ಭಾರತೀಯ ಅಂಚೆ ಇಲಾಖೆಯ ವತಿಯಿಂದ ಪತ್ರ ಲೇಖನ ಸ್ಪರ್ಧೆ

ಉಡುಪಿ: ಭಾರತೀಯ ಅಂಚೆ ಇಲಾಖೆಯ ವತಿಯಿಂದ 18 ವರ್ಷ ಮೇಲ್ಪಟ್ಟವರಿಗೆ, ‘ವಿಶನ್ ಫಾರ್ ಇಂಡಿಯಾ 2047’ ಎಂಬ ವಿಷಯದ ಕುರಿತು ಹಿಂದಿ, ಇಂಗ್ಲೀಷ್ ಹಾಗೂ ಕನ್ನಡ ಭಾಷೆಯಲ್ಲಿ ಪತ್ರಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧಾಳುಗಳು ಅಂತರ್ದೇಶೀಯ ಪತ್ರದಲ್ಲಿ ಬರೆದ ಕೈಬರಹದ ಪ್ರತಿಯನ್ನು ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ ಇವರಿಗೆ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.indiapost.gov.in, www.karnatakapost.gov.in ಅಥವಾ ದೂರವಾಣಿ ಸಂಖ್ಯೆ: 0820-2521780 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ವಿಭಾಗದ […]
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಾತಿ: ಬನ್ನಂಜೆ ಕಚೇರಿ ಭಾನುವಾರವೂ ಕಾರ್ಯಾಚರಣೆ

ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಉಡುಪಿಯ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಪ್ರವೇಶಾತಿಗಳು ನಡೆಯುತ್ತಿರುವ ಹಿನ್ನೆಲೆ, 2 ನೇ ಮತ್ತು 4ನೇ ಶನಿವಾರ ಹಾಗೂ ಭಾನುವಾರದಂದು ಬನ್ನಂಜೆಯಲ್ಲಿರುವ ಪ್ರಾದೇಶಿಕ ಕೇಂದ್ರ ಕಚೇರಿ ತೆರೆದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ರಂಗಾಯಣ ನಾಟಕಗಳಿಗೆ ಅನುಭವಿ ಕಲಾವಿದರಿಂದ ಅರ್ಜಿ ಆಹ್ವಾನ

ಉಡುಪಿ: ಮೈಸೂರಿನ ರಂಗಾಯಣ ಸಂಸ್ಥೆಯ ವತಿಯಿಂದ ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ನಾಟಕ ಶಾಲೆಯ ಪದವಿ ಪಡೆದಿರುವ, ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಲ್ಲಿ ರಂಗಶಿಕ್ಷಣ ಪದವಿ ಅಥವಾ ಡಿಪ್ಲೋಮಾ ಪಡೆದಿರುವ 22 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜುಲೈ 18 ಕೊನೆಯ ದಿನ. ಜುಲೈ 20 ರಂದು ಬೆಳಗ್ಗೆ 10 ಗಂಟೆಗೆ ಮೈಸೂರಿನ ರಂಗಾಯಣದಲ್ಲಿ ಸಂದರ್ಶನ ನಡೆಯಲಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ […]
ಪೈಪ್ ಲೈನ್ ಕಾಮಗಾರಿಗಾಗಿ ಮರಗಳ ತೆರವು: ಜುಲೈ 18 ರಂದು ಸಾರ್ವಜನಿಕ ಅಹವಾಲು ಸಭೆ

ಉಡುಪಿ: ಉಡುಪಿ ನಗರಕ್ಕೆ ವಾರಾಹಿ ನದಿಯಿಂದ ಕುಡಿಯುವ ನೀರು ಸರಬರಾಜು ಯೋಜನೆಯಡಿ ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಜೆ.ಎಲ್.ಎಸ್.ಆರ್ ವರೆಗೆ ಪೈಪ್‌ಲೈನ್ ಅಳವಡಿಸುವ ಕಾಮಗಾರಿಗೆ ಸಂಬಂಧಿಸಿದಂತೆ, ಕಾಮಗಾರಿಗೆ ಅಡಚಣೆಯಾಗುವ 58 ಗಿಡಗಳನ್ನು ತೆರವುಗೊಳಿಸುವ ಕುರಿತು ಜುಲೈ 18 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಗೆ ಹಾಜರಾಗಿ ಅಥವಾ ಸಭೆ ನಡೆಯುವ ದಿನಾಂಕದ ಒಳಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಉಪ ಸಂರಕ್ಷಣಾಧಿಕಾರಿಯವರ […]
ಅಮರನಾಥ ಯಾತ್ರೆ: ಜಿಲ್ಲಾ ಯಾತ್ರಾರ್ಥಿಗಳ ಸಂಬಂಧಿಕರು ಜಿಲ್ಲಾಡಳಿತದ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಮನವಿ

ಉಡುಪಿ: ಜಿಲ್ಲೆಯಿಂದ ಅಮರನಾಥ ಕ್ಷೇತ್ರ ಯಾತ್ರೆ ಕೈಗೊಂಡು, ಮೇಘಸ್ಪೋಟದ ಪ್ರವಾಹಕ್ಕೆ ಸಿಲುಕಿರುವ, ಸುರಕ್ಷಿತವಾಗಿರುವ ಯಾತ್ರಾರ್ಥಿಗಳು ಯಾರಾದರೂ ಇದ್ದಲ್ಲಿ ಇವರ ಸಂಬಂಧಿಕರು ಕೂಡಲೇ ಜಿಲ್ಲಾಡಳಿತದ ನಿಯಂತ್ರಣ ಕೊಠಡಿ ಟೋಲ್ ಫ್ರೀ ಸಂಖ್ಯೆ 1077 (0820-2574802) ಕರೆ ಮಾಡಿ ಸಂಬಂಧಪಟ್ಟ ಯಾತ್ರಾರ್ಥಿಗಳ ಮಾಹಿತಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಕೋರಿದ್ದಾರೆ.