ಬಾಲಕಿಯರ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ: ಮಹಿಳಾ ತರಬೇತುದಾರರಿಂದ ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ 6 ಮೆಟ್ರಿಕ್ ಪೂರ್ವ ಹಾಗೂ 14 ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡಲು ಕರಾಟೆ, ಜುಡೋ ಹಾಗೂ ಟೈಕ್ವಾಂಡೋಗಳಲ್ಲಿ ವಿಶೇಷ ಪರಿಣಿತಿ ಹೊಂದಿದ ಮಹಿಳಾ ತರಬೇತಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. 40 ವರ್ಷದೊಳಗಿನ, ಬ್ಲ್ಯಾಕ್ ಬೆಲ್ಟ್ ಅರ್ಹತೆ ಹೊಂದಿರುವ, ನೊಂದಾಯಿತ ಕರಾಟೆ ಸಂಘದ ಸದಸ್ಯತ್ವ ಪಡೆದಿರುವ ಅರ್ಹ ಮಹಿಳಾ ತರಬೇತುದಾರರು ಆಗಸ್ಟ್ 5 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. […]

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ: ಏಕಲವ್ಯ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಕ್ರೀಡಾಪಟುಗಳಿಂದ ಏಕಲವ್ಯ ಪ್ರಶಸ್ತಿಗೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ, ಕಳೆದ ಮೂರು ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡಾಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾ ಪೋಷಕರಿಂದ, ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, […]

ಬನ್ನಂಜೆ: ಸಾಂತ್ವನ ಮಹಿಳಾ ಸಹಾಯವಾಣಿ ಯೋಜನೆ ಕಾರ್ಯಾರಂಭ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಬರುವ ಸಾಂತ್ವನ ಮಹಿಳಾ ಸಹಾಯವಾಣಿ ಯೋಜನೆಯು ಕಾರ್ಯಾರಂಭಗೊಂಡಿದ್ದು, ಪ್ರಸ್ತುತ ನಗರದ ಬನ್ನಂಜೆ ಹಳೇ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುತ್ತದೆ. ಈ ಯೋಜನೆಯಡಿ ಮಹಿಳೆಯರ ಮೇಲಾಗುವ ದೌರ್ಜನ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಆಪ್ತಸಮಾಲೋಚನೆ ಹಾಗೂ ಕಾನೂನು ಸಲಹೆಗಳ ಮೂಲಕ ಬಗೆಹರಿಸಲಾಗುವುದು. ಸದ್ರಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಚಿಗುರು ಹಾಗೂ ಯುವ ಸೌರಭ ಕಾರ್ಯಕ್ರಮಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 8 ರಿಂದ 14 ವರ್ಷದೊಳಗಿನ ಮಕ್ಕಳ ಪ್ರತಿಭಾ ಪ್ರದರ್ಶನಕ್ಕಾಗಿ ಚಿಗುರು ಕಾರ್ಯಕ್ರಮ ಹಾಗೂ 15 ರಿಂದ 30 ವರ್ಷದೊಳಗಿನ ಯುವ ಕಲಾವಿದರಿಂದ ಯುವ ಸೌರಭ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲಾವಿದರು ಶಾಸ್ತ್ರೀಯ ಸಂಗೀತ, ವಾದ್ಯ ಸಂಗೀತ, ಜನಪದ ಕಲಾ ಪ್ರಕಾರ, ಸುಗಮ ಸಂಗೀತ, ಸಮೂಹ ನೃತ್ಯ, ನಾಟಕ, ಯಕ್ಷಗಾನ ಹಾಗೂ ಏಕಪಾತ್ರಾಭಿನಯ ಕಲಾಪ್ರಕಾರಗಳಿಗೆ ಜುಲೈ 31 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ […]

ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಉತ್ತರಾಖಂಡ ರಾಜ್ಯದ ಡೆಹರಾಡೂನ್‌ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ 8 ನೇ ತರಗತಿ ಸೇರ್ಪಡೆಗೆ ಪ್ರವೇಶ ಪರೀಕ್ಷೆಯು ಡಿಸೆಂಬರ್ 3 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದ್ದು, ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7 ನೇ ತರಗತಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ, 2023 ಜುಲೈ 1 ಕ್ಕೆ 11 1/2 ರಿಂದ 13 ವರ್ಷ ತುಂಬಿರುವ ಬಾಲಕ ಹಾಗೂ ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ಅಭ್ಯರ್ಥಿಗಳು 600 ರೂ. ಹಾಗೂ ಎಸ್.ಸಿ.ಎಸ್.ಟಿ ಅಭ್ಯರ್ಥಿಗಳು […]