ಟ್ಯಾಕ್ಸಿ, ಸರಕು ವಾಹನ, ಆಟೋರಿಕ್ಷಾ ಖರೀದಿಗೆ ಸಿಗಲಿದೆ 2.5 ಲಕ್ಷ ರೂ. ಸಬ್ಸಿಡಿ; ಯಾರಿಗಿದೆ ಅರ್ಹತೆ?

ಕರ್ನಾಟಕದಲ್ಲಿ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದವರಿಗೆ ಸ್ವಯಂ ಉದ್ಯೋಗ ಆರಂಭಿಸಲು ಉತ್ತಮ ಅವಕಾಶ ಒದಗಿಸುವ ಉದ್ದೇಶದಿಂದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (KMDC) ವಿಶೇಷ ವಾಹನ ಖರೀದಿ ಸಹಾಯಧನ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ ಟ್ಯಾಕ್ಸಿ, ಪ್ರಯಾಣಿಕ ಆಟೋರಿಕ್ಷಾ ಹಾಗೂ ಸರಕು ವಾಹನಗಳನ್ನು ಖರೀದಿಸಲು ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುತ್ತದೆ. ಯೋಜನೆ ಕುರಿತು ಒಂದಿಷ್ಟು ಈ ಯೋಜನೆ KMDC ಹಾಗೂ ರಾಷ್ಟ್ರೀಕೃತ/ಅನುಸೂಚಿತ ಬ್ಯಾಂಕ್‌ಗಳ ಸಹಯೋಗದಲ್ಲಿ ಜಾರಿಯಲ್ಲಿದೆ. ಅರ್ಹ ಫಲಾನುಭವಿಗಳು ಬ್ಯಾಂಕ್ ಮೂಲಕ ಸಾಲ ಪಡೆಯುವಾಗ, ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. […]

KSRTC: ಅಪ್ರೈಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಇಚ್ಚಿಸುವ ಎಸ್.ಎಸ್.ಎಲ್.ಸಿ ಅಥವಾ ಐ.ಟಿ.ಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಪ್ರೋಗ್ರಾಮಿಂಗ್ ಮತ್ತು ಸಿಸ್ಟಮ್ ಎಡ್ಮಿನಿಸ್ಟ್ರೇಟಿವ್ ಎಸಿಸ್ಟೆಂಟ್ ವೃತ್ತಿಗಳಲ್ಲಿ ಪಾಸಾದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು  ಎಪ್ರಿಲ್ 21 ರಿಂದ  ಮೇ 8 ರೊಳಗಾಗಿ ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ಕಛೇರಿಗೆ  ಅರ್ಜಿ ಸಲ್ಲಿಸಬೇಕು. ಮೇ 12 ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ಶಿಶಿಕ್ಷು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷಿ ಇಲಾಖೆಯಲ್ಲಿದೆ 890 ಖಾಲಿ ಹುದ್ದೆಗಳು; ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಒಟ್ಟು 890 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಮೇ 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಮಾಹಿತಿ ನೀಡಿದ್ದು, ಕಲ್ಯಾಣ ಕರ್ನಾಟಕ ಹಾಗೂ ಇತರ ಮೂಲ ವೃಂದದ ಅಭ್ಯರ್ಥಿಗಳಿಗೂ ಮೇ 10ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಶುಲ್ಕ ಪಾವತಿಗೆ ಮೇ 12 ಕೊನೆಯ ದಿನವಾಗಿದೆ. […]

Pan Card- ಪ್ಯಾನ್ ಕಾರ್ಡ್ ಸಂಬಂಧಿತ ನಿಯಮಗಳಲ್ಲಿ ಬದಲಾವಣೆ- ವ್ಯವಹಾರ ನಡೆಸುವ ಮುನ್ನ ಈ ವಿಷಯ ತಿಳಿದಿರಲಿ

