ಉಡುಪಿ: ಭಾರತ ಸರಕಾರದ ಬಂದರು, ಜಲಮಾರ್ಗ ಹಾಗೂ ಆಯುಷ್ ಇಲಾಖೆ ಸಚಿವ ಸರ್ಬಾನಂದ ಸೋನೊವಾಲ್ ರವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ರವರು ಸ್ವಾಗತಿಸಿ ಶಾಲು ಹೊದಿಸಿ , ಶ್ರೀಕೃಷ್ಣನ ಪ್ರಸಾದ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಪರ್ಯಾಯ ಮಠದ ವ್ರಜನಾಥ ಆಚಾರ್ಯ, ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಮೊದಲಾದವರು ಉಪಸ್ಥಿತರಿದ್ದು ಸಹಕರಿಸಿದರು.