ಗ್ರಾಹಕರಿಗೆ ಶುಭ ಸುದ್ದಿಯ ಸೂಚನೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 10 ರೂ ನಷ್ಟು ಇಳಿಸಲು ಕೇಂದ್ರ ಸರ್ಕಾರದ ಚಿಂತನೆ

ನವದೆಹಲಿ: ದೇಶಾದ್ಯಂತ ಗ್ರಾಹಕರಿಗೆ ಸಂತೋಷದ ಸುದ್ದಿಯಾಗಿ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಭಾರೀ ಕಡಿತವನ್ನು ಮಾಡಲು ಯೋಜಿಸುತ್ತಿದೆ. ಈ ಕ್ರಮವು ಮುಂದಿನ ವರ್ಷ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಲಿರುವ 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬರುವ ನಿರೀಕ್ಷೆಯಿದೆ.

ಪ್ರಸ್ತುತ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ, ಇದು ಭಾರತದಲ್ಲಿ ಇಂಧನ ಬೆಲೆಗಳನ್ನು ಕಡಿತಗೊಳಿವ ನಿರ್ಧಾರಕ್ಕೆ ಕಾರಣವಾಗಿದೆ. ಕೇಂದ್ರ ಹಣಕಾಸು ಸಚಿವಾಲಯವು ಶೀಘ್ರದಲ್ಲೇ ಬೆಲೆ ಕಡಿತವನ್ನು ಮಾಡಲಿದೆ ಎಂದು ನ್ಯೂಸ್ 18 ವರದಿ ತಿಳಿಸಿದೆ.

ಪೆಟ್ರೋಲ್ ಮತ್ತು ಡೀಸೆಲ್ ಎರಡರಲ್ಲೂ ರೂ.10ರಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಕೇಂದ್ರ ಅಬಕಾರಿ ನೀತಿಯನ್ನು ಕ್ರಮವಾಗಿ ರೂ 8 ಮತ್ತು ರೂ 6 ರಷ್ಟು ಕಡಿತಗೊಳಿಸುವ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕಡಿತಗೊಳಿಸಲು ಕೇಂದ್ರವು ನಿರ್ಧರಿಸಿದ ಸುಮಾರು ಎರಡು ವರ್ಷಗಳ ನಂತರ ಈ ಕ್ರಮವು ಬಂದಿದೆ.

ಕೋವಿಡ್ ಸಾಂಕ್ರಾಮಿಕ ರೋಗ ಮತ್ತು ರಷ್ಯಾ-ಉಕ್ರೇನ್ ಯುದ್ಧದಿಂದ ಉಂಟಾದ ಮಾರುಕಟ್ಟೆಯಲ್ಲಿನ ಏರಿಳಿತಗಳಿಂದಾಗಿ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ ದಾಖಲಾಗಿತ್ತು. ಭಾರತದಾದ್ಯಂತಪ್ರಮುಖ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ರೂ 110 ರ ಗಡಿ ದಾಟಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯು ಪ್ರಸ್ತುತ ಪ್ರತಿ ಬ್ಯಾರೆಲ್‌ಗೆ $ 70 ರಿಂದ $ 80 ರ ದರದಲ್ಲಿ ವಹಿವಾಟು ನಡೆಸುತ್ತಿದೆ, ಹಾಗಾಗಿ ಇಂಧನ ಬೆಲೆ ಕಡಿತದ ಪರವಾಗಿ ಪ್ರಧಾನಿ ಕಚೇರಿಗೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ನ್ಯೂಸ್ 18 ವರದಿ ತಿಳಿಸಿದೆ.