ಪ್ಯಾನ್ ಕಾರ್ಡ್ (PAN Card) ಎಂದರೆ Permanent Account Number, ಇದು ಆದಾಯ ತೆರಿಗೆ ಇಲಾಖೆ ನೀಡುವ ಒಂದು ವಿಶಿಷ್ಟ ಗುರುತು ಸಂಖ್ಯೆ. ಒಬ್ಬ ವ್ಯಕ್ತಿಯ ಹಣಕಾಸು ವ್ಯವಹಾರಗಳಲ್ಲಿ ಪಾರ್ದರ್ಶಕತೆ ತರುವುದು, ತೆರಿಗೆ ವ್ಯವಸ್ಥೆಯನ್ನು ಸುವ್ಯವಸ್ಥಿತಗೊಳಿಸಲು ಹಾಗೂ ಆರ್ಥಿಕ ಅವ್ಯವಹಾರಗಳನ್ನು ತಡೆಗಟ್ಟಲು ಪ್ಯಾನ್ ಕಾರ್ಡ್ ಮುಖ್ಯ ಪಾತ್ರವಹಿಸುತ್ತದೆ. ಪ್ರಸ್ತುತ ಹೊಸ ಅದಾಯ ತೆರಿಗೆ ಕಾನೂನಿನ ಸೆಕ್ಷನ್ 159ನ್ನು (ಹಳೆಯ ಸೆಕ್ಷನ್ 114ಬಿ), ಯಂತೆ ಪ್ಯಾನ್ ಕಾರ್ಡ್ ಬಳಕೆಯ ಸಂದರ್ಭ ಹಾಗೂ ಆರ್ಥಿಕ ವ್ಯವಹಾರಗಳ ಮಿತಿಯಲ್ಲಿ ಹಲವಾರು ಬದಲಾವಣೆಗಳಾಗಿವೆ. […]

ನಿಮ್ಮ ಮರಣದ ನಂತರವೂ ನಿಮ್ಮ ಕುಟುಂಬದವರು ನೆಮ್ಮದಿಯಿಂದ ಜೀವನ ನಡೆಸಬೇಕೇ? ಪೋಸ್ಟ್ ಆಫೀಸ್ ನ ಈ ಸ್ಕೀಮ್ ಮಾಡಿಸಿ- ಇಲ್ಲದಿದ್ದರೆ ಖಂಡಿತವಾಗಿಯೂ ಪರಿತಪಿಸುತ್ತೀರಿ

ಪೋಸ್ಟ್ ಆಫೀಸ್ ಅಂತಂದ್ರೆ ಕೇವಲ ಮನೆ ಮನೆಗೆ ಅಂಚೆ, ಮನಿ ಆರ್ಡರ್ ಹಂಚುವ ಆಫೀಸ್ ಎಂಬ ಮನೋಭಾವ ಇನ್ನೂ ಹಲವರಲ್ಲಿದೆ. ಆದರೆ ಇಲ್ಲಿರುವಂತಹಾ ಲಾಭದಾಯಕ ಹಣದ ಉಳಿತಾಯ ಯೋಜನೆಗಳ ಬಗ್ಗೆ ಹೆಚ್ಚಿನವರಿಗೆ ಅರಿವಿಲ್ಲ. ಅದರಲ್ಲೂ ನಿಮ್ಮ ಮರಣಾ ನಂತರವೂ ನಿಮ್ಮ ಕುಟುಂಬದವರಿಗೆ ಹಣ ಸಿಗುವಂತಹಾ ಈ ಇನ್ಸೂರೆನ್ಸ್ ಪ್ಲಾನ್ ಬಗ್ಗೆ ನೀವು ಚಿಂತಿಸಲೇಬೇಕು. ನಿಮ್ಮ ಕುಟುಂಬದಲ್ಲಿ ನೀವೊಬ್ಬರೇ ದುಡಿಯುವವರಾಗಿದ್ರೆ ಖಂಡಿತಾ ಪೋಸ್ಟಲ್ ಲೈಫ್ ಇನ್ಸೂರೆನ್ಸ್ ನೀವು ಮಾಡಿಸಲೇಬೇಕು. ಏನಿದು ಪೋಸ್ಟಲ್ ಲೈಫ್ ಇನ್ಸೂರೆನ್ಸ್ ಗ್ರಾಮೀಣ ಜನತೆಗಾಗಿಯೇ, ಅಂಚೆ […]