ಗೃಹ ಲಕ್ಷ್ಮಿ ಯೋಜನೆ ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿ ಬೆಂಗಳೂರು : ಈ ಬಾರಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳೊಂದಿಗೆ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ ಇದೀಗ ತಾನು ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದೆ.ಚುನಾವಣೆ ವೇಳೆ ಘೋಷಿಸಿದಂತೆ ಕಾಂಗ್ರೆಸ್‌ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನೀಡುವ ಯೋಜನೆ ಇದಾಗಿದ್ದು, ನಾಳೆಯಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ. […]

ಮೊದಲ ದಿನ ೫. ೭೧ ಲಕ್ಷ ಎರಡನೇ ದಿನ 41.34 ಲಕ್ಷ ಮಹಿಳಾ ಪ್ರಯಾಣಿಕರಿಂದ ಉಚಿತ ಪ್ರಯಾಣ

ಬೆಂಗಳೂರು: ಪಂಚ ಗ್ಯಾರಂಟಿಗಳಲ್ಲಿ ಮೊದಲನೇಯದಾಗಿ ಶಕ್ತಿ ಯೋಜನೆಗೆ ಭಾನುವಾರ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕಾಂಗ್ರೆಸ್​ ಘೋಷಿಸಿದ ಗೊಂದಲ ರಹಿತ ಮೊದಲ ಗ್ಯಾರಂಟಿ ಯೋಜನೆ ಎರಡನೇ ದಿನವೂ ಯಶಸ್ವಿ ಲಕ್ಷಣಗಳನ್ನು ತೋರಿದೆ. ಉಚಿತ ಪ್ರಯಾಣವನ್ನು ಮಹಿಳೆಯರು ಸದುಪಯೋಗ ಪಡಿಸಿಕೊಳ್ಳುತ್ತಿದ್ದು, ಬಸ್​ನಲ್ಲಿ ಭರ್ಜರಿ ತಿರುಗಾಟ ನಡೆಸಿದ್ದಾರೆ. ಈ ಯೋಜನೆ ಮೊದಲ ದಿನ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಎರಡನೇ ದಿನವಾದ ಸೋಮವಾರವೂ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಭಾನುವಾರ ವಿಧಾನಸೌಧದಲ್ಲಿ ಚಾಲನೆ ಸಿಕ್ಕ ಶಕ್ತಿ ಗ್ಯಾರಂಟಿ ಯೋಜನೆಯನ್ನು ರಾಜ್ಯದ ಮಹಿಳೆಯರು […]

ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಸ್ವ-ಉದ್ಯೋಗ ಆರಂಭಿಸಲು ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನ

ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಯಡಿ ಜಿಲ್ಲೆಯಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿರುವ 18 ವರ್ಷ ಮೇಲ್ಪಟ್ಟ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಗರಿಷ್ಠ ಯೋಜನಾ ವೆಚ್ಚ ರೂ. 50.00 ಲಕ್ಷ ಮೊತ್ತದ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಗರಿಷ್ಠ ಯೋಜನಾ ವೆಚ್ಚ ರೂ. 20.00 ಲಕ್ಷ ಮೊತ್ತದ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸಲು ಅವಕಾಶವಿದ್ದು, […]

ವಿವಿಧೆಡೆ ಐ.ಟಿ.ಐ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೈಂದೂರು ಬೈಂದೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಎನ್.ಸಿ.ವಿ.ಟಿ ಸಂಯೋಜನೆ ಹೊಂದಿರುವ ಎಲೆಕ್ಟ್ರಿಷಿಯನ್ ಮತ್ತು ಫಿಟ್ಟರ್ ವೃತ್ತಿಗಳಿಗೆ ಹಾಗೂ ಉದ್ಯೋಗ ಯೋಜನೆಯ ಟಾಟಾ ಟೆಕ್ನಾಲಜೀಸ್ ಸಹಯೋಗದೊಂದಿಗೆ ಇಂಡಸ್ಟ್ರಿಯಲ್ ರೋಬೋಟಿಕ್ಸ್ ಮತ್ತು ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ ಮತ್ತು ಮೆಷಿನ್ ಎಲೆಕ್ಟ್ರಿಕ್ ವೆಹಿಕಲ್ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 7 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ www.cite.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ […]

ವಿಜ್ಞಾನ ಮತ್ತು ತಂತ್ರಜ್ಞಾನ ವಿದ್ಯಾರ್ಥಿ ಹಾಗೂ ಉಪನ್ಯಾಸಕರಿಗೆ ಕಾರ್ಯಾಗಾರ

ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಇವರ ಸಹಯೋಗದೊಂದಿಗೆ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಇಂಟಲೆಕ್ಚುವಲ್ ಪ್ರೋಪರ್ಟಿ ರೈಟ್ಸ್ ಅಂಡ್ ಎಂಟರ್‌ಪ್ರೆನೋರ್‌ಶಿಪ್ ಡೆವಲಪ್‌ಮೆಂಟ್ ವಿಷಯದ ಕುರಿತು ಕಾರ್ಯಾಗಾರವು ಜೂನ್ 19 ರಿಂದ 23 ರ ವರೆಗೆ ಬೆಂಗಳೂರಿನ ಜಿ.ಕೆ.ವಿ.ಕೆ ಆವರಣದ ಪ್ರೊ. ಯು.ಆರ್ ರಾವ್ ವಿಜ್ಞಾನ ಭವನದ […]