ಉಡುಪಿ: ಬಕ್ರೀದ್ ಎಂದೂ ಕರೆಯಲ್ಪಡುವ ಇಸ್ಲಾಮಿಕ್ ಹಬ್ಬವಾದ ಈದ್-ಉಲ್-ಅಧಾ ಹಬ್ಬವನ್ನುಇಸ್ಲಾಮಿಕ್ ಚಂದ್ರನ ತಿಂಗಳ ಧು ಅಲ್-ಹಿಜ್ಜಾದ ಹತ್ತನೇ ದಿನದಂದು ಆಚರಿಸಲಾಗುತ್ತದೆ. ಬಕ್ರೀದ್ ಹಬ್ಬವು ತ್ಯಾಗದ ಸಂದೇಶವನ್ನು ಸಾರುತ್ತದೆ.
ಉಡುಪಿಯಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿರುವ ವಿವಿಧ ಮಸೀದಿಗಳಲ್ಲಿ ಈದ್ ಪ್ರಯುಕ್ತ ವಿಶೇಷ ನಮಾಜ್ ಸಲ್ಲಿಸಲಾಯಿತು. ಬಳಿಕ ಎಲ್ಲ ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಉಡುಪಿಯ ಜಾಮಿಯಾ ಮತ್ತು ಅಂಜುಮಾನ್ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ಹಾಗೂ ಮೌಲಾನಾ ಇನಾಯತುಲ್ಲಾ ರಝ್ವಿ ಮುಂದಾಳುತ್ವದಲ್ಲಿ ನಮಾಝ್ ಸಲ್ಲಿಸಲಾಯಿತು.
ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಖುತ್ಬಾ ಪಾರಾಯಣ ನಡೆಯಿತು.
ಕುಂದಾಪುರ ಜುಮಾ ಮಸೀದಿಯಲ್ಲಿ ಮೌಲಾನಾ ಕರಾರ್ ಹುಸೇನ್ ನೇತೃತ್ವದಲ್ಲಿ ನಮಾಝ್ ನಡೆಯಿತು.
ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ಆಯಾಯಾ ಮಸೀದಿಗಳ ಧರ್ಮಗುರುಗಳ ನೇತೃತ್ವದಲ್ಲಿ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು.