ಮಳೆ ಸಂಬಂಧಿತ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ 1077 ಅನ್ನು ಸಂಪರ್ಕಿಸಿ: ಜಿಲ್ಲಾಧಿಕಾರಿ

ಉಡುಪಿ: ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆಯಂತೆ ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮೀನುಗಾರರು ಹಾಗೂ ಪ್ರವಾಸಿಗರು ನದಿ ತೀರ ಮತ್ತು ಸಮುದ್ರಕ್ಕೆ ಇಳಿಯದಂತೆ ಎಚ್ಚರ ವಹಿಸಬೇಕು. ತಗ್ಗು ಪ್ರದೇಶ, ಕೆರೆ, ನದಿತೀರ ಹಾಗೂ ಸಮುದ್ರ ತೀರ ಪ್ರದೇಶಗಳಿಗೆ ಮಕ್ಕಳು ಹೋಗದಂತೆ ಪಾಲಕರು ಜಾಗೃತಿ ವಹಿಸಬೇಕು. ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಮರಗಳ ಕೆಳಗೆ ನಿಲ್ಲದೇ […]
ನಾಟಿ ಕೋಳಿ ಮರಿ ವಿತರಣೆ: ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

ಉಡುಪಿ: ಪಶುಪಾಲನಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾಟಿ ಕೋಳಿ ಮರಿಗಳನ್ನು ವಿತರಿಸಲು ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಕಾರ್ಕಳ ಮತ್ತು ಹೆಬ್ರಿ ತಾಲೂಕು ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು 30 ದಿನಗಳೊಳಗೆ ತೆರವುಗೊಳಿಸಲು ನಗರಸಭೆ ಆದೇಶ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಸಕ್ಕೆ ಯೋಗ್ಯವಲ್ಲದ ಹಾಗೂ ಶಿಥಿಲಗೊಂಡಿರುವ ವಾಸ್ತವ್ಯ ಹಾಗೂ ವಾಣಿಜ್ಯ ಕಟ್ಟಡಗಳನ್ನು ಉಪಯೋಗಿಸುವುದನ್ನು ನಿಷೇಧಿಸಿ ನಗರಸಭೆ ಪೌರಾಯುಕ್ತರು ಆದೇಶ ಹೊರಡಿಸಿದ್ದು, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಮಾಲಕರು ತಮ್ಮ ಸ್ವಂತ ವೆಚ್ಚದಲ್ಲಿ 30 ದಿನಗಳ ಒಳಗೆ ತೆರವುಗೊಳಿಸಬೇಕು. ತಪ್ಪಿದ್ದಲ್ಲಿ ಯಾವುದೇ ಅನಾಹುತ ಮತ್ತು ಜೀವಹಾನಿಗಳು ಸಂಭವಿಸಿದ್ದಲ್ಲಿ ಮಾಲಕರೇ ಜವಾಬ್ದಾರರಾಗಿರುತ್ತಾರೆ ಹಾಗೂ ನಗರಸಭೆಯಿಂದ ನೀಡಲಾಗಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಹಿಂಪಡೆಯಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ವಿವಿಧ ನಿಗಮಗಳಿಂದ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮ ಕರ್ನಾಟಕ ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಹಾಗೂ ಸಾಂಪ್ರದಾಯಿಕ /ಕುಶಲಕರ್ಮಿ ವೃತ್ತಿದಾರರ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಸುವಿಧಾ ತಂತ್ರಾಂಶ https://suvidha.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ 2ಎ ರಲ್ಲಿನ ಮಡಿವಾಳ ಮತ್ತು ಇದರ ಉಪಜಾತಿಗೆ ಸೇರಿದವರ ಕುಲಕಸುಬು / ಸಾಂಪ್ರದಾಯಿಕ ವೃತ್ತಿಗಳಾದ ದೋಭಿ ಘಟಕ, ಡ್ರೈ ಕ್ಲೀನಿಂಗ್ […]
ಡಾ. ವಿ. ಎಸ್. ಆಚಾರ್ಯ ಮತ್ತು ಉಡುಪಿ ನಗರ ಬಸ್ ನಿಲ್ದಾಣದಿಂದ ಸಾರಿಗೆ ಬಸ್ ಗಳ ವೇಳಾಪಟ್ಟಿ

ಉಡುಪಿ: ಉಡುಪಿಯ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೆ.ಎಸ್.ಅರ್.ಟಿ.ಸಿ ನಿಗಮದ ಡಾ. ವಿ. ಎಸ್. ಆಚಾರ್ಯ ಬಸ್ ನಿಲ್ದಾಣದಿಂದ ಹಾಗೂ ಉಡುಪಿ ನಗರ ಬಸ್ ನಿಲ್ದಾಣದಿಂದ ಸಾರ್ವಜನಿಕ ಪ್ರಯಾಣಿಕರ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾ ವ್ಯಾಪ್ತಿಯ ಸ್ಥಳಗಳಾದ ನೆಲ್ಲಿಕಟ್ಟೆ, ಹೆಬ್ರಿ, ಹೊನ್ನಾಳ, ಮಂಚಕಲ್, ಕಾರ್ಕಳ, ಕೊಕ್ಕರ್ಣೆ, ಹೆರ್ಗ, ಶಿರ್ವ-ಮಂಚಕಲ್, ಹಂಪನಕಟ್ಟೆ, ಕೆಳಸಂಕ, ಮಲ್ಪೆಬೀಚ್, ಪಡುಕೆರೆ, ಇತ್ಯಾದಿ ಸ್ಥಳೀಯ ವಲಯಗಳಲ್ಲಿ ಕಾರ್ಯಾಚರಣೆಯಾಗುತ್ತಿರುವ ಸಾರಿಗೆಗಳ ವೇಳಾ ಪಟ್ಟಿ ಹೀಗಿದೆ. ಉಡುಪಿಯಿಂದ ಕಾರ್ಕಳಕ್ಕೆ 6:55, 10:02, 13:47, 16:51, 8:24, 11:32, 14:45, […]