ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಶಿಕ್ಷಣ ಹಾಗೂ ಸ್ವಯಂ ಉದ್ಯೋಗ ಸಾಲ ಸೌಲಭ್ಯ

ಉಡುಪಿ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ವೆಬ್ಸೈಟ್ kacdc.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 11 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 0820-2574882, ಮೊ.ನಂ: 9448451111 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ: ಯುವಕ ಯುವತಿಯರಿಂದ ಸ್ವ-ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ) ಯಡಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತ 18 ವರ್ಷ ಮೇಲ್ಪಟ್ಟ ಯುವಕ-ಯುವತಿಯರಿಂದ ವೆಬ್ಸೈಟ್ http://www.kviconline.gov.in/pmegpeportal/jsp/pmegponline.jsp ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574855 […]
ಡಿ. ದೇವರಾಜ ಅರಸು ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆ ದಿನ

ಉಡುಪಿ: ಪ್ರಸಕ್ತ ಸಾಲಿನ ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿರುವ ವ್ಯಕ್ತಿ/ಸಂಘ ಸಂಸ್ಥೆಗಳಿಗೆ ಜಿಲ್ಲಾ ಮಟ್ಟದ ಡಿ ದೇವರಾಜ ಅರಸು ಪ್ರಶಸ್ತಿ ನೀಡಲು ಅರ್ಹರನ್ನು ಆಯ್ಕೆ ಮಾಡಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಪ್ರಶಸ್ತಿಗೆ ಆಯ್ಕೆಯಾದ ವ್ಯಕ್ತಿ ಸಂಘ ಸಂಸ್ಥೆಗಳಿಗೆ ರೂ.50,000/- ನಗದು ಹಾಗೂ ಫಲಕದೊಂದಿಗೆ ಪ್ರಶಸ್ತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯ ದಿನವಾಗಿದ್ದು, ಅರ್ಹ ಸಾಧಕರು ಮತ್ತು ಸಂಘ ಸಂಸ್ಥೆಗಳು […]
ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿರುವ ವ್ಯಕ್ತಿ/ಸಂಘ-ಸಂಸ್ಥೆಗಳಿಗೆ ಜಿಲ್ಲಾ ಮಟ್ಟದ ಡಿ.ದೇವರಾಜ ಅರಸು ಪ್ರಶಸ್ತಿ

ಉಡುಪಿ : ಪ್ರಸಕ್ತ ಸಾಲಿನ ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿರುವ ವ್ಯಕ್ತಿ/ಸಂಘ ಸಂಸ್ಥೆಗಳಿಗೆ ಜಿಲ್ಲಾ ಮಟ್ಟದ ಡಿ ದೇವರಾಜ ಅರಸು ಪ್ರಶಸ್ತಿ ನೀಡಲು ಅರ್ಹರನ್ನು ಆಯ್ಕೆ ಮಾಡಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿದೆ. ಈ ಪ್ರಶಸ್ತಿಗೆ ಅರ್ಹವಿರುವ ವ್ಯಕ್ತಿಯು ದೇವರಾಜ ಅರಸುರವರ ಧೇಯೋದ್ದೇಶಗಳನ್ನು ಹೊಂದಿದ್ದು, ಆ ನಿಟ್ಟಿನಲ್ಲಿ ಕಾರ್ಯ ನಿರತರಾಗಿರಬೇಕು. ದೇವರಾಜ ಅರಸುರವರು ಕಾರ್ಯಗತಗೊಳಿಸಿದ ಯೋಜನೆ/ ಕಾರ್ಯಕ್ರಮಗಳಲ್ಲಿ ಒಂದೆರೆಡರಲ್ಲಿಯಾದರೂ ಸ್ವಯಂ ಪ್ರೇರಣೆಯಿಂದ ತಮ್ಮನ್ನು […]
ಆಗಸ್ಟ್ 17 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ವೃತ್ತಿ ಸಮಾಲೋಚನಾ ಕಾರ್ಯಾಗಾರ

ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕಚೇರಿ ಉಡುಪಿ ಹಾಗೂ ಹೆಚ್.ಸಿ.ಎಲ್ ಟೆಕ್ನಾಲಜೀಸ್ ಇವರ ಸಹಯೋಗದೊಂದಿಗೆ ಹೆಚ್.ಸಿ.ಎಲ್ ಟೆಕ್ನಾಲಜೀಸ್ ಟೆಕ್ ಬಿ – ವೃತ್ತಿ ಸಮಾಲೋಚನಾ ಕಾರ್ಯಾಗಾರವು ಆಗಸ್ಟ್ 17 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ರ ವರೆಗೆ ನಗರದ ಮಹಾತ್ಮಾ ಗಾಂಧಿ ಮೆಮೋರಿಯಲ್ ಕಾಲೇಜಿನಲ್ಲಿ ನಡೆಯಲಿದೆ. ದ್ವಿತೀಯ ಪಿ.ಯು.ಸಿ ಯಲ್ಲಿ ಗಣಿತ ಹಾಗೂ ವ್ಯವಹಾರ ಅಧ್ಯಯನ ವಿಷಯದಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ವೆಬ್ಸೈಟ್ https://bit.ly/hcltechbeeevent ನಲ್ಲಿ ನೋಂದಾಯಿಸಿಕೊಂಡು, ಎಸ್.ಎಸ್.ಎಲ್.ಸಿ […]