ಜಿಲ್ಲಾ ಬಾಲಕಾರ್ಮಿಕ ಸಲಹಾ ಸಮಿತಿ ಸದಸ್ಯರ ನಾಮನಿರ್ದೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಸಲಹಾ ಸಮಿತಿಯ ಸದಸ್ಯರನ್ನು 2 ವರ್ಷದ ಅವಧಿಗೆ ನಾಮನಿರ್ದೇಶನ ಮಾಡಲು ಅರ್ಜಿ ಅಹ್ವಾನಿಸಲಾಗಿದೆ. ಸರ್ಕಾರೇತರ ಸಂಸ್ಥೆ, ಕಾರ್ಮಿಕ ಸಂಘಟನೆ, ಮಾಲಕರ ಸಂಘವನ್ನು ಪ್ರತಿನಿಧಿಸುವ, ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿರುವ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಕೆಲಸ ಮಾಡಿರುವ, ಎಸ್.ಸಿ, ಎಸ್.ಟಿ, ಅಲ್ಪಸಂಖ್ಯಾತ ಹಾಗೂ ಮಹಿಳಾ ವರ್ಗಕ್ಕೆ ಸೇರಿದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 8 ರ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಪರ ಜಿಲ್ಲಾಧಿಕಾರಿಗಳು ಹಾಗೂ ಸದಸ್ಯ […]

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ: ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ

ಉಡುಪಿ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮರಾತ, ಮರಾಠ, ಅರೆ ಕ್ಷತ್ರಿ, ಅರೆ ಮರಾಠ, ರ‍್ಯಮರಾಠ, ಆರ್ಯ, ಆರ್ಯರು, ಕೊಂಕಣ ಮರಾಠ, ಕ್ಷತ್ರಿಯ ಮರಾತ, ಕ್ಷತ್ರಿಯ ಮರಾಠ ಹಾಗೂ ಕುಳವಾಡಿ ಜನರ ಆರ್ಥಿಕ ಅಭಿವೃದ್ಧಿಗಾಗಿ ಶ್ರೀ ಶಹಜೀರಾಜೇ ಸಮೃದ್ಧಿ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ) ಯೋಜನೆಯಡಿ ಸುವಿಧಾ ತಂತ್ರಾಂಶ https://suvidha.karnataka.gov.in ರಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಕೌಶಲ್ಯ ಕರ್ನಾಟಕ […]

ರೈತರಿಗಾಗಿ ಸಾವಯವ ಕೃಷಿ ಉಚಿತ ತರಬೇತಿ ಕಾರ್ಯಕ್ರಮ

ಉಡುಪಿ : ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆ ಹಾಗೂ ಗೋವರ್ಧನ ಗಿರಿ ಟ್ರಸ್ಟ್ ಸಹಯೋಗದಲ್ಲಿ ಸಾವಯವ ಸಿರಿ ಯೋಜನೆಯಡಿ ಜಿಲ್ಲಾಮಟ್ಟದಲ್ಲಿ ಸಾವಯವ ಕೃಷಿ ವಿಷಯಕ್ಕೆ ಸಂಬಂಧಿಸಿದ 2 ದಿನಗಳ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಹೊಸದಾಗಿ ಸಾವಯವ ಹಾಗೂ ನೈಸರ್ಗಿಕ ಕೃಷಿಯಲ್ಲಿ ತೊಡಗಿಕೊಂಡಿರುವ ಯುವಕ ರೈತರು, ಮಹಿಳೆಯರು ಹಾಗೂ ಸಾವಯವ ಹಾಗೂ ನೈಸರ್ಗಿಕ ಕೃಷಿಯಲ್ಲಿ ಈ ಹಿಂದೆ ತರಬೇತಿ ಪಡೆಯದೇ ಇರುವ ರೈತರೂ ಸಹ ಪಾಲ್ಗೊಳ್ಳಬಹುದಾಗಿದೆ. ಆಸಕ್ತರು ರೈತ ಸಂಪರ್ಕ ಕೇಂದ್ರದಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಆಗಸ್ಟ್ 17 […]

ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ: ಅನ್ಯ ರಾಜ್ಯದ ಚೀಟಿದಾರರಿಗೂ ಆಧಾರ್ ಆಧಾರಿತ ಪಡಿತರ ವಿತರಣೆ

ಉಡುಪಿ: ಕೇಂದ್ರ ಸರ್ಕಾರದ ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ ಜಿಲ್ಲೆಯ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಬೇರೆ ರಾಜ್ಯದ ಪಡಿತರ ಚೀಟಿದಾರರು ಅವರ ಆಧಾರ್ ದೃಢೀಕೃತ ಬೆರಳಚ್ಚು ಬಯೋಮೆಟ್ರಿಕ್ ಅಥವಾ ಆಧಾರ್ ಆಧಾರಿತ ಒ.ಟಿ.ಪಿ ನೀಡಿ ಪಡಿತರ ಪಡೆಯಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರತೀಯ ಅಂಚೆ ಇಲಾಖೆ: ಸಹೋದರರಿಗೆ ಹಾಗೂ ಸೇನಾ ಯೋಧರಿಗೆ ಆನ್ ಲೈನ್ ರಾಖಿ ತಲುಪಿಸುವ ಅವಕಾಶ

ಉಡುಪಿ: ಭಾರತೀಯ ಅಂಚೆ ಇಲಾಖೆಯ ವತಿಯಿಂದ ಮನೆಯಲ್ಲಿ ಕುಳಿತು ದೇಶದ ಯಾವುದೇ ಪ್ರದೇಶಕ್ಕೆ ರಾಖಿಯನ್ನು ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸುವ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಕೇವಲ 120 ರೂ. ವೆಚ್ಚದಲ್ಲಿ ಸಹೋದರರಿಗೆ ಹಾಗೂ ಲಡಾಕ್ ಗಡಿ ಪ್ರದೇಶದಲ್ಲಿರುವ ಸೇನಾ ಯೋಧರಿಗೂ ರಾಖಿ ತಲುಪಿಸುವ ಅವಕಾಶ ಕಲ್ಪಿಸಲಾಗಿದೆ. ಈ ಸೇವಾ ಯೋಜನೆಯಲ್ಲಿ www.karnatakapost.gov.in/Rakhi_Post ಗೆ ಲಾಗಿನ್ ಆಗಿ ಕಳುಹಿಸುವವರ ಪೂರ್ಣ ವಿವರಗಳನ್ನು ನೀಡಿದಾಗ ಏಳು ವಿಧದ ಆಕರ್ಷಕ ವಿನ್ಯಾಸವುಳ್ಳ ರಾಖಿಗಳನ್ನು ವೀಕ್ಷಿಸಬಹುದಾಗಿದ್ದು, ಪ್ರತಿಯೊಂದು ವಿನ್ಯಾಸದ ಎದುರು ವಿನ್ಯಾಸ ಅಂಕಿ ನಮೂದಿಸಿದ್ದು […]