12ನೇ ತರಗತಿ ಪರೀಕ್ಷೆ ರದ್ದುಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಕಳೆದ ವರ್ಷದಂತೆ ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಇಚ್ಛಿಸಿದರೆ, ಸಿಬಿಎಸ್‌ಇ ಅವರಿಗೆ ಪರೀಕ್ಷೆಗೆ ಅವಕಾಶ ಕಲ್ಪಿಸುತ್ತದೆ. ಆದರೆ, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಬಳಿಕ ಪರೀಕ್ಷೆ ನಡೆಸುವುದು ಸಾಧ್ಯವಾಗಲಿದೆ ಎಂದು ಸರ್ಕಾರ ತಿಳಿಸಿದೆ.

ಶಾಲೆಗಳು, ಪ್ರಾಂಶುಪಾಲರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ಪರೀಕ್ಷೆಯ ನಡೆಸುವುದರ ಬಗ್ಗೆ ಸಲಹೆಗಳನ್ನು ಕೇಳಲಾಗಿತ್ತು. ಹಲವು ರಾಜ್ಯಗಳು ಹಾಗೂ ವಿದ್ಯಾರ್ಥಿಗಳ ಪಾಲಕರು ಪರೀಕ್ಷೆ ರದ್ದು ಪಡಿಸುವಂತೆ ಅಭಿಪ್ರಾಯವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.