ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ ( ಸಿಇಟಿ) ಗೆ ಹೈಕೋರ್ಟ್ ಅನುಮತಿ ನೀಡಿದೆ. ಆದ್ದರಿಂದ ನಿಗದಿಯಂತೆ ಜುಲೈ 30 ಮತ್ತು 31ರಂದು ಸಿಇಟಿ ಪರೀಕ್ಷೆ ನಡೆಯಲಿದೆ.
ಸಿಇಟಿ ಮುಂದೂಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಹೈಕೋರ್ಟ್ ಸಿಇಟಿ ಮುಂದೂಡಲು ನಿರಾಕರಿಸಿದೆ.
ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಯಾವುದೇ ಪರೀಕ್ಷಾರ್ಥಿಗಳಿಗೆ ಅವಕಾಶ ನಿರಾಕರಿಸಬಾರದು ಎಂದು ಹೈಕೋರ್ಟ್ ಆದೇಶದಲ್ಲಿ ಸೂಚಿಸಿದೆ.












