ದೇಶದಾದ್ಯಂತ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ವಿವಿಧ ಪ್ರಾದೇಶಿಕ ಮತ್ತು ಶಾಖಾ ಕಚೇರಿಗಳಲ್ಲಿ ಖಾಲಿ ಇರುವ ವಿಶೇಷ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ: 115
ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು.
ವೇತನ ಶ್ರೇಣಿ: ಇತರೆ ಭತ್ಯೆಗಳು ಸೇರಿದಂತೆ ಮಾಸಿಕ ₹ 36,700 ಮೂಲ ವೇತನ ಪಡೆಯಬಹುದು.
ವಯಸ್ಸು: ಕನಿಷ್ಠ 18 ವರ್ಷಗಳು, ಗರಿಷ್ಠ 30 ವರ್ಷಗಳ ವಯೋಮಿತಿಯಲ್ಲಿ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಆದಾಗ್ಯೂ ಸರ್ಕಾರಿ ನಿಯಮಾವಳಿಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ವಯೋಮಿತಿ ಸಡಿಲಿಕೆ: ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.
ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ₹ 175. ಇತರೆ ಅಭ್ಯರ್ಥಿಗಳಿಗೆ ₹ 850 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡುವುದು.
ಅರ್ಜಿಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್ಸೈಟ್ https://www.centralbankofindia.co.in/en ಗೆ ಲಾಗಿನ್ ಆಗಿ ಅರ್ಜಿಗಳನ್ನು ಸಲ್ಲಿಸಬಹುದು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 2021ರ ಡಿಸೆಂಬರ್ 17 ಕೊನೆ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಎಸ್ಬಿಐ ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ನೋಡಬಹುದು. ಈ ಕೆಳಗೆ ಅಧಿಸೂಚನೆ ಲಿಂಕ್ ನೀಡಲಾಗಿದೆ.
ವೆಬ್ಸೈಟ್: https://www.centralbankofindia.co.in/en