ಕಬ್ಬು ಬೆಳೆಗಾರರಿಗೆ ಬಂಪರ್ ಕೊಡುಗೆ: ಕೇಂದ್ರದಿಂದ ಕ್ವಿಂಟಲ್‌ಗೆ 305 ರೂಗಳ ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆ ನೀಡಲು ಅನುಮೋದನೆ

ನವದೆಹಲಿ: ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು 2022-23 (ಅಕ್ಟೋಬರ್-ಸೆಪ್ಟೆಂಬರ್)ನೇ ಸಾಲಿನ ಸಕ್ಕರೆ ಋತುವಿಗೆ ಕಬ್ಬಿನ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯನ್ನು ಅನುಮೋದಿಸಿದೆ. ಕಬ್ಬು ಬೆಳೆಗಾರರಿಗೆ ಕ್ವಿಂಟಲ್‌ಗೆ 305 ರೂಪಾಯಿಗಳ ಅತ್ಯಧಿಕ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಇದಾಗಿದೆ.

2022-23 ರ ಸಕ್ಕರೆ ಋತುವಿನ ಎಫ್‌ಆರ್‌ಪಿಯು ಪ್ರಸ್ತುತ ಸಕ್ಕರೆ ಋತು 2021-22 ಕ್ಕಿಂತ 2.6 ಶೇಕಡಾ ಹೆಚ್ಚಾಗಿದೆ. ಕಬ್ಬು ಬೆಳೆಗಾರರಿಗೆ ಖಾತರಿ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಕಬ್ಬಿನ ಎಫ್‌ಆರ್‌ಪಿ ನಿಗದಿಪಡಿಸಲಾಗಿದೆ.ಈ ನಿರ್ಧಾರವು ಐದು ಕೋಟಿ ಕಬ್ಬು ಬೆಳೆಗಾರರು ಮತ್ತು ಅವರ ಅವಲಂಬಿತರಿಗೆ ಮತ್ತು ಸಕ್ಕರೆ ಕಾರ್ಖಾನೆಗಳಲ್ಲಿ ಮತ್ತು ಸಂಬಂಧಿತ ಪೂರಕ ಚಟುವಟಿಕೆಗಳಲ್ಲಿ ಉದ್ಯೋಗದಲ್ಲಿರುವ ಐದು ಲಕ್ಷ ಕಾರ್ಮಿಕರಿಗೆ ಪ್ರಯೋಜನವನ್ನು ನೀಡಲಿದೆ.

ಕಳೆದ ಎಂಟು ವರ್ಷಗಳಲ್ಲಿ, ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರವು ನ್ಯಾಯಯುತ ಮತ್ತು ಲಾಭದಾಯಕ ಬೆಲೆಯನ್ನು ಶೇಕಡಾ 34 ಪಟ್ಟು ಹೆಚ್ಚಿಸಿದೆ.