ಮೀನುಗಾರರ ಮಕ್ಕಳ ಉನ್ನತ ಶಿಕ್ಷಣದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ಮುಖ್ಯಮಂತ್ರಿಗಳು ಘೋಷಿಸಿದ್ದು, ಈ ಯೋಜನೆಯ ಸೌಲಭ್ಯ ಪಡೆಯಲು ಮೀನುಗಾರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. 8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬಂಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿಂದ […]
ಪ.ಜಾ/ಪ.ಪ ಪತ್ರಿಕೋದ್ಯಮ ಪದವೀಧರರಿಗೆ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಉಡುಪಿ ಜಿಲ್ಲಾ ಕಚೇರಿಗೆ 2022-23 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ 15 […]
ಮತ್ಸ್ಯ ಸಂಪದ ಯೋಜನೆ: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಮಹಿಳೆಯರಿಂದ ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ 2022-23 ನೇ ಸಾಲಿಗೆ ನೀಡಲಾದ ಗುರಿಗಳಿಗೆ ತಕ್ಕಂತೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಅರ್ಹ ಆಸಕ್ತ ಫಲಾನುಭವಿಗಳಿಂದ ಒಳನಾಡು ಮೀನುಗಾರಿಕೆ ಮತ್ತು ಜಲಕೃಷಿ ಅಭಿವೃದ್ಧಿ, ಕಡಲ ಕೃಷಿ ಮತ್ತು ಕಡಲ ಕಳೆ ಕೃಷಿಗೆ ಸೇರಿದಂತೆ ಸಮುದ್ರ ಮೀನುಗಾರಿಕೆ ಅಭಿವೃದ್ಧಿ, ಅಲಂಕಾರಿಕ ಮತ್ತು ಮನೋರಂಜನೆ ಮೀನುಗಾರಿಕಾ ಅಭಿವೃದ್ಧಿ, ಅಲಂಕಾರಿಕ ಮೀನು/ಅಕ್ವೇರಿಯಂ ಮಾರಾಟ ಮಳಿಗೆ ಸೇರಿದಂತೆ ಚಿಲ್ಲರೆ ಮೀನು ಮಾರಾಟ ಮಳಿಗೆಗಳ ನಿರ್ಮಾಣ , ಆಳಸಮುದ್ರದ ಮೀನುಗಾರಿಕೆಗೆ ಅಭಿವೃದ್ದಿ ಮತ್ತಿತರ […]
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಅನುಸೂಚಿತ ಜಾತಿಗಳಿಗೆ ಸಹಾಯಧನ ವಿತರಣೆ: ಅರ್ಜಿ ಆಹ್ವಾನ

ಕಾರ್ಕಳ: ಕಾರ್ಕಳ ಪುರಸಭೆಯ ವತಿಯಿಂದ 2021-22 ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಶೇ.24.10 ರ ಅನುದಾನದಡಿ ಅನುಸೂಚಿತ ಜಾತಿಯವರ ಮನೆ ಮೇಲ್ಛಾವಣಿ ದುರಸ್ಥಿ, ಸ್ವ-ಉದ್ಯೋಗಕ್ಕೆ ಸಹಾಯಧನ, ಮನೆ ನಿರ್ಮಾಣಕ್ಕೆ ಸಹಾಯಧನ, ಆರೋಗ್ಯ ವೈದ್ಯಕೀಯ ವೆಚ್ಚ, ರಸ್ತೆ ಅಪಘಾತ, ಶಸ್ತ್ರ ಚಿಕಿತ್ಸೆಗಾಗಿ ವೈದ್ಯಕೀಯ ಸಹಾಯಧನ ಹಾಗೂ ಸಣ್ಣ ಉದ್ದಿಮೆ ಮಾಡುವ ಫಲಾನುಭವಿಗಳಿಗೆ ಸಹಾಯಧನ, ಶೇ. 7.25 ರ ಅನುದಾನದಡಿ ಇತರೆ ಬಡಜನರ ಕಲ್ಯಾಣಾಭಿವೃದ್ಧಿಗಾಗಿ ಮನೆ ಮೇಲ್ಛಾವಣಿ ದುರಸ್ಥಿ, ಆರೋಗ್ಯ ವೈದ್ಯಕೀಯ ವೆಚ್ಚಕ್ಕೆ ಸಹಾಯಧನ ಹಾಗೂ ವೈಯಕ್ತಿಕ […]
ಜೇನುಗಾರಿಕಾ ತರಬೇತಿಗೆ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ನವೆಂಬರ್ 14 ರಿಂದ 2023 ಫೆಬ್ರವರಿ 15 ರ ವರೆಗೆ ನಡೆಯಲಿರುವ 3 ತಿಂಗಳ ಜೇನುಗಾರಿಕೆ ತರಬೇತಿಗೆ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ, 18 ರಿಂದ 35 ವರ್ಷ ವಯಸ್ಸಿನ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ತರಬೇತಿ ಬಯಸುವ ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು, ಸ್ವಂತ ಸಾಗುವಳಿ ಮಾಡುತ್ತಿರಬೇಕು. ಅರ್ಜಿ ಸಲ್ಲಿಸಲು ನವೆಂಬರ್ 5 ಕೊನೆಯ ದಿನ. […]