ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿಗೆ ಪರೀಕ್ಷೆ ರದ್ದುಗೊಳಿಸಿ, 12 ನೇ ತರಗತಿಗೆ ಪರೀಕ್ಷೆಗಳನ್ನು ಮುಂದೂಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಸಿಬಿಎಸ್ಇ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿಪಕ್ಷಗಳು ಪರೀಕ್ಷೆಗಳನ್ನು ರದ್ದು ಮಾಡುವಂತೆ ಒತ್ತಾಯಿಸಿದ್ದವು. ಈ ಹಿನ್ನೆಲೆ ಇಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್, ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಪ್ರಮುಖ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ನಂತರ ರಮೇಶ್ ಪೋಖ್ರಿಯಾಲ್ ಸಿಬಿಎಸ್ಇ ಬೋರ್ಡ್ ಜೊತೆಗೆ ಸಭೆ ನಡೆಸಿತ್ತು. ಸಭೆಯಲ್ಲಿ ಅಂತಿಮವಾಗಿ 10ನೇ ತರಗತಿಗೆ ಸಿಬಿಎಸ್ಇ ಪರೀಕ್ಷೆ ರದ್ದು ಮಾಡುವುದು ಮತ್ತು 12 ನೇ ತರಗತಿಗೆ ಪರೀಕ್ಷೆಗಳನ್ನ ಮುಂದೂಡಿಕೆ ಮಾಡಿ ಕೇಂದ್ರ ಸರ್ಕಾರ ನಿರ್ಧರಿಸಿದೆ.