುಭವ ಇರುವವ ಪುರುಷ/ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ವೇತನ: 25 ಸಾವಿರ ಕೆಲಸದ ಸ್ಥಳ: ಮಂಗಳೂರು ಆಸಕ್ತ ಅಭ್ಯರ್ಥಿಗಳು ಸಿವಿ : 9964242943 ಗೆ ವಾಟ್ಸಾಪ್ ಮಾಡಬಹುದು  

ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದಲ್ಲಿ ಅಕೌಂಟೆಂಟ್ ಹುದ್ದೆ ಖಾಲಿ

ಉಡುಪಿ: ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿ ಉಡುಪಿಯ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದಲ್ಲಿ ಖಾಲಿ ಇರುವ ಅಕೌಂಟೆಂಟ್ -1 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಸಹಾಯಕ ಲೆಕ್ಕ ಪರಿಶೋಧನಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಸಹಾಯಕ ಲೆಕ್ಕ ಪರಿಶೋಧನಾ ಅಧಿಕಾರಿ ಮತ್ತು ಸಹಾಯಕ ಲೆಕ್ಕ ಪತ್ರ ಅಧಿಕಾರಿ ನೇಮಕಾತಿಗೆ ವೆಬ್‌ಸೈಟ್ www.ssckkr.kar.nic.in ಮತ್ತು https://ssc.nic.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪದವಿಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನೋಂದಾಯಿಸಲು ಅಕ್ಟೋಬರ್ 8 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 080-25502520, 9483862020 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರತೀಯ ಆಹಾರ ನಿಗಮದಲ್ಲಿ ನಾನ್ ಎಕ್ಸಿಕ್ಯುಟಿವ್ ಹುದ್ದೆ ಖಾಲಿ

ಉಡುಪಿ: ರಾಷ್ಟ್ರದ ಆಹಾರ ಭದ್ರತೆಯನ್ನು ಖಾತ್ರಿಪಡಿಸುವ ಅತಿದೊಡ್ಡ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಒಂದಾದ ಭಾರತೀಯ ಆಹಾರ ನಿಗಮ (ಎಫ್‌ಸಿ.ಐ) ದಲ್ಲಿ ವಲಯವಾರು ಖಾಲಿ ಇರುವ ನಾನ್ ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://fci.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕೂಸಮ್ಮ ಶಂಭು ಶೆಟ್ಟಿ ಆಸ್ಪತ್ರೆಯಲ್ಲಿ ಖಾಲಿ ಹುದ್ದೆ: ನೇರ ಸಂದರ್ಶನ

ಉಡುಪಿ: ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಮಕ್ಕಳ ತಜ್ಞ, ಅರಿವಳಿಕೆ ಹಾಗೂ ಸೋನೊಲಾಜಿಸ್ಟ್ ತಲಾ 1 ಹುದ್ದೆ ಹಾಗೂ ವೈದ್ಯಾಧಿಕಾರಿಗಳ 3 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಸೆಪ್ಟಂಬರ್ 15 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ […]