ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ನಡೆದಿರುವ ಸಿಬಿಐ ದಾಳಿಗೂ ಉಪ ಚುನಾವಣೆಗೂ ಯಾವುದೇ ಸಂಬಂಧ ಇಲ್ಲ. ಇದು ರಾಜಕೀಯ ಪ್ರೇರಿತ ದಾಳಿಯಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಅವರ ಮೇಲೆ ಆದಾಯ ತೆರಿಗೆ ಹಾಗೂ ಇಡಿ ಈಗಾಗಲೇ ದಾಳಿ ನಡೆಸಿದೆ. ಇದು ಅದರ ಮುಂದುವರಿದ ಭಾಗ ಆಗಿರಬಹುದು. ಆದ್ದರಿಂದ ಇದಕ್ಕೆ ರಾಜಕೀಯ ಬಣ್ಣ ಬಳಿಯುವುದು ಅಗತ್ಯವಿಲ್ಲ ಎಂದರು.
ಇಂಥ ಸೂಕ್ಷ್ಮ ವಿಚಾರದಲ್ಲಿ ರಾಜಕೀಯ ಮಾತನಾಡುವುದು ಸರಿಯಲ್ಲ. ಇದೊಂದು ರಾಜಕೀಯ ಪ್ರೇರಿತ ಎಂದು ಹೇಳುವ ಮೂಲಕ ಕೆಲವರು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.