ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಇಂದು ಬೆಳಿಗ್ಗೆ 6ಗಂಟೆಗೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿ ಇರುವ ಮನೆಗೆ ಸಿಬಿಐ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಐವರು ಸಿಬಿಐ ಅಧಿಕಾರಗಳ ತಂಡ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರಿಸಿದ್ದಾರೆ. ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.
ಕಳೆದ ವರ್ಷದ ಸೆಪ್ಟೆಂಬರ್ ನಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆಗ ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಅವರು ಅರೆಸ್ಟ್ ಆಗಿದ್ದರು. ಬಳಿಕ ಕೋರ್ಟ್ ನಿಂದ ಜಾಮೀನಿನ ಬಿಡುಗಡೆಯಾಗಿದ್ದರು.ಇದೀಗ ಮತ್ತೆ ಸಿಬಿಐ ಡಿಕೆಶಿಗೆ ಶಾಕ್ ನೀಡಿದೆ.
ಡಿಕೆಶಿ ಸಹೋದರ ಸಂಸದ ಡಿ.ಕೆ. ಸುರೇಶ್ ಮನೆ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶೋಧ ಕಾರ್ಯ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.