udupixpress
Home Trending ಡ್ರಗ್ಸ್ ನಂಟಿನ ಆರೋಪ: ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ಪೊಲೀಸರ ದಾಳಿ, ಶೋಧಕಾರ್ಯ

ಡ್ರಗ್ಸ್ ನಂಟಿನ ಆರೋಪ: ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ಪೊಲೀಸರ ದಾಳಿ, ಶೋಧಕಾರ್ಯ

ಬೆಂಗಳೂರು: ಡ್ರಗ್ಸ್ ಜಾಲದ ನಂಟಿನ ಆರೋಪದಡಿ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಮನೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಇಂದಿರಾನಗರದಲ್ಲಿ ಇರುವ ಫ್ಲ್ಯಾಟ್ ಗೆ ಇಂದು ಬೆಳಿಗ್ಗೆ 6.30ಕ್ಕೆ ಪೊಲೀಸರು ದಾಳಿ ನಡೆಸಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಈ ವೇಳೆ ಸಂಜನಾಗೆ ಸೇರಿದ ಕಾರನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ಹಾಗೆ ಸಂಜನಾಳಿಗೆ ಸೇರಿದ ಮೂರು ಮೊಬೈಲ್ ಗಳನ್ನು ಹಾಗೂ ಮನೆಯಲ್ಲಿ ಸಿಕ್ಕಿರುವ ವಸ್ತುಗಳನ್ನು ವಶಕ್ಕೆ ಪಡೆದು ತಪಾಸಣೆ ನಡೆಸುತ್ತಿದ್ದಾರೆ.

ಇದೀಗ ಸಂಜನಾ ಪೊಲೀಸರ ವಿಚಾರಣೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ಮಾಹಿತಿ‌ ಲಭ್ಯವಾಗಿದೆ. ಸಂಜನಾ ಸೂಕ್ತ ಮಾಹಿತಿ ನೀಡುವಲ್ಲಿ ವಿಫಲವಾದರೆ ಆಕೆಯನ್ನು ಹೆಚ್ಚಿನ ಮಾಹಿತಿಗಾಗಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ ಹೇಳಲಾಗುತ್ತಿದೆ.

 

ಹೈಫೈ ಪಾರ್ಟಿ ಮುಳುವಾಯ್ತಾ.?
ಸಂಜನಾ ಐಷಾರಾಮಿ ಪಾರ್ಟಿಗಳಲ್ಲಿ ಭಾಗಿಯಾಗಿದ್ದರು. ಬೆಂಗಳೂರು ಸೇರಿದಂತೆ ವಿದೇಶಗಳಲ್ಲಿ ನಡೆಸುತ್ತಿದ್ದ ನೂರಾರು ಪಾರ್ಟಿಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀಲಂಕಾದಲ್ಲಿ ನಡೆದ ಕ್ಯಾಸಿನೋ ಪಾರ್ಟಿಯಲ್ಲಿ ಆಪ್ತ ರಾಹುಲ್ ಜೊತೆ ಭಾಗಿಯಾಗಿದ್ದರು. ಈ ಪಾರ್ಟಿಗಳಲ್ಲಿ ಡ್ರಗ್ಸ್ ಪೂರೈಕೆ, ಸೇವನೆ ಆಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ ಸಂಜನಾ ಆಪ್ತರಾದ ಆರೋಪಿ ರಾಹುಲ್ ಹಾಗೂ ಪೃಥ್ವಿ‌ ಶೆಟ್ಟಿ ಪಾರ್ಟಿಗಳಲ್ಲಿ ಡ್ರಗ್ಸ್ ಪೊರೈಕೆ, ಸೇವನೆ ಆಗುತ್ತಿತ್ತು ಎಂದು ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಇಂದು ಸಂಜನಾಳ ಮನೆ ಮೇಲೆ ದಾಳಿ ನಡೆಸಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಸಂಜನಾಳ ಬಂಧನ ಸಾಧ್ಯತೆ.?
ಸಂಜನಾಗೆ ಡ್ರಗ್ಸ್ ಜಾಲದೊಂದಿಗೆ ನಂಟಿದೆ ಎಂಬುವುದಕ್ಕೆ ಸಿಸಿಬಿಗೆ ಈಗಾಗಲೇ ತಾಂತ್ರಿಕ ಸಾಕ್ಷ್ಯಗಳು ಲಭ್ಯವಾಗಿದೆ. ಹಾಗೆ ಸಂಜನಾಳ ಆಪ್ತರಾದ ಅರೋಪಿ ರಾಹುಲ್ ಹಾಗೂ ಪೃಥ್ವಿ ಶೆಟ್ಟಿ ಹೇಳಿಕೆಗಳ ಆಧಾರದ ಮೇಲೆ ಸಂಜನಾಳನ್ನು ಪೊಲೀಸರು‌ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

error: Content is protected !!