ವಿಚಾರಣೆ ವೇಳೆ ಅಸ್ವಸ್ಥಳಾದ ಚೈತ್ರಾ ಕುಂದಾಪುರ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ ಪೂಜಾರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಪ್ರಥಮ ಆರೋಪಿಯಾಗಿರುವ ಚೈತ್ರಾ ಕುಂದಾಪುರ ತೀವ್ರ ಅಸ್ವಸ್ಥರಾದ ಹಿನ್ನೆಲೆ ಅಧಿಕಾರಿಗಳು ಇದೀಗ ಆಕೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಿಸಿಬಿ ಕಚೇರಿ ಬಳಿ ಕುಸಿದು ಬಿದ್ದ ಚೈತ್ರಾ ; ವಿಕ್ಟೋರಿಯ ಆಸ್ಪತ್ರೆಯ ಐಸಿಯು ಗೆ ಶಿಪ್ಟ್!

ಚೈತ್ರಾ ಮತ್ತು ಇತರರನ್ನು ಕೋರ್ಟ್‌ 10 ದಿನಗಳ ಅವಧಿಗೆ ಸಿಸಿಬಿ ಕಸ್ಟಡಿಗೆ ಒಪ್ಪಿಸಿತ್ತು. ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ ವಿಚಾರಣೆಗಾಗಿ ಕರೆತಂದಿದ್ದಾರೆ. 45 ನಿಮಿಷದ ವಿಚಾರಣೆ ವೇಳೆ ಆಕೆ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದಾಳೆ. ಚಿಕಿತ್ಸೆಗಾಗಿ ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.